ಕೋಲಾರ | ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಸರ್ಕಾರದ ಕ್ರಮ ಖಂಡಿಸಿ, ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಪ್ರತಿಭಟನೆ

Date:

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ನಡುವೆಯೂ ರಾಜ್ಯ ಸರ್ಕಾರ ಸಮರ್ಪಕ ಹಾಗೂ ಕಠಿಣ ಕ್ರಮ ಕೈಗೊಳ್ಳದೆ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳೊಂದಿಗೆ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.

- Advertisement -

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿ ವರ್ಷಗಟ್ಟಲೆ ಓದುತ್ತಿರುವ ಲಕ್ಷಾಂತರ ಯುವಕರ ಭವಿಷ್ಯದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಕೆಪಿಎಸ್‌ಸಿ ನೇಮಕಾತಿಯಲ್ಲಿ ಹುದ್ದೆಗಳಿಗೆ ಹಣದ ‘ರೇಟ್‌ ಪಟ್ಟಿ’ ನಿಗದಿಯಾಗಿರುವ ಆರೋಪಗಳು ಕೇಳಿಬಂದರೂ ಸರ್ಕಾರ ಸಮಗ್ರ ತನಿಖೆ ನಡೆಸದೆ ನಿರ್ಲಕ್ಷ್ಯ ವಹಿಸುತ್ತಿರುವುದು ಖಂಡನೀಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ನೇಮಕಾತಿ ಅಕ್ರಮದಿಂದ ನೊಂದಿರುವ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವ ಬದಲು ಸರ್ಕಾರ ಆರೋಪಗಳನ್ನು ಸಮರ್ಥಿಸಿಕೊಳ್ಳುವ ರೀತಿಯಲ್ಲಿ ನಡೆದುಕೊಳ್ಳುತ್ತಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಪಾರದರ್ಶಕ ನೇಮಕಾತಿ ವ್ಯವಸ್ಥೆ ರೂಪಿಸಬೇಕು. ಕೆಪಿಎಸ್‌ಸಿ ನೇಮಕಾತಿ ಅಕ್ರಮದ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಆಗ್ರಹಿಸಿದರು.

ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ದೊರಕುವವರೆಗೆ ಜೆಡಿಎಸ್ ಹೋರಾಟ ಮುಂದುವರಿಸಲಿದೆ. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ‘ಬೆಂಗಳೂರು ಚಲೋ’ ಸೇರಿದಂತೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಮಾತನಾಡಿ, ಕೆಪಿಎಸ್‌ಸಿ ನೇಮಕಾತಿ ಅಕ್ರಮದ ಆರೋಪಗಳ ಬಗ್ಗೆ ಪಾರದರ್ಶಕ ತನಿಖೆ ನಡೆಸುವಲ್ಲಿ ಸರ್ಕಾರ ವಿಫಲವಾಗಿದೆ. ರಾಜಕೀಯ ಒತ್ತಡ ಮತ್ತು ಪ್ರಭಾವಕ್ಕೆ ಅವಕಾಶ ನೀಡದೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಕಾನೂನಿನ ಮುಂದೆ ತಂದು ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಕೆಪಿಎಸ್‌ಸಿ ಬದಲು ಯುಪಿಎಸ್‌ಸಿ ಮಾದರಿಯಲ್ಲಿ ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಬೇಕು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಇಇ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಂದಿನ ಸಚಿವರಾಗಿದ್ದ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಪ್ರಜಾ ಆಂದೋಲನ ಕಾರ್ಯಕ್ರಮ: ಒಂದೇ ವೇದಿಕೆಯಲ್ಲಿ ನೂರಾರು ಸಮಸ್ಯೆಗಳಿಗೆ ಪರಿಹಾರ: ಅಂಬರೀಷ್

ಪ್ರತಿಭಟನೆಯ ನೇತೃತ್ವವನ್ನು ಜೆಡಿಎಸ್ ತಾಲೂಕು ಅಧ್ಯಕ್ಷ ಬಾಬು ಮೌನಿ ವಹಿಸಿದ್ದರು. ವೇಮಗಲ್–ಕುರಗಲ್ ಪಟ್ಟಣ ಪಂಚಾಯಿತಿ ಸದಸ್ಯರಾದ ಲೋಕೇಶ್ ಮರಿಯಪ್ಪ, ರವಿ, ರಮೇಶ್, ಹಾಗೂ ಮುಖಂಡರಾದ ವಿ.ಕೆ. ರಾಜೇಶ್, ಹೊಲೇರಹಳ್ಳಿ ಅಶೋಕ್, ಚಂಜಿಮಲೆ ಬೈರಪ್ಪ, ಜೆಟ್ ಅಶೋಕ್, ಸುಧಾಕರ್, ಛತ್ರಕೋಡಿಹಳ್ಳಿ ಕುಮಾರ್, ಜಂಜಂ, ಹಿದಾಯತ್ ಉಲ್ಲಾ, ಅನ್ವರ್ ಪಾಷ, ವಕ್ಕಲೇರಿ ಚಿರಂಜೀವಿ, ನರೇಶ್ ಬಾಬು, ಡಿಶ್ ವೆಂಕಟೇಶ್, ಕಾರಂಜಿಕಟ್ಟೆ ಶ್ರೀನಿವಾಸ್, ಮುಂತಾದವರು ಭಾಗವಹಿಸಿದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...