ಕೋಲಾರ : ವರ್ತೂರು ಪ್ರಕಾಶ್ ಹೇಳಿಕೆಗೆ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಅಸಮಾಧಾನ

Date:

ಇತ್ತೀಚೆಗೆ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೀಡಿರುವ ಹೇಳಿಕೆಯು ಮೈತ್ರಿಧರ್ಮಕ್ಕೆ ಅಪಚಾರ ಮಾಡಿದಂತಿದೆ ಎಂದು ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ, ಮಾಜಿ ಸಂಸದ ಎಸ್.ಮುನಿಸ್ವಾಮಿ, ಮಹಾಲಕ್ಷ್ಮಿ ಬಡಾವಣೆ ಶಾಸಕ ಗೋಪಾಲಯ್ಯರಿದ್ದ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದ ವೇದಿಕೆಯಲ್ಲೇ ವರ್ತೂರು ಪ್ರಕಾಶ್ ಜೆಡಿಎಸ್ ಪಕ್ಷದ ಕುರಿತಾಗಿ ಆಡಿರುವ ಮಾತುಗಳಿಂದ ಕಾರ್ಯಕರ್ತರು, ಮುಖಂಡರಿಗೆ ತೀವ್ರ ಮುಜುಗರ ಉಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಹಸಿವು, ಹಕ್ಕು ಮತ್ತು ‘ದೇವರ ಹೆಣ’

ಹಸಿದವನಿಗೆ ಮಾಂಸವನ್ನು ನಿರಾಕರಿಸುವುದು ಕೇವಲ ದ್ವೇಷವಲ್ಲ, ಅದು ತನ್ನ ಜಾತಿಯ ಪಾವಿತ್ರ್ಯವನ್ನು ಹಸಿದ ಹೊಟ್ಟೆಯ ಮೇಲೆ ಹೇರುವ ಕ್ರೌರ್ಯ. ಇಂದಿನ ಗೋರಕ್ಷಣೆಯ ರಾಜಕಾರಣ ಹಿನ್ನೆಲೆಯಲ್ಲಿ ಈ 'ದೇವರ ಹೆಣ' ಕಥೆಯ ಒಳನೋಟ ಇನ್ನಷ್ಟು...

ಒಂದು ವೇಳೆ ಮೈತ್ರಿ ಹೊರತಾಗಿ ಚುನಾವಣೆ ನಡೆಸಬೇಕೆನ್ನುವುದು ತಮ್ಮ ಅನಿಸಿಕೆ ಆಗಿದ್ದರೆ ನಿಮ್ಮ ಪಕ್ಷದ ವರಿಷ್ಠರಿಗೆ ತಿಳಿಸಿ ಬಹಿರಂಗ ಹೇಳಿಕೆ ಕೊಡಿಸಿ ಆ ಬಳಿಕ ನಿಮ್ಮ ತೀರ್ಮಾನ ತೆಗೆದುಕೊಳ್ಳಿ. ಇದಕ್ಕೆ ನಮ್ಮದೇನು ಅಭ್ಯಂತರ ಇರುವುದಿಲ್ಲ. ಅದನ್ನು ಬಿಟ್ಟು ಒಂದು ಕಡೆ ಮೈತ್ರಿ ಎಂದು ಹೇಳಿ ಮತ್ತೊಂದು ಕಡೆ ಜೆಡಿಎಸ್ ಪಕ್ಷದ ಬಗ್ಗೆ ಕಾರ್ಯಕರ್ತರು, ಮುಖಂಡರ ಮನಸ್ಸಿಗೆ ಘಾಸಿ ಆಗುವಂತೆ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಸದೃಢವಾಗಿದೆ. ಮಾಜಿ ಶಾಸಕ ಕೆ.ಶ್ರೀನಿವಾಸಗೌಡರು ಪಕ್ಷ ತೊರೆದ ನಂತರ ನಾನೂ ಮತ್ತು ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ಮುಖಂಡರು ಗ್ರಾಪಂ ಮಟ್ಟದಿಂದ ಲೋಕಸಭೆ ಚುನಾವಣೆವರೆಗೂ ಪಕ್ಷ ಸದೃಢಗೊಳಿಸಿದ್ದೇವೆ.ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವುದರ ಜತೆಗೆ ಅನೇಕ ಗ್ರಾಪಂಗಳನ್ನು ಇಂದಿಗೂ ಪಕ್ಷದ ಭದ್ರಕೋಟೆಯಾಗಿ ಇರಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

2023ರ ವಿಧಾನಸಭೆ ಚುನಾವಣೆ ನಂತರ ಜೆಡಿಎಸ್, ಬಿಜೆಪಿ ವರಿಷ್ಠರ ತೀರ್ಮಾನದಂತೆ ಮೈತ್ರಿಕೂಟದಲ್ಲಿ ನಡೆದ ಎಲ್ಲ ಚುನಾವಣೆಗಳನ್ನು ಸರಿಸಮನಾಗಿ ಟಿಕೆಟ್ ಹಂಚಿಕೆ ಮಾಡಿಕೊಂಡು ಅನೇಕ ಚುನಾವಣೆಗಳಲ್ಲಿ ಗೆದ್ದಿರುತ್ತೇವೆ. ಇತ್ತೀಚೆಗೆ ನಡೆದ ಆಗ್ನೇಯ ಪದವೀಧರರ ಚುನಾವಣೆಯಲ್ಲಿಯೂ ಹೆಚ್ಚಿನ ಶ್ರಮವಹಿಸಿ ಎರಡೂ ಪಕ್ಷದ ಕಾರ್ಯಕರ್ತರು, ಮುಖಂಡರು ಪ್ರಾಮಾಣಿಕ ಪ್ರಯತ್ನದಿಂದ ಯಶಸ್ವಿಯಾಗಿದ್ದ, ಮೈತ್ರಿಗೂ ಬದ್ಧರಾಗಿದ್ದೇವೆ. ಹೀಗಾಗಿ ಜೆಡಿಎಸ್ ಪಕ್ಷವು ಕೋಲಾರ ಕ್ಷೇತ್ರದಲ್ಲಿ ಪ್ರಾಬಲ್ಯ ಹೊಂದಿರುವ ಬಲಿಷ್ಠ ಪಕ್ಷವಾಗಿದೆ.


ಇದನ್ನು ಓದಿದ್ದೀರಾ..? ಶ್ರೀನಿವಾಸಪುರ | ರೈತರ ಮೇಲೆ ದೌರ್ಜನ್ಯ ಆರೋಪ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ಹೀಗಾಗಿ ವರ್ತೂರು ಪ್ರಕಾಶ್ ಹೇಳಿಕೆ ಸಂಬಂಧ ಕೂಡಲೇ ಬಿಜೆಪಿ ಜಿಲ್ಲಾಧ್ಯಕ್ಷರು, ರಾಜ್ಯ ನಾಯಕರು, ವರಿಷ್ಠರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಅವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಸಿಎಂಆರ್ ಶ್ರೀನಾಥ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಲ್ಕು ವರ್ಷವಾದರೂ ಪೂರ್ಣಗೊಳ್ಳದ ಸ್ಲಂ ಬೋರ್ಡ್ ಮನೆಗಳು; ತಾಳಿಕೋಟೆಯಲ್ಲಿ ಮೌನ ಧರಣಿ

ವಿಜಯಪುರ ಜಿಲ್ಲೆ ತಾಳಿಕೋಟೆ ಪಟ್ಟಣದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ (ಸ್ಲಂ ಬೋರ್ಡ್)...

ಹಾವೇರಿ | ನಾಳೆ ಬೇಡ್ತಿ-ವರದಾ ನದಿ ಜೋಡಣೆ ಕುರಿತು ಸಭೆ

ಬೇಡ್ತಿ-ವರದಾ ನದಿ ಜೋಡಣೆ ಕುರಿತು ಹಾವೇರಿ ನಗರದ ಹುಕ್ಕೇರಿಮಠದಲ್ಲಿ ನ.4ರಂದು ಸಂಜೆ...

ಶಿವಮೊಗ್ಗ | ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಪ್ರತಿಭಟನೆ

ಕಬ್ಬು ಬೆಲೆ ನಿಗದಿ ವಿಚಾರವಾಗಿ ಕಾರ್ಖಾನೆ ಮಾಲೀಕರು ಮತ್ತು ಕಬ್ಬು ಬೆಳೆಗಾರರ...

ಹಾವೇರಿ | ರಸ್ತೆ ಕಾಮಗಾರಿಗೆ ಶಾಸಕ ಪ್ರಕಾಶ ಕೋಳಿವಾಡ  ಅವರಿಂದ ಚಾಲನೆ

ಹಾವೇರಿ ಜಿಲ್ಲೆಯ ರಾಣಿಬೆನ್ನೂರ ಪಟ್ಟಣದ ವಿನಾಯಕ ನಗರದದಲ್ಲಿ ಶಾಸಕ ಪ್ರಕಾಶ ಕೋಳಿವಾಡ...