ಕೋಲಾರ | ಟಿ.ಚನ್ನಯ್ಯ ಜನ್ಮ ಶತಮಾನೋತ್ಸವಕ್ಕೆ ಮಹಾನುಭಾವನಿಂದ ಅಡ್ಡಿ: ಎಸ್.ಎನ್. ನಾರಾಯಣಸ್ವಾಮಿ

Date:

ಮಾಜಿ ಕೇಂದ್ರ ಸಚಿವ ದಿವಂಗತ ಟಿ. ಚನ್ನಯ್ಯ ಅವರ 100ನೇ ವರ್ಷದ ಭಾಗವಾಗಿ ಜನ್ಮ ಶತಮಾನೋತ್ಸವ ಆಚರಣೆಗೆ ಮಹಾನುಭಾವ ಒಬ್ಬರು ಅಡ್ಡಿಪಡಿಸಿದ್ದರು. ಸಮಾಜ ಮತ್ತು ಸಮುದಾಯದ ಶಕ್ತಿ ಕುಂದಿಸುವ ಉದ್ದೇಶದಿಂದ ಕಾರ್ಯಕ್ರಮ ನಡೆಯದಂತೆ ತಡೆಯಲಾಗಿತ್ತು ಎಂದು ಬಂಗಾರಪೇಟೆ ಶಾಸಕ ಹಾಗೂ ಹಣಕಾಸು ನಿಗಮದ ಅಧ್ಯಕ್ಷ ಎಸ್.ಎನ್. ನಾರಾಯಣಸ್ವಾಮಿ ಆರೋಪಿಸಿದರು.

- Advertisement -

ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಶನಿವಾರ ನಡೆದ ಟಿ. ಚನ್ನಯ್ಯ ಅವರ 114ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಚನ್ನಯ್ಯ ಅವರ ಜನ್ಮ ಶತಮಾನೋತ್ಸವ ಆಚರಿಸಲು ಕಾರ್ಯಕ್ರಮ ನಿಗದಿಪಡಿಸಲಾಗಿತ್ತು. ಆದರೆ, ಸ್ವಾರ್ಥ ಮನೋಭಾವದ ವ್ಯಕ್ತಿಯೊಬ್ಬರು ಅದಕ್ಕೆ ಅಡ್ಡಿಪಡಿಸಿದರು. ಕಾಂಗ್ರೆಸ್‌ನ ಕಪಿಮುಷ್ಟಿಯಲ್ಲಿದ್ದವರು ಬಾಲಾಜಿ ಚನ್ನಯ್ಯ ಅವರನ್ನು ಹಂತಹಂತವಾಗಿ ಅವರನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದರು ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಕೋಲಾರ ನಗರದ ಅಭಿವೃದ್ಧಿಗೆ ತಾವು ₹60 ಕೋಟಿ ಅನುದಾನ ನೀಡಿದ್ದು, ಮುಂದೆಯೂ ಸಹಕಾರ ನೀಡಲಿದ್ದೇನೆ. ನಗರದ ಹಳೆಯ ಬಸ್ ನಿಲ್ದಾಣದಲ್ಲಿ ಚನ್ನಯ್ಯ ಅವರ ಕಂಚಿನ ಪ್ರತಿಮೆ ನಿರ್ಮಿಸುವ ಜವಾಬ್ದಾರಿಯನ್ನು ಶಾಸಕ ಕೊತ್ತೂರು ಮಂಜುನಾಥ್ ವಹಿಸಿಕೊಳ್ಳಬೇಕು. ಇದಕ್ಕೆ ತಮ್ಮ ಸಂಪೂರ್ಣ ಸಹಕಾರವಿದೆ ಎಂದರು.

ಚನ್ನಯ್ಯ ಅವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸಿ, ಅದರ ಮೂಲಕ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ಹಾಗೂ ಸೂರಿಲ್ಲದವರಿಗೆ ಮನೆ ಕಲ್ಪಿಸುವ ಕೆಲಸವಾಗಬೇಕು. ಇದಕ್ಕಾಗಿ ತಾವು ₹25 ಲಕ್ಷ ನೀಡುವುದಾಗಿ ಘೋಷಿಸಿದರು. ಚನ್ನಯ್ಯ ಅವರ ಮೊಮ್ಮಕ್ಕಳು ರಾಜಕೀಯವಾಗಿ ಬೆಳೆಯಲು ಮುಂದೆ ಬಂದರೆ, ಬಂಗಾರಪೇಟೆ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಅವಕಾಶ ಕಲ್ಪಿಸಲು ಸಹಕರಿಸುವುದಾಗಿ ತಿಳಿಸಿದರು.

ಚನ್ನಯ್ಯ ಅವರ ಇತಿಹಾಸ ಮತ್ತು ಸಾಧನೆಗಳನ್ನು ಪುಸ್ತಕ ರೂಪದಲ್ಲಿ ದಾಖಲಿಸಿದ್ದರೆ, ಅವರ ಕೊಡುಗೆಗಳು ಜನರಿಗೆ ತಿಳಿಯುತ್ತಿದ್ದವು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಅವರು, ಮಹಾತ್ಮ ಗಾಂಧೀಜಿ ಅವರನ್ನು ನಂದಿಬೆಟ್ಟದಿಂದ ಕೋಲಾರಕ್ಕೆ ಕರೆತಂದಿದ್ದರು. ವಿದ್ಯಾರ್ಥಿಗಳಿಗಾಗಿ ನಚಿಕೇತನ ನಿಲಯ ಸ್ಥಾಪಿಸಿದ್ದರು. ಮೈಸೂರು ರಾಜ್ಯದ ಅಭಿವೃದ್ಧಿಗೆ ಶ್ರಮಿಸುವುದರ ಜತೆಗೆ ಕಾಂಗ್ರೆಸ್ ಕಚೇರಿ ನಿರ್ಮಾಣ, ಬಡವರಿಗೆ ಸಾವಿರಾರು ಮನೆಗಳ ವಿತರಣೆ, ಉದ್ಯಾನಗಳು, ಬಸ್ ನಿಲ್ದಾಣಗಳು ಹಾಗೂ ಕೆರೆಗಳ ಅಭಿವೃದ್ಧಿಗೆ ಕೊಡುಗೆ ನೀಡಿದ್ದರು. ದೂರದೃಷ್ಟಿಯ ನಾಯಕನಾಗಿ ಅಧಿಕಾರವನ್ನು ಜನಸೇವೆಗೆ ಬಳಸಿಕೊಂಡಿದ್ದರು ಎಂದು ಸ್ಮರಿಸಿದರು.

ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊತ್ತೂರು ಮಂಜುನಾಥ್ ಮಾತನಾಡಿ, ಚನ್ನಯ್ಯ ಅವರ ಹೆಸರು ಮತ್ತು ಸಾಧನೆಗಳನ್ನು ತಮಿಳುನಾಡು, ಕೇರಳ ಹಾಗೂ ಆಂಧ್ರಪ್ರದೇಶದ ಚುನಾವಣಾ ಸಂದರ್ಭಗಳಲ್ಲಿಯೂ ಪ್ರಸ್ತಾಪಿಸಿದ್ದೇನೆ. ಅವರ ಹೆಸರನ್ನು ಸಾರ್ವಜನಿಕ ವೇದಿಕೆಗಳಲ್ಲಿ ಬಳಸಿಕೊಳ್ಳುತ್ತಿದ್ದೇನೆ. ಚನ್ನಯ್ಯ ಅವರು ನಮ್ಮ ಮನೆಯಲ್ಲಿ ಹುಟ್ಟಿದ್ದರೆ, ನಾನು ದೇಶಮಟ್ಟದಲ್ಲಿ ಬೆಳೆಯುತ್ತಿದ್ದೆ ಎಂದರು.

ಚನ್ನಯ್ಯ ಅವರ ಕುಟುಂಬದವರು ರಾಜಕೀಯವಾಗಿ ಮುಂಚೂಣಿಗೆ ಬರಲು ಅವಕಾಶವಿದೆ. ಅವರ ಪೂರ್ವಜರು ಮಾಡಿದ ಕೆಲಸಗಳನ್ನು ಗುರುತಿಸಿ, ಕುಟುಂಬದವರು ಆ ಅವಕಾಶವನ್ನು ಬಳಸಿಕೊಳ್ಳಬೇಕು. ಕೋಲಾರ ಜನರಿಗೆ ಏನು ಅಗತ್ಯವಿದೆ ಎಂಬ ದೂರದೃಷ್ಟಿಯಿಂದ ಚನ್ನಯ್ಯ ಕೆಲಸ ಮಾಡಿದ್ದರು. ಬೆಂಗಳೂರಿನ ಅಭಿವೃದ್ಧಿಗೂ ಕೊಡುಗೆ ನೀಡಿದ್ದಾರೆ. ಅವರ ಸಾಧನೆಗಳು ಜಿಲ್ಲೆ ಮಾತ್ರವಲ್ಲ, ದೇಶದ ಜನರಿಗೂ ತಿಳಿಯುವಂತಾಗಬೇಕು ಎಂದು ಹೇಳಿದರು.

ಮಾಲೂರು ಶಾಸಕ ಹಾಗೂ ಕೋಮುಲ್ ಅಧ್ಯಕ್ಷ ಕೆ.ವೈ. ನಂಜೇಗೌಡ ಮಾತನಾಡಿ, ಟಿ. ಚನ್ನಯ್ಯ ಅವರು ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿದ ವ್ಯಕ್ತಿ. ಜಿಲ್ಲೆಯ ದಾಖಲೆಗಳಲ್ಲಿ ಅವರ ಸಾಧನೆಗಳು ಉಳಿದಿವೆ ಎಂದರೆ ಅದಕ್ಕೆ ಅವರ ದೂರದೃಷ್ಟಿ ಮತ್ತು ಸೇವೆಯೇ ಕಾರಣ. ಸಾಮಾನ್ಯ ಕುಟುಂಬದಲ್ಲಿ ಜನಿಸಿ ಅಸಾಧಾರಣ ಸಾಧನೆ ಮಾಡಿದ ಇಂತಹ ಮಹನೀಯರನ್ನು ನಾವೆಲ್ಲರೂ ಮರೆಯುತ್ತಿರುವುದು ವಿಷಾದನೀಯ. ಅವರ ಕುಟುಂಬದವರು ಎಲ್ಲರನ್ನೂ ಒಂದೆಡೆ ಸೇರಿಸಿ ಅವರ ನೆನಪುಗಳನ್ನು ಮೆಲುಕು ಹಾಕುವ ಅವಕಾಶ ಕಲ್ಪಿಸಿದ್ದಾರೆ ಎಂದರು

ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಮಾತನಾಡಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿದ್ದ ಟಿ. ಚನ್ನಯ್ಯ ಅವರ ವ್ಯಕ್ತಿತ್ವ ಮತ್ತು ಸಾಮಾಜಿಕ ಬದ್ಧತೆಗೆ ಇದು ಸಾಕ್ಷಿಯಾಗಿದೆ. ಅವರು ಕೋಲಾರ ನಗರದ ನಿರ್ಮಾತೃ. ಜನಸಾಮಾನ್ಯರ ಬಗ್ಗೆ ಅಪಾರ ಕಾಳಜಿ, ಬದ್ಧತೆ ಹಾಗೂ ದೂರದೃಷ್ಟಿ ಹೊಂದಿದ್ದ ಅವರ ಜೀವನ ನಮಗೆಲ್ಲ ದಾರಿದೀಪವಾಗಬೇಕು ಅವರು ಸ್ಥಾಪಿಸಿದ ನಚಿಕೇತನ ನಿಲಯದ ವಿದ್ಯಾರ್ಥಿನಿಲಯದಲ್ಲಿ ಅವರ ಹೆಸರಿನಲ್ಲಿ ವಸತಿ ಶಾಲೆ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..?ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ. ಶಿವಕುಮಾರ್, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ್ ಹನೀಫ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಲಾಜಿ ಚನ್ನಯ್ಯ, ಹಿರಿಯ ದಲಿತ ಮುಖಂಡರಾದ ಪಂಡಿತ್ ಮುನಿವೆಂಕಟಪ್ಪ, ಟಿ. ವಿಜಯಕುಮಾರ್, ದಲಿತ್ ನಾರಾಯಣಸ್ವಾಮಿ, ನರಸಾಪುರ ನಾರಾಯಣಸ್ವಾಮಿ, ಚನ್ನಯ್ಯ ಅವರ ಪುತ್ರಿ ಪಾರ್ವತಮ್ಮ, ಮೊಮ್ಮಕ್ಕಳಾದ ಡಾ. ಹರೀಷ್, ಎಂಜಿನಿಯರ್ ಹರೀಷ್, ದೀಪಕ್ ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ...

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....