ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

Date:

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ ಆರೋಪಗಳಿದ್ದರೂ ಸೂಕ್ತ ದಾಖಲೆಗಳೊಂದಿಗೆ ಸರ್ಕಾರಕ್ಕೆ ದೂರು ಸಲ್ಲಿಸಬೇಕು. ಆದರೆ, ಸುಖಾಸುಮ್ಮನೆ ಅವಹೇಳನಕಾರಿ ಹೇಳಿಕೆ ನೀಡುವುದು ಮತ್ತು ಅಧಿಕಾರಿಗಳಿಗೆ ಬೆದರಿಕೆ ಹಾಕುವುದನ್ನು ಸಹಿಸುವುದಿಲ್ಲ ಎಂದು ಕರ್ನಾಟಕ ಮಾದಿಗ ದಂಡೋರ ಹಾಗೂ ದಲಿತ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.

- Advertisement -

ನಗರದಲ್ಲಿ ಮಾತನಾಡಿದ ಕರ್ನಾಟಕ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ಮತ್ತಿಕುಂಟೆ ಕೃಷ್ಣ, ಕೆಲವು ಕ್ರಷರ್ ಮಾಲೀಕರು ರಾಯಲ್ಟಿ ಪಾವತಿಸುವಂತೆ ನೋಟಿಸ್ ನೀಡಿದ ಅಧಿಕಾರಿಗಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸುವವರು ರಾಯಲ್ಟಿ ಪಾವತಿಸದೆ ನಿಯಮ ಉಲ್ಲಂಘಿಸುತ್ತಿರುವುದು ಕಂಡುಬರುತ್ತಿದೆ. ಅಧಿಕಾರಿಗಳು ಕಾನೂನು ಪ್ರಕಾರ ಕ್ರಮ ಕೈಗೊಂಡಾಗ ಅವರ ವಿರುದ್ಧ ವೈಯಕ್ತಿಕ ಆರೋಪ ಮಾಡುವುದು ಸರಿಯಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜಿಲ್ಲೆಯಲ್ಲಿ ಅಕ್ರಮವಾಗಿ ಮಂಜೂರಾದ ಭೂಮಿಗಿಂತ ಹೆಚ್ಚಿನ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುತ್ತಿರುವ ಪ್ರಕರಣಗಳೂ ಇವೆ. ಇಂತಹ ಅಕ್ರಮಗಳ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ದಾಖಲೆಗಳಿದ್ದರೆ ಜಿಲ್ಲಾಧಿಕಾರಿಗಳಿಗೆ ಅಥವಾ ಸರ್ಕಾರಕ್ಕೆ ಸಲ್ಲಿಸಲಿ. ಆರೋಪ ಸಾಬೀತಾದರೆ ಕಾನೂನು ಕ್ರಮಕ್ಕೆ ನಮ್ಮ ಆಕ್ಷೇಪವಿಲ್ಲ ಎಂದು ಹೇಳಿದರು.

ಕರ್ನಾಟಕ ಮಾದಿಗ ದಂಡೋರ ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ಕೆ. ವೆಂಕಟಸ್ವಾಮಿ ಮಾತನಾಡಿ, ಸ್ಥಳೀಯರಾಗಿರುವ ಜಿಲ್ಲಾಧಿಕಾರಿಗಳು ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡುವುದು ಹಾಗೂ ಅಧಿಕಾರಿಗಳನ್ನು ಬೆದರಿಸುವ ಪ್ರಯತ್ನ ಖಂಡನೀಯ. ಮಾಲೂರು ನವೀನ್ ಕುಮಾರ್ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿರುವುದನ್ನು ನಿಲ್ಲಿಸಬೇಕು. ದಲಿತ ಅಧಿಕಾರಿಗಳ ವಿರುದ್ಧವೂ ಅವಹೇಳನಕಾರಿ ಮಾತುಗಳನ್ನಾಡಲಾಗುತ್ತಿದೆ. ಇಂತಹ ವರ್ತನೆ ಮುಂದುವರಿದರೆ ಸಂಘಟನೆಯಿಂದ ನ್ಯಾಯಯುತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ರಕ್ಷಣಾ ಸಮಿತಿಯ, ರಾಜ್ಯ ಮಹಿಳಾ ಅಧ್ಯಕ್ಷೆ ಗಿರಿಜ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಹಾರೋಹಳ್ಳಿ ಮಂಜುನಾಥ್, ವೇಣು, ಅಂಬೇಡ್ಕರ್ ನಗರದ ಶಂಕರ್, ಉಮಾ ನಾರಾಯಣ್, ಖಾದ್ರಿಪುರದ ಲಕ್ಷ್ಮೀದೇವಮ್ಮ, ಶ್ರೀರಾಮ್, ಚದುಮನಹಳ್ಳಿಯ ನಾರಾಯಣ್ ಸೇರಿದಂತೆ ಹಲವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...