ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಶಾಸಕ ಕೊತ್ತೂರು ಮಂಜುನಾಥ್ ಅವರು ತಮ್ಮ ಸ್ವಂತ ಹಣದಿಂದ ₹50 ಸಾವಿರ ಆರ್ಥಿಕ ನೆರವನ್ನು ಶಾಸಕರ ಪರವಾಗಿ ಕುಡಾ ಅಧ್ಯಕ್ಷ ಮೊಹಮ್ಮದ್ ಹನೀಫ್ ಅವರ ಮೂಲಕ ನೀಡಲಾಯಿತು.
ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಪ್ಸರ್ ಮಾತನಾಡಿ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸುವುದು ಕಷ್ಟವಾಗಬಾರದು ಎಂಬ ಉದ್ದೇಶದಿಂದ ಶಾಸಕರು ವೈಯಕ್ತಿಕವಾಗಿ ನೆರವು ನೀಡುತ್ತಿದ್ದಾರೆ. ಶಿಕ್ಷಣಕ್ಕೆ ಆರ್ಥಿಕ ತೊಂದರೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ನೆರವಾಗುವ ಮೂಲಕ ಅವರ ಭವಿಷ್ಯ ರೂಪಿಸುವ ಕಾರ್ಯಕ್ಕೆ ಕೈಜೋಡಿಸಿದ್ದಾರೆ ಎಂದರು.
ನಶೆಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತಿರುವ ಯುವಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದಲೂ ಶಾಸಕ ಕೊತ್ತೂರು ಮಂಜುನಾಥ್ ಅವರು 50 ಸಾವಿರ ಪ್ರೋತ್ಸಾಹಧನ ನೀಡಿದ್ದಾರೆ ಕೆಲವು ದಿನಗಳ ಹಿಂದೆ ಕ್ಯಾನ್ಸರ್ ಪೀಡಿತರ ನೆರವಿಗಾಗಿ ₹5 ಲಕ್ಷ ನೀಡುವುದಾಗಿ ಶಾಸಕರು ಘೋಷಿಸಿದ್ದರು. ಬಡವರು, ವಿದ್ಯಾರ್ಥಿಗಳು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ತಮ್ಮಿಂದಾದ ನೆರವು ನೀಡುತ್ತಿದ್ದು, ಅವರ ಮಾನವೀಯ ಸೇವೆ ಶ್ಲಾಘನೀಯ ಎಂದರು.
ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್ ಮಾತನಾಡಿ ಬಡ ರೋಗಿಗಳು ಮತ್ತು ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸಿ ಆರ್ಥಿಕ ನೆರವು ನೀಡುತ್ತಿರುವ ಶಾಸಕರಿಗೆ ಕೃತಜ್ಞತೆ ಸಲ್ಲಿಸುತ್ತೇವೆ. ಸಮಾಜದ ಅಗತ್ಯವಿರುವ ವರ್ಗಗಳಿಗೆ ನೆರವು ನೀಡುವ ಇಂತಹ ಕಾರ್ಯಗಳು ಮತ್ತಷ್ಟು ಜನರಿಗೆ ಪ್ರೇರಣೆಯಾಗಬೇಕು ಎಂದರು.
ಇದನ್ನು ಓದಿದ್ದೀರಾ..?ಕೋಲಾರ | ನನ್ನ ಕೈಗೆ ಸಿಕ್ಕಿದರೆ ಯಮನ ಕೈಗೆ ಸಿಕ್ಕಂತೆ: ಡಿಸಿಸಿ ಬ್ಯಾಂಕ್ ಅಧಿಕಾರಿ, ಸಿಬ್ಬಂದಿಗೆ ನೂತನ ಅಧ್ಯಕ್ಷ ಕೊತ್ತೂರು ಮಂಜುನಾಥ್ ಖಡಕ್ ಎಚ್ಚರಿಕೆ
ಈ ಸಂದರ್ಭದಲ್ಲಿ ಮೌಲಾನಾ ಆಕ್ತರ್ ಹುಸೇನ್, ಬಾಬರ್, ಆಸ್ಪತ್ರೆ ಅಭಿವೃದ್ಧಿ ಸಮಿತಿ ಸದಸ್ಯ ವಸೀಂ, ಇಮ್ರಾನ್, ಮೀಮ್, ಅನೀಸ್, ನಯಾಜ್, ರಫಿ, ರೋಶನ್, ಹಿದಾಯತ್, ತನ್ನು, ಬಾಬಜಾನ್, ಹುಮಾಯುನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು





