ಕೋಲಾರ | ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾದ ಮದ್ದೇರಿ ಶಾಲೆಯ ರಜತ ಮಹೋತ್ಸವ:ಶಿಕ್ಷಕರಿಗೆ ಅದ್ಧೂರಿ ಸನ್ಮಾನ

Date:

ಕೋಲಾರ ಜಿಲ್ಲೆಯ ಮದ್ದೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ 25ನೇ ವರ್ಷದ ರಜತ ಸಂಭ್ರಮ ಹಾಗೂ ಶ್ರೀ ವೀರಾಂಜನೇಯ ಸ್ವಾಮಿಯ ಬೆಳ್ಳಿ ಮಹೋತ್ಸವ ಕಾರ್ಯಕ್ರಮವನ್ನು ಅತ್ಯಂತ ಸಡಗರ-ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಯೋಜಿಸಲಾಗಿತ್ತು.

- Advertisement -

25ನೇ ವರ್ಷದ ರಜತ ಸಂಭ್ರಮ ಹಾಗೂ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಬೆಳ್ಳಿ ಮಹೋತ್ಸವದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

​ಮೋದಿ-ಶಾ ಅಸಲಿ ಮುಖ ಅನಾವರಣ: ಅಂಕಿತಾ ಭಂಡಾರಿ ಕೊಲೆ...

ವೇದಿಕೆಗಳಲ್ಲಿ ‘ಬೇಟಿ ಬಚಾವೋ’ ಎಂದು ಭಾಷಣ ಬಿಗಿಯುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು, ಹಾಡಹಗಲೇ ಕೊಲೆಯಾದ ಬಡ ಯುವತಿಯ ಸಾವಿನ ಸುತ್ತ ಕಳಂಕದ ಹುತ್ತ ಹೊತ್ತಿರುವ...

ನಿದ್ರೆಯಲ್ಲೂ ಮಿದುಳಿಗೆ ಮಸಾಜ್‌! ಮಾತ್ರೆಯಿಲ್ಲದೆ ಗಾಢ ನಿದ್ರೆ ತರಬಲ್ಲದೇ...

ಒತ್ತಡದ ಬದುಕಿನಲ್ಲಿ ನೆಮ್ಮದಿಯ ನಿದ್ರೆ ಎನ್ನುವುದೇ ಹಲವರ ಕನಸು. ನಿದ್ರೆಗಾಗಿ ಮಾತ್ರೆಗಳ ಮೊರೆ ಹೋಗುವವರ ಸಂಖ್ಯೆಯೂ ಕಡಿಮೆಯಿಲ್ಲ. ಇಂತಹವರ ಸಮಸ್ಯೆಗೆ ಪರ್ಯಾಯವೊಂದು ಸಿಕ್ಕರೆ ಹೇಗಿರಬಹುದು? ಮೆದುಳಿಗೆ ಅಲ್ಟ್ರಾಸೌಂಡ್‌ ತರಂಗಗಳ ಮೂಲಕ ಪ್ರಚೋದನೆ ನೀಡಿ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು ವರದಿ ಮಾಡುವ ಜವಾಬ್ದಾರಿ- ಇವೆರಡನ್ನೂ ನಿಭಾಯಿಸಬೇಕಾದಾಗ ಮಾಡಿಕೊಳ್ಳುವ ಲೆಕ್ಕಾಚಾರಗಳ ಬಗೆಗಿನ ಒಂದು ಸ್ವಾನುಭವ. ಕಳೆದ ಕೆಲವು ವಾರಗಳಿಂದ ಭಾರತದಲ್ಲಿ ಹೆಣ್ಣುಮಕ್ಕಳ ಮೇಲೆ...

ಕಾರ್ಯಕ್ರಮದ ಭಾಗವಾಗಿ ಗ್ರಾಮದಲ್ಲಿ ಮಂಗಳವಾದ್ಯ, ತಮಟೆ ಹಾಗೂ ವಾದ್ಯವೃಂದದ ನಾದದೊಂದಿಗೆ ವೈಭವದ ಪೂರ್ಣಕುಂಭ ಮೆರವಣಿಗೆಯನ್ನು ಆಯೋಜಿಸಲಾಯಿತು. ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಮಹಿಳೆಯರು ಪೂರ್ಣಕುಂಭ ಕಲಶಗಳನ್ನು ಶಿರಸಿನ ಮೇಲಿಟ್ಟುಕೊಂಡು ಸಾಂಪ್ರದಾಯಿಕ ಉಡುಪಿನಲ್ಲಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಮೆರವಣಿಗೆಯುದ್ದಕ್ಕೂ ಭಕ್ತಾದಿಗಳು ಹಾಗೂ ಗ್ರಾಮಸ್ಥರು ಉತ್ಸಾಹದಿಂದ ಭಾಗವಹಿಸಿದ್ದರು.

ಈ ಎರಡು ದಿನಗಳ ಸುದೀರ್ಘ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು,ಗ್ರಾಮಸ್ಥರು,ಶಿಕ್ಷಕರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ,ಹಬ್ಬದ ವಾತಾವರಣವನ್ನು ನಿರ್ಮಿಸಿದರು.
​
ಶಾಲೆಯಲ್ಲಿ ಸೇವೆ ಸಲ್ಲಿಸಿದ ಹಳೆಯ ಶಿಕ್ಷಕರನ್ನು ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಗೌರವಿಸಿ, ಆಧಾರಪೂರ್ವಕವಾಗಿ ಸನ್ಮಾನಿಸಲಾಯಿತು.ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ ಶಿಕ್ಷಕರು ಹಾಗೂ ಹಳೆಯ ವಿದ್ಯಾರ್ಥಿಗಳು ಒಟ್ಟಿಗೆ ಸೇರಿ ತಮ್ಮ ಶಾಲಾ ದಿನಗಳ ಮಧುರ ನೆನಪುಗಳನ್ನು ಮೆಲಕು ಹಾಕಿದರು.

​ಚಿತ್ರದುರ್ಗ ಜಿಲ್ಲೆಯ ದೈಹಿಕ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಚಿದಾನಂದ ಸ್ವಾಮಿ ಮಾತನಾಡಿ 1994 ರಿಂದ 2002 ರವರೆಗೆ ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದು ವಿದ್ಯಾರ್ಥಿಗಳು ತೋರಿಸಿದ ಪ್ರೀತಿ,ವಿಶ್ವಾಸ ಹಾಗೂ ಕೃತಜ್ಞತೆ ನಮಗೆ ಅಪಾರ ಸಂತೋಷ ತಂದಿದೆ.ಕೋಲಾರ ಬಂಗಾರಕ್ಕೆ ಹೆಸರಾಗಿರುವಂತೆ,ಇಲ್ಲಿನ ಜನರ ಮನಸ್ಸು ಕೂಡ ಬಂಗಾರದಂತಿದೆ ಎಂದು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

ಕಳೆದ ಒಂದು ತಿಂಗಳಿಂದ ಗೂಗಲ್ ಮೀಟ್ ಸಭೆಗಳು ಹಾಗೂ ನಿರಂತರ ಸಿದ್ಧತೆಗಳ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗಿದೆ.ಕಾರ್ಯಕ್ರಮಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಗ್ರಾಮಸ್ಥರು,ಹಳೆಯ ವಿದ್ಯಾರ್ಥಿಗಳು ಮತ್ತು ಸಂಘಟಕರು ಹಾಗೂ ಹಳೆಯ ವಿದ್ಯಾರ್ಥಿ ಬಳಗದಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು.

ಇದನ್ನು ಓದಿದ್ದೀರಾ..?ಕೋಲಾರ : ಶಾಸಕ ಕೊತ್ತೂರು ಮಂಜುನಾಥ್ ಮುತುವರ್ಜಿ: 400 ವಿದ್ಯಾರ್ಥಿಗಳಿಗೆ ನಿತ್ಯ ಮಧ್ಯಾಹ್ನ ಊಟ

ಈ ವೇಳೆ ಮೈಸೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪ ವೆಸ್ಲಿ,ನಿವೃತ್ತ ಶಿಕ್ಷಕರಾದ ವೆಂಕಟನಾರಾಯಣರೆಡ್ಡಿ ಕೆ ಜೆ, ಮುಖ್ಯ ಶಿಕ್ಷಕರಾದ ರಮೇಶ್ ಬಿಕೆ,ನಿವೃತ್ತ ಶಿಕ್ಷಕರಾದ ನಾಗರಾಜ್ ಜಿ,ಮಂಜುಳಾ ಎಸ್ ವಿ,ತ್ರಿಮೂರ್ತಿ,ಚಲಪತಿ, ವಿಶ್ವನಾಥ್,ಹಳೆ ವಿದ್ಯಾರ್ಥಿಗಳು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್...

SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...