ಕೋಲಾರ | ಹುಲ್ಲಂಕಲ್ಲು ಅಂಬೇಡ್ಕರ್ ಪುತ್ಥಳಿ ವಿವಾದ ಕಾನೂನು ಮಾರ್ಗದಲ್ಲೇ ನ್ಯಾಯ ಪಡೆಯಬೇಕು

Date:

ಹುಲ್ಲಂಕಲ್ಲು ಗ್ರಾಮದಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಮತ್ತು ಪುತ್ಥಳಿಯನ್ನು ರಾತ್ರೋರಾತ್ರಿ ಒಂದು ಗಂಟೆ ಸಮಯದಲ್ಲಿ ಚರಂಡಿ ಮೇಲೆ ಸ್ಥಾಪನೆಗೆ ಮುಂದಾಗಿದ್ದೇ ವಿವಾದಕ್ಕೆ ಕಾರಣವಾಗಿದೆ ಜಿಲ್ಲಾಡಳಿತದ ಶಾಂತಿ ಸಭೆಯ ತೀರ್ಮಾನಕ್ಕೆ ವಿರುದ್ಧವಾಗಿ ಕಾಲ್ನಡಿಗೆ ಜಾಥಾ ನಡೆಸಿದ್ದು ಸರಿಯಲ್ಲ ಕಾನೂನು ಮೂಲಕವೇ ನ್ಯಾಯ ಪಡೆಯಬೇಕಾಗಿದೆ ಎಂಬುದನ್ನು ಹೋರಾಟಗಾರರು ಅರ್ಥಮಾಡಿಕೊಳ್ಳಬೇಕು ಎಂದು ಹಿರಿಯ ದಲಿತ ಮುಖಂಡ ಹುಣಸನಹಳ್ಳಿ ವೆಂಕಟೇಶ್ ತಿಳಿಸಿದರು.

- Advertisement -

ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರ ಆ ಭಾಗದ ದಲಿತ ಮುಖಂಡರು ಹೋಗಿ ಬಗೆ ಅರಿಸಿದ್ದ ಘಟನೆಯನ್ನು ಹೊರಗಡೆಯಿಂದ ಬಂದಂತಹ ಮಾಹಿತಿ ಕೊರತೆ ಇರುವ ಕೆಲವರಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣಕ್ಕೆ ಕಾರಣವಾಗಿದೆ ಸಂವಿಧಾನ ಮತ್ತು ಕಾನೂನು ಮೂಲಕವೇ ನ್ಯಾಯ ಪಡೆಯಬೇಕು. ಹೋರಾಟಗಳು ಸಂವಿಧಾನದ ಪರವಾಗಿರಬೇಕು ಅದಕ್ಕಾಗಿ ಅಂಬೇಡ್ಕರ್ ಅಷ್ಟು ಪರಿಶ್ರಮದಿಂದ ಸಂವಿಧಾನ ಕೊಟ್ಟಿದ್ದಾರೆ ಹುಲ್ಲಂಕಲ್ಲು ಗ್ರಾಮದಲ್ಲಿನ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು, ನ್ಯಾಯಯುತವಾಗಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಮುಂದಾಗಬೇಕು ಯಾವುದೇ ಸಮುದಾಯಗಳು ವಿರೋಧ ಇಲ್ಲದೆ ಇದ್ದರು ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತುವ ಕೆಲಸ ಯಾರೂ ಮಾಡಬಾರದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ಹುಲ್ಲಂಕಲ್ಲು ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದ್ದು, ಈ ಪರಿಸ್ಥಿತಿಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಕಾರ್ಯವೈಖರಿಯೂ ಕಾರಣವಾಗಿರಬಹುದು ರಾಜ್ಯದ ಹಿರಿಯ ದಲಿತ ನಾಯಕರು ಎಲ್ಲಿಯೂ ಉದ್ವಿಗ್ನತೆ ಉಂಟುಮಾಡುವ ರೀತಿಯ ಹೋರಾಟ ನಡೆಸಿಲ್ಲ ಇದನ್ನು ಅರ್ಥಮಾಡಿಕೊಂಡು, ಸ್ಥಳ ಅಂತಿಮಗೊಳ್ಳುವವರೆಗೆ ಯಾವುದೇ ಧರಣಿ ಅಥವಾ ಪ್ರತಿಭಟನೆ ನಡೆಸಬಾರದು. ಜಿಲ್ಲಾಡಳಿತವೂ ಅಂತಹ ಹೋರಾಟಗಳಿಗೆ ಅನುಮತಿ ನೀಡಬಾರದು, ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಡಿಎಸ್ಎಸ್ ಸಂಘಟನೆಯ ಮುಖಂಡರಾದ ಮಂಜುಳಾ ಮಾತನಾಡಿ, ಮಧ್ಯರಾತ್ರಿ ಅಂಬೇಡ್ಕರ್ ಭಾವಚಿತ್ರ ಮತ್ತು ಪುತ್ಥಳಿ ಸ್ಥಾಪಿಸಲು ಯತ್ನಿಸಿರುವುದು ತಪ್ಪಾಗಿದೆ. ಹೋರಾಟಗಾರರಿಗೆ ಕಾನೂನು ಅರಿವು ಇರಬೇಕು. ಅಂಬೇಡ್ಕರ್ ಎಲ್ಲಾ ಸಮುದಾಯಗಳಿಗೂ ಸೇರಿದ ಮಹಾನ್ ವ್ಯಕ್ತಿಯಾಗಿರುವುದರಿಂದ ಪುತ್ಥಳಿ ಸ್ಥಾಪನೆಗೆ ಎಲ್ಲರ ಅಭಿಪ್ರಾಯಕ್ಕೂ ಗೌರವ ನೀಡಬೇಕು. ಅನುಮತಿ ಇಲ್ಲದೆ ಜಿಲ್ಲಾಡಳಿತದ ವಿರುದ್ಧ ಹೋರಾಟ ನಡೆಸಿರುವುದು ಸರಿಯಲ್ಲ. ಜಿಲ್ಲಾಡಳಿತ ಗುರುತಿಸುವ ಸ್ಥಳದಲ್ಲೇ ಎಲ್ಲರೂ ಒಗ್ಗಟ್ಟಿನಿಂದ ಪುತ್ಥಳಿ ನಿರ್ಮಿಸೋಣ ಎಂದರು.

ಜಾಗೃತಿ ಸಮಿತಿ ಸದಸ್ಯ ಚಿಕ್ಕ ಅಯ್ಯೂರು ರವೀಂದ್ರನಾಥ್ ಮಾತನಾಡಿ, ಪಿಡಿಒ ಅವರ ಕಾರ್ಯವೈಖರಿಯಿಂದ ಗ್ರಾಮದಲ್ಲಿ ಅಶಾಂತಿ ಉಂಟಾಗಿದೆ. ಹೊಸ ಜಿಲ್ಲಾಧಿಕಾರಿ ಸೂಕ್ತ ಸ್ಥಳದಲ್ಲಿ ಪುತ್ಥಳಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವ ವಿಶ್ವಾಸವಿದೆ. ಎಡಿಸಿ ನೇತೃತ್ವದ ಶಾಂತಿ ಸಭೆಯ ತೀರ್ಮಾನವನ್ನು ಧಿಕ್ಕರಿಸಿ ಕಾಲ್ನಡಿಗೆ ಜಾಥಾ ನಡೆಸಿರುವುದು ತಪ್ಪು. ಅನ್ಯಾಯ ಅಥವಾ ದೌರ್ಜನ್ಯ ನಡೆದಿದ್ದರೆ ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯಬೇಕು. ಕೆಲವರ ವೈಯಕ್ತಿಕ ವಿಚಾರವನ್ನು ಅಂಬೇಡ್ಕರ್ ಪ್ರತಿಮೆ ಹೆಸರಿನಲ್ಲಿ ಗ್ರಾಮದಲ್ಲಿ ಅಶಾಂತಿ ಸೃಷ್ಟಿಸಲು ಬಳಸಬಾರದು. ಸಮಸ್ಯೆಯನ್ನು ಶೀಘ್ರದಲ್ಲೇ ಇತ್ಯರ್ಥಪಡಿಸಲಾಗುವುದು. ಅಲ್ಲಿಯವರೆಗೆ ಎಲ್ಲರೂ ಶಾಂತಿ ಮತ್ತು ಸೌಹಾರ್ದತೆ ಕಾಪಾಡಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ..?ಚಿಕ್ಕಬಳ್ಳಾಪುರ | ಎಂಟೂ ತಾಲೂಕುಗಳಲ್ಲಿ ತೀವ್ರ ಬರ: ಪರಿಹಾರ ಕ್ರಮಕ್ಕೆ ಸಚಿವ ಬಿ.ಎಸ್.ಸುರೇಶ ಸೂಚನೆ

ಈ ಸಂದರ್ಭದಲ್ಲಿ ಡಿಎಸ್ಎಸ್ ಅಂಬೇಡ್ಕರ್ ವಾದ ಜಿಲ್ಲಾ ಸಂಚಾಲಕ ಮಣಿವಣ್ಣನ್, ಮುಖಂಡರಾದ ರಘು, ನಾರಾಯಣಸ್ವಾಮಿ, ನವೀನ್, ಕುಮಾರ್, ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಕಲಾ ಕೆಲಸಗಳನ್ನು ನೇರವಾಗಿ ಕಲಾವಿದರಿಗೆ ನೀಡಲು ಆಗ್ರಹ

ಮೈಸೂರು ದಸರಾ ಮಹೋತ್ಸವದ ಕಲಾ ಚಟುವಟಿಕೆಗಳ ಗುತ್ತಿಗೆಗಳನ್ನು ಮಧ್ಯವರ್ತಿಗಳು ಹಾಗೂ ಖಾಸಗಿ...

ಡಿಬಿ ಕುಪ್ಪೆ-ಬಾವಲಿ ನಡುವಿನ ಕಳಪೆ ರಸ್ತೆ ಕಾಮಗಾರಿ

₹20 ಕೋಟಿ ವೆಚ್ಚದ ರಸ್ತೆ ವರ್ಷ ತುಂಬುವ ಮುನ್ನವೇ ಕಿತ್ತುಬಂತು; ಕಾಕನಕೋಟೆ...