ಕೋಲಾರ | ಕುಡಿಯುವ ನೀರಿನ ದೂರು ಬಂದರೆ ಅಧಿಕಾರಿಗಳ ಅಮಾನತು: ಶಾಸಕ ಕೊತ್ತೂರು ಮಂಜುನಾಥ್

Date:

ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ದೂರುಗಳು ಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಅಮಾನತುಗೊಳಿಸಲಾಗುವುದು ಎಂದು ಶಾಸಕ ಕೊತ್ತೂರು ಮಂಜುನಾಥ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

- Advertisement -

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದ ಅವರು, ಬೆಸ್ಕಾಂ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಆರ್‌ಡಿಪಿಆರ್ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಹಾಗೂ ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು ಈಗಾಗಲೇ ಮುಖ್ಯಮಂತ್ರಿ ಹಾದಿಯಾಗಿ ಉಸ್ತುವಾರಿ ಸಚಿವರು ಆದೇಶದಂತೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...

ದೊಡ್ಡಹಸಾಳ ಗ್ರಾಮದ ಕೊಳವೆಬಾವಿಯಲ್ಲಿ ಫ್ಲೋರೈಡ್ ಅಂಶವಿರುವ ನೀರು ಬರುತ್ತಿರುವ ಬಗ್ಗೆ ಮಾಹಿತಿ ಪಡೆದ ಶಾಸಕರು, ಕೂಡಲೇ ಹೊಸ ಕೊಳವೆಬಾವಿ ಕೊರೆಯಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಮೂರು ಹಾಸ್ಟೆಲ್‌ಗಳಲ್ಲೂ ನೀರಿನ ಸಮಸ್ಯೆ ಇರುವ ಬಗ್ಗೆ ಪಿಡಿಒ ಮಾಹಿತಿ ನೀಡಿದರು ನರಸಾಪುರ ಸಮುದಾಯ ಆಸ್ಪತ್ರೆಗೆ ನೀರಿನ ಸಂಪರ್ಕ ಕಲ್ಪಿಸುವಂತೆ ಮೂರು ತಿಂಗಳ ಹಿಂದೆಯೇ ಸೂಚಿಸಿದ್ದರೂ ಕಾಮಗಾರಿ ಪೂರ್ಣಗೊಳಿಸದಿರುವ ಬಗ್ಗೆ ನರಸಾಪುರ ಪಿಡಿಒ ಅವರನ್ನು ಶಾಸಕರು ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು

ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮಗಳ ಪಟ್ಟಿಯನ್ನು ನೀಡುವಂತೆ ಸೂಚಿಸಿದ ಅವರು, ಅಂತಹ ಗ್ರಾಮಗಳಿಗೆ ಹೆಚ್ಚುವರಿ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳನ್ನು ಒದಗಿಸಲಾಗುವುದು ಕೆಟ್ಟುಹೋಗಿರುವ ಕೊಳವೆಬಾವಿ ಹಾಗೂ ಶುದ್ಧೀಕರಣ ಘಟಕಗಳನ್ನು ತಕ್ಷಣ ದುರಸ್ತಿಪಡಿಸಬೇಕು. ಜಾನುವಾರುಗಳಿಗೆ ನೀರಿನ ತೊಟ್ಟಿಗಳ ವ್ಯವಸ್ಥೆ ಮಾಡಬೇಕು. ಟಾಸ್ಕ್ ಫೋರ್ಸ್‌ನಲ್ಲಿ ಹಣದ ಕೊರತೆಯಿಲ್ಲ ಎಷ್ಟು ಬೇಕಿದ್ದರೂ ಸರ್ಕಾರ ಕೊಡಲು ಸಿದ್ದವಿದೆ ಎಂದರು.

ನಗರದ ವಾರ್ಡ್‌ಗಳಲ್ಲಿ ಸ್ವಚ್ಛತೆ ಕಾಪಾಡುವುದು, ಪಾದಚಾರಿ ಮಾರ್ಗಗಳನ್ನು ತೆರವುಗೊಳಿಸುವುದು ಹಾಗೂ ಜನರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸರ್ಕಾರಿ ಆಸ್ತಿಗೆ ಯಾರಾದರೂ ಅಡ್ಡಿಪಡಿಸಿದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿ ಎಪಿಎಂಸಿ ಆವರಣದ ಕಸ ಹಾಗೂ ಟೊಮೆಟೊ ತ್ಯಾಜ್ಯವನ್ನು ಅಮ್ಮೇರಹಳ್ಳಿ ಕೆರೆ ಬಳಿ ಸುರಿಯದಂತೆ ಎಪಿಎಂಸಿ ಅಧಿಕಾರಿಗಳಿಗೆ ಪೋನ್ ಮೂಲಕವೇ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕೆರೆಯಿಂದ ನಗರಕ್ಕೆ ನೀರು ಹರಿಯುವುದರಿಂದ ಅದರ ಸ್ವಚ್ಛತೆ ಕಾಪಾಡುವುದು ಅಧಿಕಾರಿಗಳ ಜವಾಬ್ದಾರಿ ಎಂದರು.

ಬೆಸ್ಕಾಂ ಎಂಜಿನಿಯರ್ ಬಸವರಾಜು ಅವರನ್ನು ಉದ್ದೇಶಿಸಿ, ಮೂರು ವರ್ಷಗಳಿಂದ ಇಲ್ಲೇ ಕಾರ್ಯನಿರ್ವಹಿಸುತ್ತಿದ್ದು, ಹಿಂದೆ ಉತ್ತಮವಾಗಿ ಕೆಲಸ ಮಾಡುತ್ತಿದ್ದಿರಿ. ಈಗ ಏನಾಯಿತು ಎಂದು ಶಾಸಕರು ಪ್ರಶ್ನಿಸಿ, ಕಾರ್ಯವೈಖರಿ ಸುಧಾರಿಸಿಕೊಳ್ಳುವಂತೆ ಎಚ್ಚರಿಕೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್‌ಕುಮಾರ್ ಮಾತನಾಡಿ, ಅಧಿವೇಶನ ಮುಗಿದ ಬಳಿಕ ಮುಖ್ಯಮಂತ್ರಿ ಕೋಲಾರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಎಲ್ಲ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಪ್ರತಿ ವಾರ ಟಾಸ್ಕ್ ಫೋರ್ಸ್ ಸಭೆ ನಡೆಸಿ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಬೇಕು ಎಂದರು.

ತಹಶೀಲ್ದಾರ್ ಎಚ್. ಶ್ರೀನಿವಾಸ್ ಮಾತನಾಡಿ, ಮುಖ್ಯಮಂತ್ರಿ ಸೂಚನೆಯಂತೆ ಸ್ಮಶಾನ ಹಾಗೂ ಗುಂಡುತೋಪುಗಳ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಕಾನೂನುಬದ್ಧವಾಗಿ ಜನರಿಗೆ ಮನವರಿಕೆ ಮಾಡಬೇಕು. ಸಮಸ್ಯೆಗಳ ಪಟ್ಟಿಯನ್ನು ಸಿದ್ಧಪಡಿಸಿ ಮುಂದಿನ ಸಭೆಯಲ್ಲಿ ಸಲ್ಲಿಸಬೇಕು. ಇಲ್ಲದಿದ್ದರೆ ಪಿಡಿಒಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಕಾಳಹಸ್ತಿಪುರ ಕೆರೆಯಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ಆರೋಪ: ಕ್ರಮಕ್ಕೆ ದಲಿತ ರಕ್ಷಣಾ ಸಮಿತಿ ಆಗ್ರಹ

ಸಭೆಯಲ್ಲಿ ನಗರಸಭೆ ಆಯುಕ್ತ ವೆಂಕಟೇಶ್ ನಾಗನೂರ, ತಾಲೂಕು ಪಂಚಾಯತಿ ಇಒ ಮಂಜುನಾಥ್, ಎಇಇ ಗೋವಿಂದಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪಿಡಿಒಗಳು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಣಿಪಾಲದಲ್ಲಿ ಯುವಕರ ಗುಂಪು ಘರ್ಷಣೆ ; 11 ಮಂದಿ ವಿರುದ್ಧ ಪ್ರಕರಣ ದಾಖಲು

ಈಶ್ವರನಗರದ ಎಪಿಕೋಡ್ ಸೆಂಟರ್ ಎದುರು ರಾಷ್ಟ್ರೀಯ ಹೆದ್ದಾರಿ 169(A)ರ ಪಕ್ಕದಲ್ಲಿ ಗುಂಪು...

ಉಡುಪಿ | ಮಣಿಪಾಲದಲ್ಲಿ ಪೊಲೀಸರ ಮೇಲೆಯೇ ಪಟಾಕಿ ಎಸೆದು ಬೆದರಿಕೆ: ಪ್ರಕರಣ ದಾಖಲು

ತಡರಾತ್ರಿ ಸಾರ್ವಜನಿಕ ರಸ್ತೆಯಲ್ಲಿ ಪಟಾಕಿ ಸಿಡಿಸಿ, ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ...

ಕಾರವಾರ | ಕಸದಲ್ಲಿ ಸಿಕ್ಕ ಚಿನ್ನದ ಓಲೆ, ವಾರಸುದಾರರಿಗೆ ಹಿಂದಿರುಗಿಸಿದ ಪೌರಕಾರ್ಮಿಕರು

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮನೆಗಳಿಂದ ಸಂಗ್ರಹಿಸಿದ ತ್ಯಾಜ್ಯದಲ್ಲಿ ಸಿಕ್ಕ ಚಿನ್ನದ ಕಿವಿಯೋಲೆಯನ್ನು...

ಸುರತ್ಕಲ್ | ವೈದ್ಯಕೀಯ ಕಾಲೇಜು, ಆಸ್ಪತ್ರೆಗೆ ಆಹಾರ ಸುರಕ್ಷತಾ ತಂಡಗಳಿಂದ ದಿಢೀರ್ ದಾಳಿ

ರಾಜ್ಯ ಆರೋಗ್ಯ ಸಚಿವ ಯು.ಟಿ ಖಾದರ್ ಅವರ ಸೂಚನೆಯಂತೆ ಮಂಗಳೂರಿನ ಮುಕ್ಕ...