ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

Date:

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್) ಆರ್ಥಿಕ ಸ್ಥಿತಿ ಸುಧಾರಿಸಿ, ಪುನಶ್ಚೇತನಗೊಳಿಸಲು ಅಪೆಕ್ಸ್ ಬ್ಯಾಂಕ್ ಹಾಗೂ ರಾಜ್ಯ ಸರ್ಕಾರದ ಸಹಕಾರದೊಂದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್. ರವಿ ತಿಳಿಸಿದರು.

- Advertisement -

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕಿಗೆ ಭೇಟಿ ನೀಡಿ, ಬ್ಯಾಂಕಿನ ನೂತನ ಅಧ್ಯಕ್ಷ ಹಾಗೂ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿದೆ ಮಾತನಾಡಿದ ಅವರು ಡಿಸಿಸಿ ಬ್ಯಾಂಕ್ ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳು, ಆರ್ಥಿಕ ಸ್ಥಿತಿಗತಿ ಹಾಗೂ ಬ್ಯಾಂಕಿನ ಪುನಶ್ಚೇತನಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಗಿದೆ. ರೈತರು ಮತ್ತು ಸಹಕಾರ ಕ್ಷೇತ್ರದ ಹಿತ ಕಾಯುವ ಉದ್ದೇಶದಿಂದ ಸ್ಥಾಪನೆಯಾಗಿರುವ ಈ ಬ್ಯಾಂಕನ್ನು ಉಳಿಸಿ ಬೆಳೆಸಲು ಎಲ್ಲರೂ ಸಹಕರಿಸಬೇಕು ಎಂದರು.

ಇದನ್ನು ಓದಿದ್ದೀರಾ..?ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕೇಂದ್ರ ಅಥವಾ ರಾಜ್ಯ ಸರ್ಕಾರದ ಮುಂದೆ ಪ್ರಸ್ತುತ ಸಾಲ ಮನ್ನಾ ಮಾಡುವ ಯಾವುದೇ ಸ್ಪಷ್ಟ ಪ್ರಸ್ತಾವನೆ ಇಲ್ಲ. ರೈತರಿಗೆ ಸಬ್ಸಿಡಿ ಹಾಗೂ ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ ನೀಡುವ ವ್ಯವಸ್ಥೆಯಿದ್ದು, ಸಾಲ ಮನ್ನಾ ಕುರಿತು ಯಾವುದೇ ಯೋಜನೆ ಘೋಷಣೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಡಿಸಿಸಿ ಬ್ಯಾಂಕಿನ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಸಾಲ ವಸೂಲಾತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಬಾಕಿ ಸಾಲಗಳನ್ನು ವಸೂಲಿ ಮಾಡುವಾಗ ಯಾರಿಗೂ ಮುಲಾಜು ತೋರಿಸುವುದಿಲ್ಲ. ಬ್ಯಾಂಕಿನಲ್ಲಿ ಅಕ್ರಮ ಎಸಗಿರುವವರು ಹಾಗೂ ತಪ್ಪಿತಸ್ಥರ ವಿರುದ್ಧ ಪರಿಶೀಲನೆ ನಡೆಸಿ, ಕಾನೂನುಬದ್ಧವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಅಪೆಕ್ಸ್ ಬ್ಯಾಂಕ್ ಮತ್ತು ರಾಜ್ಯ ಸರ್ಕಾರದ ನೆರವಿನೊಂದಿಗೆ ಡಿಸಿಸಿ ಬ್ಯಾಂಕನ್ನು ಮತ್ತೆ ಸದೃಢಗೊಳಿಸಿ, ರೈತರಿಗೆ ಅಗತ್ಯ ಸಾಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಬೆಂಬಲಕ್ಕೆ ನಿಲ್ಲಲಾಗುವುದು. ಬ್ಯಾಂಕಿನ ಮೇಲಿನ ವಿಶ್ವಾಸವನ್ನು ಮರುಸ್ಥಾಪಿಸಿ, ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಹಾಗೂ ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಾಪುರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೊತ್ತೂರು ಮಂಜುನಾಥ್, ಉಪಾಧ್ಯಕ್ಷ ಮೋಹನ್ ರೆಡ್ಡಿ, ನಿರ್ದೇಶಕರಾದ ಖಾಜಿಕಲ್ಲಹಳ್ಳಿ ಮುನಿರಾಜು ಸೇರಿದಂತೆ ಅಪೆಕ್ಸ್ ಬ್ಯಾಂಕ್,‌ ಡಿಸಿಸಿ ಬ್ಯಾಂಕ್ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ...

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...

ಕೋಲಾರ | ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಪರ ಮತ ಯಾಚನೆ

ಮುಂಬರುವ ಜಿ.ಪಂ,‌ ತಾ.ಪಂ. ಗ್ರಾ.ಪಂ.ಗೆ ಈ ಚುನಾವಣೆಯೇ ಪ್ರಮುಖ ದಾರಿ. ನಂತರ...

ಯುವಜನತೆ ದುಶ್ಚಟಗಳಿಂದ ದೂರವಿದ್ದು ಉತ್ತಮ ನಾಗರಿಕರಾಗಬೇಕು: ಹಜ್ರತ್ ಎಂ.ಪಿ. ಮುಜಮ್ಮಿಲ್ ಸಾಹೇಬ್ ಕರೆ

ಮೈಸೂರಿನ ಗೌಸಿಯಾ ನಗರದ ಉಸ್ಮಾನಿಯಾ ಬ್ಲಾಕ್‌ನ ನೌಜವಾನ್ ಕಮಿಟಿ ವತಿಯಿಂದ ಪ್ರತಿವರ್ಷದಂತೆ...