ಕೋಲಾರ | ಬಿಸಿಯೂಟ ಮಾತೆಯರಿಗೆ ವೇತನ ವಿಲ್ಲದೆ ಪರದಾಟ ; ಅಧಿಕಾರಿಗಳ ವಿರುದ್ಧ ಕಲ್ವಮಂಜಲಿರಾಮುಶಿವಣ್ಣ ಆಕ್ರೋಶ

Date:

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಸಿಯೂಟ ಮಾತೆಯರಿಗೆ ಕಳೆದ ಮೂರು ತಿಂಗಳಿAದ ವೇತನ ಬಿಡುಗಡೆಯಾಗದೆ ಸಂಕಷ್ಟ ಎದುರಾಗಿದ್ದು, ಕೂಡಲೇ ಬಾಕಿ ವೇತನವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜಿಲ್ಲಾ ಪಂಚಾಯಿತಿ ಅಕ್ಷರ ದಾಸೋಹ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಯಪ್ಪ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.

ರೈತ ಸಂಘದ ಯುವ ಘಟಕದ ಅಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ ಮಾತನಾಡಿ ಅಲ್ಪಸಂಬಳಕ್ಕೆ ಕೆಲಸ ಮಾಡುತ್ತಿರುವ ಬಿಸಿಯೂಟ ಮಾತೆಯರಿಗೆ ಬರಬೇಕಾದ ೪,೬೦೦ ರಿಂದ ೪,೭೦೦ ರೂಪಾಯಿ ವೇತನವನ್ನು ನೀಡಲು ಸರ್ಕಾರದ ಬಳಿ ಹಣವಿಲ್ಲವೇ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬಿಸಿಯೂಟ ಮಾತೆಯರ ಕಷ್ಟವನ್ನು ಅರ್ಥ ಮಾಡಿಕೊಂಡು ಕೂಡಲೇ ಎರಡು-ಮೂರು ತಿಂಗಳ ಬಾಕಿ ವೇತನವನ್ನು ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಜಿಲ್ಲಾ ಪಂಚಾಯಿತಿ ಮುಂದೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕ ರಾಜ್ಯ ಸರ್ಕಾರದ ೩,೬೦೦ ರೂಪಾಯಿ ಹಾಗೂ ಕೇಂದ್ರ ಸರ್ಕಾರದ ೧,೦೦೦ ರೂಪಾಯಿ ಸೇರಿ ಒಟ್ಟು ವೇತನ ಪ್ರತಿ ತಿಂಗಳು ೫ನೇ ತಾರೀಖಿನ ಒಳಗಾಗಿ ಬಿಡುಗಡೆಯಾಗಬೇಕಾಗಿತ್ತು. ಆದರೆ ಮೂರು ತಿಂಗಳು ಕಳೆದರೂ ವೇತನ ಸಿಗದೆ ಬಿಸಿಯೂಟ ಮಾತೆಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಹಾಗೂ ಸಂಬAಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ವೇತನ ಬಿಡುಗಡೆ ಮಾಡಬೇಕು. ತಪ್ಪಿದ್ದಲ್ಲಿ ಶಾಲೆಗಳಲ್ಲಿ ಅಡುಗೆ ಮಾಡುವ ಕೆಲಸವನ್ನು ಸ್ಥಗಿತಗೊಳಿಸಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..?​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ಈ ಸಂದರ್ಭದಲ್ಲಿ ಬಿಸಿಯೂಟ ಮುಖಂಡರಾದ ಮಮತಾ, ರಾಧಮ್ಮ, ಎಸ್. ವರಲಕ್ಷ್ಮಿ, ನಾರಾಯಣಮ್ಮ ಹಾಗೂ ಕೋಲಾರ ತಾಲ್ಲೂಕು ಪಂಚಾಯಿತಿ ಅಕ್ಷರ ದಾಸೋಹ ಅಧಿಕಾರಿ ಹೇಮಂತ್ ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಗಣಪತಿ ವಿಸರ್ಜನೆ ವೇಳೆ ಮಸೀದಿ ಕಿಟಕಿ ಗಾಜು ಒಡೆದು, ಗೊಜ್ಜು ತೂರಾಟ ಆರೋಪ: ದೂರು–ಪ್ರತಿದೂರು ದಾಖಲು

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿಯ ಕಿಟಕಿ ಗಾಜನ್ನು ಕಲ್ಲಿನಿಂದ...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...

ಅಪೌಷ್ಟಿಕತೆಯ ನೆರಳಲ್ಲಿ ಕಲ್ಯಾಣ ಕರ್ನಾಟಕ; ರಾಯಚೂರಿನ ಶೇ. 49.5 ಮಕ್ಕಳಲ್ಲಿ ಪೋಷಕಾಂಶದ ಕೊರತೆ

ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS 2023–24) ಕಲ್ಯಾಣ ಕರ್ನಾಟಕ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...