ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

Date:

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ವತಿಯಿಂದ ಶಾಸಕ ಕೊತ್ತೂರು ಜಿ. ಮಂಜುನಾಥ್ ಅವರ ಆಪ್ತ ಸಹಾಯಕ ತಿಪ್ಪೇಸ್ವಾಮಿಗೆ ಸೋಮವಾರ ಮನವಿ ಸಲ್ಲಿಸಿದರು.

- Advertisement -

ಸಿಐಟಿಯು ರಾಜ್ಯ ಸಮಿತಿ ನೇತೃತ್ವದಲ್ಲಿ ಸೆ.25ರಿಂದ ಶಾಸಕರು ಹಾಗೂ ಸಚಿವರ ಮನೆಗಳ ಮುಂದೆ ಪ್ರತಿಭಟನೆ ನಡೆಸುವ ನಿರ್ಧಾರದ ಹಿನ್ನೆಲೆಯಲ್ಲಿ ಮನವಿ ಸಲ್ಲಿಸಿದ ಅವರು ಸೆ.8ರಂದು ಸಿಐಟಿಯು ಸಂಯೋಜಿತ 184 ಸಂಘಟನೆಗಳ ನೇತೃತ್ವದಲ್ಲಿ ಅಂಗನವಾಡಿ, ಬಿಸಿಯೂಟ, ಗ್ರಾಮ ಪಂಚಾಯಿತಿ, ಬೀಡಿ, ಪ್ಲಾಂಟೇಷನ್, ಟೈಲ್ಸ್, ಆಟೊ, ಟ್ಯಾಕ್ಸಿ, ಸಾರಿಗೆ, ಚಾಲಕರು, ಕಟ್ಟಡ, ಹಮಾಲಿ, ಮನೆಗೆಲಸ, ಟೈಲರ್‌, ಬೀದಿಬದಿ ವ್ಯಾಪಾರಿಗಳು, ಹಾಸ್ಟೆಲ್‌, ಗುತ್ತಿಗೆ, ಮುನ್ಸಿಪಲ್ ಹಾಗೂ ಕೈಗಾರಿಕಾ ಕಾರ್ಮಿಕರು ಸೇರಿದಂತೆ 25 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡ ಪ್ರತಿಭಟನೆಯ ವೇಳೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮನವಿ ಸ್ವೀಕರಿಸಿದ್ದರು. ಮುಖ್ಯಮಂತ್ರಿ ಸೆ.15ರಂದು ಕಾರ್ಮಿಕರೊಂದಿಗೆ ಮಾತುಕತೆ ನಡೆಸಲು ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಅಂದಿನ ಹೋರಾಟವನ್ನು ಹಿಂಪಡೆಯಲಾಗಿತ್ತು. ಆದರೆ ನಿಗದಿಯಂತೆ ಸಭೆ ನಡೆಸದೆ ಸರ್ಕಾರ ಮಾತು ತಪ್ಪಿದೆ ಎಂದು ಆರೋಪಿಸಿ ಸೆ.25ರಿಂದ ಶಾಸಕರು ಹಾಗೂ ಸಚಿವರ ಮನೆಗಳ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಕನಿಷ್ಠ ವೇತನದ ಪರಿಷ್ಕೃತ ಅಧಿಸೂಚನೆಯನ್ನು ತಕ್ಷಣ ಜಾರಿಗೊಳಿಸಬೇಕು. ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಯೋಜನಾ ಕಾರ್ಮಿಕರಿಗೆ ಕನಿಷ್ಠ ವೇತನ ಹಾಗೂ ಉದ್ಯೋಗ ಭದ್ರತೆ ಕಲ್ಪಿಸಬೇಕು. ಗುತ್ತಿಗೆ ಹಾಗೂ ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ ಕಾಯಂ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು. ಈಎಸ್‌ಐ, ಭವಿಷ್ಯ ನಿಧಿ, ಗ್ರಾಚ್ಯುಟಿ ಹಾಗೂ ಬೋನಸ್‌ ಸೌಲಭ್ಯಗಳ ವೇತನ ಮಿತಿಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ರೈತರ ಭೂಸ್ವಾಧೀನ ಪ್ರಕ್ರಿಯೆ ಕೈಬಿಟ್ಟು ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸಬೇಕು. ಆಹಾರ, ಆರೋಗ್ಯ ಮತ್ತು ಶಿಕ್ಷಣ ಸೇವೆಗಳ ಗುಣಮಟ್ಟ ಹೆಚ್ಚಿಸಿ ಖಾಸಗೀಕರಣ ತಡೆಯಬೇಕು. ಸಾರ್ವಜನಿಕ ಸಾರಿಗೆ ಹಾಗೂ ವಿದ್ಯುತ್‌ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಬಾರದು. ವಸತಿರಹಿತ ಕಾರ್ಮಿಕರಿಗೆ ವಸತಿ ಕಲ್ಪಿಸಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಪಡೆಯುವ ಆದಾಯ ಮಿತಿಯನ್ನು ಹೆಚ್ಚಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು ಸಂಘಟನೆಯ ಕಾರ್ಯದರ್ಶಿ ಭೀಮರಾಜ್ ಸೇರಿದಂತೆ ಪದಾಧಿಕಾರಿಗಳು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...