ಕೋಲಾರ | ಇಂದಿರಾ ಗಾಂಧಿ ಸಾಧನೆಗಳು ದೇಶದ ಅಭಿವೃದ್ಧಿಗೆ ಭದ್ರ ಬುನಾದಿ: ಎಂಎಲ್ಸಿ ಅನಿಲ್ ಕುಮಾರ್

Date:

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದ ಅಭಿವೃದ್ಧಿಗೆ ಹಲವು ಮಹತ್ವದ ಕೊಡುಗೆಗಳನ್ನು ನೀಡಿದ್ದು, ಬಡವರು, ರೈತರು ಹಾಗೂ ದುರ್ಬಲ ವರ್ಗಗಳ ಏಳಿಗೆಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಹೇಳಿದರು.

- Advertisement -

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 42ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಂದೆ ಜವಾಹರಲಾಲ್ ನೆಹರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಆಡಳಿತದ ಅನುಭವ ಪಡೆದ ಇಂದಿರಾ ಗಾಂಧಿ, ನಂತರ ದೇಶದ ಪ್ರಧಾನಿಯಾಗಿ ದೀರ್ಘಕಾಲ ಸೇವೆ ಸಲ್ಲಿಸಿದರು. ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಆಡಳಿತ ನಡೆಸಿದ ಅವರು, ತಮ್ಮ ದಿಟ್ಟ ನಿರ್ಧಾರಗಳಿಂದ ಉಕ್ಕಿನ ಮಹಿಳೆ ಎಂಬ ಖ್ಯಾತಿ ಗಳಿಸಿದ್ದರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಬ್ಯಾಂಕ್‌ಗಳ ರಾಷ್ಟ್ರೀಕರಣದ ಮೂಲಕ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಾಮಾನ್ಯ ಜನರಿಗೂ ಮುಕ್ತಗೊಳಿಸಿದರು. ಬಡವರಿಗೆ ಆಹಾರ ಭದ್ರತೆ ಕಲ್ಪಿಸಲು ಸಾರ್ವಜನಿಕ ಪಡಿತರ ವ್ಯವಸ್ಥೆಯನ್ನು ಬಲಪಡಿಸಿದರು. ಬಡವರಿಗಾಗಿ ಮನೆ, ಪಿಂಚಣಿ ಸೇರಿದಂತೆ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದರು. 20 ಅಂಶಗಳ ಕಾರ್ಯಕ್ರಮದ ಮೂಲಕ ದೇಶದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದರು. ಭೂ ಸುಧಾರಣೆಗಳ ಮೂಲಕ ಉಳುವವನೇ ಭೂಮಿಯ ಒಡೆಯನಾಗಬೇಕು ಎಂಬ ಆಶಯಕ್ಕೆ ಬಲ ನೀಡಿದ ಮಹಾನ್ ನಾಯಕಿ ಎಂದರು

ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾರತಕ್ಕೆ ಜಯ ತಂದುಕೊಡುವುದರ ಜತೆಗೆ ಬಾಂಗ್ಲಾದೇಶ ಉದಯಕ್ಕೂ ಕಾರಣರಾದರು. ದೇಶದ ಏಕತೆ ಮತ್ತು ಸಮಗ್ರತೆಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಮಹಾನ್ ನಾಯಕಿ ಇಂದಿರಾ ಗಾಂಧಿ. ಇನ್ನೂ ಹಲವು ವರ್ಷ ದೇಶಕ್ಕೆ ನಾಯಕತ್ವ ನೀಡಬೇಕಿದ್ದ ಅವರನ್ನು ಅಂಗರಕ್ಷಕರ ಗುಂಡಿಗೆ ಬಲಿಯಾಗುವಂತೆ ಮಾಡಲಾಯಿತು ಎಂದು ಸ್ಮರಿಸಿದರು.

ಇಂದಿರಾ ಗಾಂಧಿ ಅವರ ಹೆಸರಿನಲ್ಲಿಯೇ ಕಾಂಗ್ರೆಸ್ ಪಕ್ಷ ಹಲವು ಚುನಾವಣೆಗಳನ್ನು ಎದುರಿಸಿದ ಇತಿಹಾಸವಿದೆ. ಪ್ರಸ್ತುತ ಜಾತಿ, ಧರ್ಮದ ಹೆಸರಿನಲ್ಲಿ ರಾಜಕೀಯ ನಡೆಯುತ್ತಿರುವ ಸಂದರ್ಭದಲ್ಲಿ ಅವರ ಜಾತ್ಯತೀತ, ಜನಪರ ಚಿಂತನೆಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಕಾಂಗ್ರೆಸ್ ಕಾರ್ಯಕರ್ತರು ಅವರ ಹೆಜ್ಜೆಗುರುತುಗಳನ್ನು ಅನುಸರಿಸಬೇಕು ಎಂದರು.


ಇದನ್ನು ಓದಿದ್ದೀರಾ..?ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ಸರ್, ಹಿರಿಯ ಮುಖಂಡ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಪರಿಶಿಷ್ಟ ಪಂಗಡ ಜಿಲ್ಲಾ ಘಟಕದ ಅಧ್ಯಕ್ಷ ಎನ್. ಅಂಬರೀಶ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ. ಶಿವಕುಮಾರ್ ಕೋಮುಲ್ ನಿರ್ದೇಶಕ ಷಂಷೀರ್, ಮುಖಂಡರಾದ ಮದನಹಳ್ಳಿ ಮಹೇಶ್, ರಾಜಕಲ್ಲಹಳ್ಳಿ ಶ್ರೀನಿವಾಸ್, ಖಾದ್ರಿಪುರ ಬಾಬು, ಉಮಾಶಂಕರ್, ನದೀಂ, ಜಾಲಿಬಾನು, ಚಿನ್ನಾಪುರ ನಾನಾರಾಯಣಸ್ವಾಮಿ, ಜನ್ನಘಟ್ಟ ನವೀನ್, ಜಾಲಿಬಾನು, ಗೋವಿಂದರಾಜು, ವಾಸು, ಮುನಿವೆಂಕಟಪ್ಪ, ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಪ್ರಜಾಪ್ರಭುತ್ವ, ಮತದಾನ ಹಕ್ಕು ರಕ್ಷಣೆಗೆ ಕಾಂಗ್ರೆಸ್ ಹೋರಾಟ: ಎಐಸಿಸಿ ವೀಕ್ಷಕಿ ದೀಪ್ತಿ ವರ್ಗೀಸ್

ದೇಶದಲ್ಲಿ 13 ಕೋಟಿಗೂ ಹೆಚ್ಚು ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ...

ಕೋಲಾರ | ಮತಗಳ್ಳತನದ ಮೂಲಕ ಅಧಿಕಾರ ಹಿಡಿಯಲು ಬಿಜೆಪಿ ಯತ್ನ: ಅನಿಲ್ ಕುಮಾರ್

ಕೋಲಾರ: ಚುನಾವಣಾ ಆಯೋಗವನ್ನು ಬಳಸಿಕೊಂಡು ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟು,...

ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ...

ಕೋಲಾರ | ಶೀಲ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನೇ ಹತ್ಯೆಗೈದ ಪತಿ!

ಶೀಲ ಶಂಕೆ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ...