ಕೋಲಾರ | ವಕೀಲರ ಸಂಘದ ಬೇಡಿಕೆಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸ್ಪಂದನೆ

Date:

ಜಿಲ್ಲಾ ವಕೀಲರ ಸಂಘದ ಕಚೇರಿಗೆ ಶಾಸಕ ಕೊತ್ತೂರು ಜಿ. ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಸೋಮವಾರ ಭೇಟಿ ನೀಡಿ ವಕೀಲರ ಸಂಘದ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಚರ್ಚಿಸಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್, ಕೋರ್ಟ್ ಆವರಣದಲ್ಲಿ 10 ಲಕ್ಷ ವೆಚ್ಚದಲ್ಲಿ ಎರಡು ಹೈಮಾಸ್ಕ್ ಲೈಟ್, 5 ಲಕ್ಷ ವೆಚ್ಚದಲ್ಲಿ ಶುದ್ಧ ನೀರಿನ ಘಟಕ ಹಾಗೂ ₹5 ಲಕ್ಷ ವೆಚ್ಚದಲ್ಲಿ ಗ್ರಂಥಾಲಯಕ್ಕೆ ಅಗತ್ಯ ಪುಸ್ತಕಗಳ ಖರೀದಿಗೆ 20 ಲಕ್ಷ ಅನುದಾನವನ್ನು ನಾಳೆಯೇ ಬಿಡುಗಡೆ ಮಾಡಲಾಗುವುದು ಜಾಗ ಗುರುತಿಸಿ ಕೆಲಸ ಪ್ರಾರಂಭಿಸುವಂತೆ ಸೂಚನೆ ನೀಡಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಕಗ್ಗೊಲೆ: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಹೊಸ ವಕೀಲರ ಭವನ ನಿರ್ಮಾಣಕ್ಕೆ ಕೋರ್ಟ್ ಪಕ್ಕದಲ್ಲಿರುವ ತೋಟಗಾರಿಕೆ ಇಲಾಖೆಯ ಜಾಗವನ್ನು ಬಳಸಿಕೊಳ್ಳಲು ಕಂದಾಯ ಹಾಗೂ ತೋಟಗಾರಿಕೆ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಾಗ ಮಂಜೂರು ಮಾಡಿಸಲಾಗುವುದು. ಜಾಗ ಮಂಜೂರಾದ 10 ದಿನಗಳೊಳಗೆ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

ಕೆಲವರು ಸರ್ಕಾರದಲ್ಲಿ ಹಣದ ಕೊರತೆಯಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಸರ್ಕಾರದಲ್ಲಿ ತೆರಿಗೆ ಸಂಗ್ರಹ ಹೆಚ್ಚಿದ್ದು, ವಿಶೇಷ ಅನುದಾನವಾಗಿ 50 ಕೋಟಿ, 100 ಕೋಟಿ ನೀಡುವಷ್ಟು ಆರ್ಥಿಕ ಸಾಮರ್ಥ್ಯ ಸರ್ಕಾರಕ್ಕಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಮಾತನಾಡಿ, ವಕೀಲರ ಸಂಘದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಕೋವಿಡ್‌ಗೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಮೂಲಕ ವಕೀಲರ ತಾಲೂಕು ಮತ್ತು ಜಿಲ್ಲಾ ಸಂಘಗಳಿಗೆ ಅನುದಾನ ನೀಡಲಾಗುತ್ತಿತ್ತು. ಈ ವ್ಯವಸ್ಥೆ ಪುನರಾರಂಭಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಹಾಗೂ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು ಎಂದರು.

ಜಿಲ್ಲೆಯ ಶಿಕ್ಷಕರ ಗುರುಭವನಕ್ಕೆ ಶಾಸಕ ಕೊತ್ತೂರು ಮಂಜುನಾಥ್ ₹2.50 ಕೋಟಿ ಅನುದಾನ ನೀಡಿದ ಮಾದರಿಯಲ್ಲೇ ವಕೀಲರ ಭವನಕ್ಕೂ ನೆರವು ನೀಡಲಾಗುವುದು. ತೋಟಗಾರಿಕೆ ಇಲಾಖೆಯ ಜಾಗ ದೊರೆಯದಿದ್ದರೆ ಪರ್ಯಾಯ ಜಾಗ ಗುರುತಿಸಿ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸ್ ಬೇಡಿಕೆ ಪತ್ರ ನೀಡಿ ಮಾತನಾಡಿದ ಅವರು, ವಕೀಲರ ಸಂಘದಲ್ಲಿ ಸುಮಾರು 1,200 ವಕೀಲರು ಕಾರ್ಯನಿರ್ವಹಿಸುತ್ತಿದ್ದು, ಹೊಸ ಕಟ್ಟಡದ ಅಗತ್ಯವಿದೆ. ಕೋರ್ಟ್ ಆವರಣದಲ್ಲಿ ಎರಡು ಹೈಮಾಸ್ಕ್ ಲೈಟ್, ಶುದ್ಧ ನೀರಿನ ಘಟಕ, ಸೋಲಾರ್ ಪ್ಲಾಂಟ್ ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಅನುಗುಣವಾದ ಗ್ರಂಥಾಲಯವನ್ನು ನಿರ್ಮಿಸಬೇಕೆಂದು ಮನವಿ ಸಲ್ಲಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಹೆಣ್ಣುಮಕ್ಕಳ ರಕ್ಷಣೆಗೆ ಕಠಿಣ ಕಾನೂನು ಜಾರಿಗೆ ನಳಿನಿಗೌಡ ಆಗ್ರಹ

ವಕೀಲರ ಸಂಘದ ಬೇಡಿಕೆಗಳನ್ನು ಈಡೇರಿಸಲು ಭರವಸೆ ನೀಡಿದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ಸಂಘದ ಪದಾಧಿಕಾರಿಗಳು ಸನ್ಮಾನಿಸಲಾಯಿತು ಸಂಘದ ಕಾರ್ಯದರ್ಶಿ ಆದರ್ಶ್ ನಿರೂಪಿಸಿ ವಂದಿಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪು ಯಾರ್ಡ್ ಬೀಚ್‌ನಲ್ಲಿ 5.710 ಕೆ.ಜಿ. ಗಾಂಜಾ ವಶಕ್ಕೆ: ಇಬ್ಬರ ಬಂಧನ

ಕಾಪು ಹಾಗೂ ಮಟ್ಟು ಬೀಚ್‌ಗಳಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಗಾಂಜಾ ಮಾರಾಟ...

ರಾಯಚೂರು | 10 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಇಲಾಖೆ ಕಾರ್ಮಿಕರ ಧರಣಿ

ತುಂಗಭದ್ರಾ ನೀರಾವರಿ ಇಲಾಖೆಯ ಮಾನ್ವಿ ಉಪವಿಭಾಗದ ಕಾರ್ಮಿಕರಿಗೆ ಕಳೆದ 10 ತಿಂಗಳಿನಿಂದ...

ರಾಯಚೂರು | ಸರ್ವಿಸ್ ರಸ್ತೆ ನಿರ್ಮಿಸಲು ರೈತರು, ಗ್ರಾಮಸ್ಥರು ಪ್ರತಿಭಟನೆ

ಸಿರವಾರ ತಾಲ್ಲೂಕಿನ ಗೋಲದಿನ್ನಿ ಗ್ರಾಮದ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ...