ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ ಗ್ರಾಮದಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಡೇರಿ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಕೋಮುಲ್ ನಿರ್ದೇಶಕ ಚಂಚಿಮಲೆ ಬಿ. ರಮೇಶ್ ಅವರು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಹಾಲು ಉತ್ಪಾದಕರ ಅನುಕೂಲಕ್ಕಾಗಿ ಕೋಮುಲ್, ಕೆಎಂಎಫ್ ಹಾಗೂ ಧರ್ಮಸ್ಥಳ ಸಂಘದಿಂದ ಡೇರಿ ಕಟ್ಟಡ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡಲಾಗುತ್ತದೆ. ಹಾಲು ಉತ್ಪಾದಕರು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಂಘಗಳ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಹೇಳಿದರು.
ಕೋಮುಲ್ ಮತ್ತು ಕೆಎಂಎಫ್ ವತಿಯಿಂದ ಹಾಲು ಉತ್ಪಾದಕರಿಗೆ ಹಾಲಿನ ಗುಣಮಟ್ಟ ಆಧಾರಿತ ದರ, ಹಾಲು ಉತ್ಪಾದನೆ ಹೆಚ್ಚಿಸಲು ತರಬೇತಿ, ಪಶುಗಳಿಗೆ ಆರೋಗ್ಯ ಸೇವೆ, ಮೇವಿನ ಸೌಲಭ್ಯ ಹಾಗೂ ಅಗತ್ಯವಿರುವ ಕಡೆಗಳಲ್ಲಿ ಹಾಲು ಶೇಖರಣಾ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಉತ್ಪಾದಕರು ಸಂಘದ ಮೂಲಕ ದೊರೆಯುವ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದರು.
ಇದನ್ನು ಓದಿದ್ದೀರಾ..?ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ
ಈ ಸಂದರ್ಭದಲ್ಲಿ ಕೋಮುಲ್ ಉಪ ವ್ಯವಸ್ಥಾಪಕ ಡಾ. ಮಹೇಶ್, ವಿಸ್ತರಣಾಧಿಕಾರಿ ಸಮೀರ್ ಪಾಷ, ಪಟ್ಟಣ ಪಂಚಾಯಿತಿ ಸದಸ್ಯ ತಾಸಿಫ್ ಖಾನ್, ಡೇರಿ ಅಧ್ಯಕ್ಷ ಎಚ್.ಆರ್. ಸತ್ಯನಾರಾಯಣ, ಉಪಾಧ್ಯಕ್ಷೆ ಶ್ರೀದೇವಿ, ನಿರ್ದೇಶಕರಾದ ವೆಂಕಟಚಲ, ಮುನಿಯಪ್ಪ, ಮುನಿಕೃಷ್ಣ, ವೇಣುಗೋಪಾಲ್, ಮಂಜುನಾಥ್, ಗಾಯತ್ರಿ, ರೇಣುಕಾ, ವೆಂಕಟಲಕ್ಷ್ಮೀ, ಕಾರ್ಯದರ್ಶಿ ರಮೇಶ್ ಕುಮಾರ್, ಹಾಲು ಪರೀಕ್ಷಕ ಶಿವಕುಮಾರ್, ಗ್ರಾಪಂ ಮಾಜಿ ಸದಸ್ಯ ಮುನಿಯಪ್ಪ ಸೇರಿದಂತೆ ಗ್ರಾಮಸ್ಥರು ಹಾಗೂ ಹಾಲು ಉತ್ಪಾದಕರು ಇದ್ದರು.




