ಅಖಿಲ ಭಾರತ ಮಾನವ ಹಕ್ಕುಗಳ ಮಂಡಳಿಯ ನೂತನ ರಾಜ್ಯ ಕಾರ್ಯದರ್ಶಿಯಾಗಿ ನಿಜಾಮುದ್ದೀನ್ ಹಾಗೂ ಕೋಲಾರ ಜಿಲ್ಲಾ ಕಾರ್ಯದರ್ಶಿಯಾಗಿ ಏಕಲವ್ಯ ಅವರನ್ನು ನೇಮಕ ಮಾಡಲಾಗಿದೆ. ಮಂಡಳಿಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷ ಡಾ. ಸುರೇಶ್ ಕುಮಾರ್ ಪೆಂಡಂ ಅವರ ಆದೇಶದ ಮೇರೆಗೆ ಹಾಗೂ ರಾಜ್ಯಾಧ್ಯಕ್ಷೆ ಜರಿನಾ ತಾಜ್ ಅವರ ಅನುಮೋದನೆಯೊಂದಿಗೆ ಈ ನೇಮಕಾತಿ ನಡೆದಿದೆ.
ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ದೆಹಲಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಪಿಐಎಂ ಬೆಂಬಲ
ರಾಜ್ಯ ಕಾರ್ಯಾಧ್ಯಕ್ಷ ಡಾ. ಆನಂದ್ ಕುಮಾರ್ ಅವರ ನೇತೃತ್ವದಲ್ಲಿ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ನೂತನ ಪದಾಧಿಕಾರಿಗಳು ಮಾನವ ಹಕ್ಕುಗಳ ರಕ್ಷಣೆ, ಜನಸಾಮಾನ್ಯರಿಗೆ ನ್ಯಾಯ ಒದಗಿಸುವುದು ಹಾಗೂ ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಮಂಡಳಿಯ ಉದ್ದೇಶಗಳನ್ನು ಜನರಿಗೆ ತಲುಪಿಸುವ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ತಿಳಿಸಲಾಗಿದೆ.




