ಕೋಲಾರ | ಸಂವಿಧಾನದ ಆಶಯದಂತೆ ಸೌಲಭ್ಯಗಳು ಪ್ರಾಮಾಣಿಕ ಅನುಷ್ಠಾನವಾಗಲಿ: ಕೊತ್ತೂರು ಮಂಜುನಾಥ್

Date:

ಸಂವಿಧಾನವನ್ನು ಕೇವಲ ಹೊಗಳಿ ಭಾಷಣ ಮಾಡಿದರೆ ಸಾಲದು. ಅದರ ಆಶಯಗಳನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಿ ಬಡವರಿಗೆ ಸೌಲಭ್ಯಗಳನ್ನು ತಲುಪಿಸಿದಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

- Advertisement -

ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸೋಮವಾರ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು 2021-22ನೇ ಸಾಲಿನಿಂದ ಇಲ್ಲಿಯವರೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಬಡ ರೈತರಿಗೆ ಮಂಜೂರಾದ ಕೊಳವೆಬಾವಿಗಳಿಗೆ ಮೋಟರ್ ಪಂಪ್ ಸೆಟ್ ಕೊಟ್ಟಿಲ್ಲ ಅಧಿಕಾರಿಗಳು ವಿಫಲರಾಗಿದ್ದಾರೆ. ಮಾಹಿತಿ ಕೇಳಿದರೆ ಕಡತ ನೀಡದೆ ಸಬೂಬು ಹೇಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಲಾಗುತ್ತಿದೆ. ಇಂತಹ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ತಪ್ಪು ಮಾಡುವ ಅಧಿಕಾರಿಗಳಿಗೆ ಸಂವಿಧಾನದ ಅಡಿಯಲ್ಲಿ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಮಾಧ್ಯಮಗಳಲ್ಲಿ ಬರುವುದನ್ನೇ ಅಥವಾ ಬೇರೆಯವರು ಹೇಳುವುದನ್ನೇ ಕುರುಡಾಗಿ ನಂಬದೆ, ಸತ್ಯವನ್ನು ಸ್ವತಃ ಅರಿಯುವ ಪ್ರಯತ್ನ ಮಾಡಬೇಕು. ಸತ್ಯವನ್ನು ನಿರ್ಭೀತಿಯಿಂದ ಮಾತನಾಡುವ ಗುಣವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಅಧಿಕಾರಿಗಳು ಮನೆ ಬಾಗಿಲಿಗೆ ಸೌಲಭ್ಯಗಳನ್ನು ಕೊಟ್ಟಾಗ ಮಾತ್ರವೇ ನೆಮ್ಮದಿ ನಿದ್ರೆ ಬರುತ್ತದೆ ಎಂದರು.

ಸಂವಿಧಾನ ರಕ್ಷಣೆ ಕರ್ತವ್ಯ:
ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಮಾತನಾಡಿ, ಸಂವಿಧಾನ ಉಳಿದರೆ ಮಾತ್ರ ಪ್ರಜಾಪ್ರಭುತ್ವ ಉಳಿಯುತ್ತದೆ. ಯುವಜನತೆ ಸಂವಿಧಾನದ ಮೌಲ್ಯಗಳನ್ನು ಅರಿತು ಅದರ ರಕ್ಷಣೆಗೆ ಮುಂದಾಗಬೇಕು ವಿಶ್ವಸಂಸ್ಥೆಯು 2007ರಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಘೋಷಿಸಿದ್ದು, ರಾಜ್ಯದಲ್ಲಿ 2023ರಿಂದ ಆಚರಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ನವೆಂಬರ್ 26ರವರೆಗೆ ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಯುವ ಸಂಸತ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ದೇಶದ ಪ್ರತಿಯೊಬ್ಬರಿಗೂ ಒಂದೇ ಮತದ ಹಕ್ಕು ನೀಡುವ ಮೂಲಕ ಸಂವಿಧಾನ ಸಮಾನತೆ ತಂದಿದೆ. ಇ.ಡಿ., ಸಿಬಿಐ ಹಾಗೂ ಚುನಾವಣಾ ಆಯೋಗದಂತಹ ಸ್ವಾಯತ್ತ ಸಂಸ್ಥೆಗಳ ದುರುಪಯೋಗದಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತ್ತಿದೆ. ಯುವಜನತೆ ಎಚ್ಚೆತ್ತುಕೊಂಡು ಸಂವಿಧಾನ ರಕ್ಷಿಸಬೇಕು ಎಂದರು.

ಹಕ್ಕು, ಕರ್ತವ್ಯ ಅರಿಯಿರಿ:
ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಮಾತನಾಡಿ, ಪ್ರಜಾಪ್ರಭುತ್ವ ರಕ್ಷಣೆ ಹಾಗೂ ಸಂವಿಧಾನದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವುದು ಯುವಜನರ ಆದ್ಯ ಕರ್ತವ್ಯ. ಪ್ರತಿಯೊಬ್ಬರೂ ಸಂವಿಧಾನದ ಪ್ರತಿಯನ್ನು ಓದಿ ತಮ್ಮ ಹಕ್ಕು, ಕರ್ತವ್ಯ ಹಾಗೂ ರಾಷ್ಟ್ರದ ಹಿತಾಸಕ್ತಿಯನ್ನು ಅರಿಯಬೇಕು ಎಂದರು.

ಡಯೆಟ್ ಉಪನ್ಯಾಸಕ ನಾರಾಯಣಸ್ವಾಮಿ ವಿಶೇಷ ಉಪನ್ಯಾಸ ನೀಡಿ, ಪ್ರಜಾಪ್ರಭುತ್ವ ಕೇವಲ ಆಡಳಿತ ವ್ಯವಸ್ಥೆಯಲ್ಲ, ಪ್ರತಿಯೊಬ್ಬ ನಾಗರಿಕನ ಜೀವನ ವಿಧಾನವಾಗಬೇಕು. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸಮಾನತೆ ಸಂವಿಧಾನದ ಪ್ರಮುಖ ಆಶಯಗಳಾಗಿವೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..?ಚಿಂತಾಮಣಿ | ನಗರದ ಬೆಸ್ಕಾಂ ಉಪ ವಿಭಾಗದ ಕಚೇರಿಯಲ್ಲಿಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿಯ ಪ್ರತಿಷ್ಠಾಪನೆ

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ. ಶಿವಕುಮಾರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ. ರಮೇಶ್, ತಹಸೀಲ್ದಾರ್ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಮೈಲಾರಪ್ಪ ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಹಾಗೂ ವಿವಿಧ ಸಂಘಟನೆಗಳ ಮುಖಂಡರು ಇದ್ದರು.

WhatsApp Image 2025 06 24 at 16.24.21 6207fd1d
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ರಾಜ್ಯ ಸರ್ಕಾರ 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಯಾದಗಿರಿ | ಮಕ್ಕಳ ಸುರಕ್ಷತೆ ಸಮಾಜದ ಹೊಣೆ: ಪೋಕ್ಸೋ, ಬಾಲ್ಯವಿವಾಹ ತಡೆಗೆ ಕಾನೂನು ಅರಿವು ಅಭಿಯಾನ

ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಸುರಕ್ಷಿತ...

ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ

ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ...

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...