ಅಕ್ರಮ ಗಣಿ ವಿರುದ್ಧ ಧ್ವನಿ ಎತ್ತಿದ ಮುರಳಿಯ ಕೊಲೆ ಹಾಗೂ ಮಹಿಳಾ ಸಮಾಜ ಸಂಸ್ಥೆಯ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆಎಂ ಸಂದೇಶ್ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನೂರಾರು ಸಂಖ್ಯೆಯಲ್ಲಿ ಸಂಘದ ಪದಾಧಿಕಾರಿಗಳು ಆಗಮಿಸಿ, ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಅಪರಾ ಜಿಲ್ಲಾಧಿಕಾರಿ ಎಸ್.ಎಂ ಮಂಗಳ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ವೇಳೆ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆಎಂ ಸಂದೇಶ್ ಮಾತನಾಡಿ, ಮಾಲೂರು ತಾಲೂಕಿನ ಮಾಸ್ತಿ ಹೋಬಳಿಯಲ್ಲಿ ಅಕ್ರಮ ಕಲ್ಲುಗಾರಿಕೆ ವಿರುದ್ಧ ಮುರಳಿ ಎಂಬ ಯುವಕನನ್ನು ಕೊಲೆ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ, ಆರ್ಥಿಕವಾಗಿ ಸಹಾಯ ಮಾಡಬೇಕೆಂದು ಒತ್ತಾಯಿಸಿದರು.
ಕೋಲಾರ ನಗರದ ಮಹಿಳಾ ಸಮಾಜ ಸಂಸ್ಥೆಯ ಆಡಳಿತದಲ್ಲಿ ಅಕ್ರಮ ಜರುಗಿದ್ದು, ಬಡಮಕ್ಕಳು ಓದಲು ಕಟ್ಟಿದ ಹಣವನ್ನು ದುರುಪಯೋಗಪಡಿಸಲಾಗಿದೆ. ಇದರ ಆಡಳಿತ ಮಂಡಳಿಯ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ
ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.




