ಕೋಲಾರ | ಜಿಲ್ಲೆಗೆ ₹600 ಕೋಟಿ‌ ಬರ ಪರಿಹಾರ ನೀಡಲು ಜೆಡಿಎಸ್ ಆಗ್ರಹ

Date:

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರಿಗೆ ಸಮರ್ಪಕ ಬರ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಶ್ರೀನಿವಾಸಪುರ ಶಾಸಕ ಜಿ.ವಿ.ವೆಂಕಟಶಿವಾರೆಡ್ಡಿ ಆರೋಪಿಸಿದರು.

- Advertisement -

ನಗರದ ಸಿಎಂಆರ್ ಶ್ರೀನಾಥ್ ಅವರ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಯುವ ಜೆಡಿಎಸ್ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅ. 2ರಂದು ಬೆಳಿಗ್ಗೆ 8 ಗಂಟೆಗೆ ಬಂಗಾರಪೇಟೆಯ ಎಪಿಎಂಸಿಗೆ ಬರಲಿದ್ದು, ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ರೈತರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

40 ವರ್ಷಗಳಲ್ಲಿ ಇಂತಹ ಬರ ಪರಿಸ್ಥಿತಿಯನ್ನು ತಾವು ನೋಡಿಲ್ಲ. ರೈತರಿಗೆ ಈವರೆಗೆ ಸಮರ್ಪಕವಾಗಿ ಪರಿಹಾರ ತಲುಪಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸುಮಾರು ₹25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ‌ ಕೂಡಲೇ ಸಾಲಮನ್ನಾ‌ ಮಾಡಬೇಕು ಎಂದು ಆಗ್ರಹಿಸಿದರು.

ರೈತರಿಗೆ ₹2,500 ಪರಿಹಾರ ನೀಡಿರುವುದನ್ನು ಟೀಕಿಸಿದ ಅವರು, ಅನ್ನ ನೀಡುವ ರೈತನನ್ನು ರಾಜ್ಯ ಸರ್ಕಾರ ಬೇಡುವ ಪರಿಸ್ಥಿತಿಗೆ ತಂದು ನಿಲ್ಲಿಸಿದೆ. ರೈತರನ್ನು ಭಿಕ್ಷುಕರಂತೆ ಕಾಣದೆ, ಸಮರ್ಪಕ ಪರಿಹಾರ ನೀಡಬೇಕು ರಾಜ್ಯದಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ತೀವ್ರವಾಗಿದೆ. ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆಯೂ ಆಗುತ್ತಿಲ್ಲ. ಇಂತಹ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಸರ್ಕಾರ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದರು.

ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಿನ್ನಡೆ: ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ನಿಖಿಲ್‌ ಕುಮಾರಸ್ವಾಮಿ ‌ನೇತೃತ್ವದಲ್ಲಿ ‘ರೈತ ಸ್ವಾಭಿಮಾನ ಯಾತ್ರೆ’ ಮೂಲಕ ರೈತರೊಂದಿಗೆ ಸಂವಾದ ನಡೆಸಿ, ಪಾದಯಾತ್ರೆ ನಡೆಸುತ್ತಾ ಅವರ ಸಮಸ್ಯೆಗಳನ್ನು ಆಲಿಸಲಾಗುತ್ತಿದೆ‌ ಈಗಾಗಲೇ ‌ಕನಕಪುರ‌ ತಾಲ್ಲೂಕಿನಲ್ಲಿ ಆರಂಭವಾಗಿದ್ದು, ಶುಕ್ರವಾರ ಬೆಳಿಗ್ಗೆ ‌8 ಗಂಟೆಗೆ‌ ಬಂಗಾರಪೇಟೆ ಎಪಿಎಂಸಿಯಲ್ಲಿ ನಡೆಯಲಿದೆ ಎಂದರು.

ರೈತರು ಸಾಕಷ್ಟು ತೊಂದರೆಗೆ ಸಿಲುಕಿದ್ದಾರೆ. ‌ಕಾಂಗ್ರೆಸ್‌ ಸರ್ಕಾರ ಬಂದ ‌ಮೇಲೆ ಮೂರುವರೆ ಸಾವಿರ ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರ ಆರ್ಥಿಕ ದಿವಾಳಿ ಆಗಿದ್ದು, ‌ರೈತರ ಸಮಸ್ಯೆಗೆ‌ ಸ್ಪಂದಿಸುತ್ತಿಲ್ಲ. ಸಮರ್ಪಕ ವಿದ್ಯುತ್ ನೀಡುತ್ತಿಲ್ಲ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂಬುದನ್ನು ಸ್ವತಃ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,‌ ಸಚಿವ ಮಾಗಡಿ‌ ಬಾಲಕೃಷ್ಣ ಒಪ್ಪಿಕೊಂಡಿದ್ದಾರೆ‌. ರಾಜ್ಯದ ಆರ್ಥಿಕ ಪರಿಸ್ಥಿತಿ ಕುಸಿದಿದೆ. ಹೊಸ ಘೋಷಣೆಗಳನ್ನು ಮಾಡದಂತೆ ಹಣಕಾಸು ಇಲಾಖೆ ಸೂಚಿಸಿರುವುದು ಸರ್ಕಾರದ ಆರ್ಥಿಕ ಸಂಕಷ್ಟಕ್ಕೆ ಸಾಕ್ಷಿ ಎಂದು ಟೀಕಿಸಿದರು.

ರೈತರ ಹಿತಾಸಕ್ತಿಗಿಂತ ರಿಯಲ್ ಎಸ್ಟೇಟ್‌ಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ರೈತರಿಗೆ ₹2,500 ಪರಿಹಾರ ಘೋಷಿಸುವ ಮೂಲಕ ಅನ್ನದಾತರನ್ನು ಭಿಕ್ಷುಕರಂತೆ ನೋಡುವ ಪರಿಸ್ಥಿತಿ ನಿರ್ಮಿಸಲಾಗಿದೆ. ರೈತರ ಸಂಕಷ್ಟಕ್ಕೆ ಸರ್ಕಾರ ಕೂಡಲೇ ಸ್ಪಂದಿಸಬೇಕು. ಕನಿಷ್ಠ ₹ 25 ಸಾವಿರ ‌ಪರಿಹಾರ‌ ನೀಡಬೇಕು. ಪ್ರತಿ ತಾಲ್ಲೂಕಿಗೆ ₹ 100 ಕೋಟಿಯಂತೆ ಜಿಲ್ಲೆಗೆ ₹ 600 ಕೋಟಿ ಪರಿಹಾರ‌ ನೀಡಬೇಕು ಎಂದು ಆಗ್ರಹಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ, ನಿಖಿಲ್ ಕುಮಾರಸ್ವಾಮಿ ಅವರು ರೈತರೊಂದಿಗೆ ಸಂವಾದ ನಡೆಸಿ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಕೇಂದ್ರ ಸಚಿವರು ಬರ ಪರಿಸ್ಥಿತಿ ವೀಕ್ಷಣೆ ಮಾಡಲು ಮುಂದಾಗಿದ್ದಾರೆ. ಆದರೆ ರಾಜ್ಯ ಸರ್ಕಾರ ಸಮರ್ಪಕವಾಗಿ ಬರ ವೀಕ್ಷಣೆ ನಡೆಸಿಲ್ಲ ರಾಜ್ಯಕ್ಕೆ ಎಷ್ಟು ಸಾವಿರ ಕೋಟಿ ಬರ ಪರಿಹಾರ ಅಗತ್ಯವಿದೆ ಎಂಬುದರ ಕುರಿತು ಕೇಂದ್ರಕ್ಕೆ ಸಮರ್ಪಕ ಪ್ರಸ್ತಾವ ಸಲ್ಲಿಸಿಲ್ಲ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರೈತರನ್ನು ಭೇಟಿ ಮಾಡಿ ವಾಸ್ತವ ಸ್ಥಿತಿ ಅರಿಯುವ ಪ್ರಯತ್ನ ಮಾಡಿಲ್ಲ. ಇದೀಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ದೂರಿದರು.

ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರು ಕೆಡಿಪಿ ಸಭೆಯನ್ನೂ ಸಮರ್ಪಕವಾಗಿ ನಡೆಸುತ್ತಿಲ್ಲ. ಸಂಸದರು‌ ದಿಶಾ ಸಭೆ ನಡೆಸಿ‌ ಬರ‌ ಸಂಬಂಧ ಗಮನ ಸೆಳೆಯಬೇಕು‌ ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಯಾವುದೇ ಬಿರುಕು ಇಲ್ಲ. ಪಕ್ಷ ಸಂಘಟನೆಯ ವಿಚಾರದಲ್ಲಿ ಮೈತ್ರಿ ಇರುವುದಿಲ್ಲ; ರಾಜಕೀಯ ವಿಚಾರದಲ್ಲಿ ಮಾತ್ರ ಮೈತ್ರಿ ಮುಂದುವರಿಯಲಿದೆ ಜೆಡಿಎಸ್‌ನಲ್ಲಿ ಪದಾಧಿಕಾರಿಗಳ ನೇಮಕ ಅಗತ್ಯವಿದ್ದು, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ನೇಮಕಾತಿ ನಡೆಯಲಿದೆ ಎಂದರು.

ಇದನ್ನು ಓದಿದ್ದೀರಾ..?ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್‌ ಮಾತನಾಡಿ, ಜಿಲ್ಲೆಯಲ್ಲಿ ಮಳೆ‌ ಇಲ್ಲದೆ ನೀರಿನ ಅಭಾವ‌ ಉಂಟಾಗಿದೆ. ಬೆಳೆ ಒಣಗಿ ಹೋಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂಥ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೇವಲ ₹ 2,500 ಪರಿಹಾರ ಘೋಷಿಸಿದ್ದು ಮೂರು ಕೆ.ಜಿ‌ ಮಟನ್ ಕೂಡ‌ ಬರಲ್ಲ ಎಂದು ವ್ಯಂಗ್ಯವಾಡಿದರು ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಾಬುಮೌನಿ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕಾರಿಪುರದಲ್ಲಿ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ

ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿ ಗ್ರಾಮದಿಂದ ‘ಭಾರತ್ ಜೋಡೋ...

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ಉಡುಪಿ | ಈಜಲು ತೆರಳಿದ ಯುವಕರು ನೀರುಪಾಲು; ಬೈಂದೂರಿನಲ್ಲಿ ಕೊಲೆ ಯತ್ನ ಆರೋಪಿಗಳ ಆತ್ಮಹತ್ಯೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ಸ್ನೇಹಿತರೊಂದಿಗೆ ಈಜಲು...

ಕೋಡಿಹಳ್ಳಿ ಚಂದ್ರಶೇಖರ್ ಬಂಧನ ಖಂಡಿಸಿ ಮುಧೋಳದಲ್ಲಿ ರೈತರ ಪ್ರತಿಭಟನೆ

ಕಳಸಾ–ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ರೈತಪರ ಹೋರಾಟ ನಡೆಸಿದ್ದ ರಾಜ್ಯ ರೈತ...