ಕೋಲಾರ | ತೆರಿಗೆ ಸಲಹೆಗಾರರ ಸಂಘದ ಕಾರ್ಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಅಗತ್ಯ: ಮೀರಾ ಪಂಡಿತ್

Date:

ತೆರಿಗೆ ಇಲಾಖೆಯಿಂದ ನೋಟಿಸ್ ಬಂದಾಗ ತೆರಿಗೆದಾರರು ಆತಂಕಪಡುವ ಅಗತ್ಯವಿಲ್ಲ. ನೋಟಿಸ್‌ಗೆ ಸಂಬಂಧಿಸಿದಂತೆ ಅಗತ್ಯ ದಾಖಲೆ ಹಾಗೂ ಮಾಹಿತಿಯನ್ನು ಇಲಾಖೆಗೆ ಸಲ್ಲಿಸುವ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದು ಆದಾಯ ತೆರಿಗೆ ಇಲಾಖೆಯ ಜಂಟಿ ಆಯುಕ್ತೆ ಮೀರಾ ಪಂಡಿತ್ ತಿಳಿಸಿದರು.

- Advertisement -

ರಾಜ್ಯ ತೆರಿಗೆ ಸಲಹೆಗಾರರ ಸಂಘ ಹಾಗೂ ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ಆಶ್ರಯದಲ್ಲಿ ನಗರ ಹೊರವಲಯದ ಅಜ್ಜಪ್ಪನಹಳ್ಳಿ ಗೇಟ್‌ನಲ್ಲಿರುವ ಎಸ್‍.ಕೆ ಇಂಟರ್‌ನ್ಯಾಷನಲ್ ಇನ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ತೆರಿಗೆ ಸಮ್ಮೇಳನ ಹಾಗೂ ತೆರಿಗೆ ಸಲಹೆಗಾರರ ದಿನಾಚರಣೆಯಲ್ಲಿ ಮಾತನಾಡಿದ ಅವರು ನೋಟಿಸ್‌ ಎಂಬುದು ಇಲಾಖೆಯ ತೆರಿಗೆದಾರರನ್ನು ಸಂಪರ್ಕಿಸಿ ನಿಖರ ಮಾಹಿತಿ ಪಡೆಯಲು ಇರುವ ಸಾಧನ ಅಷ್ಟೆ ಇದಕ್ಕೆ ಗ್ರಾಹಕರು ಭಯಪಡುವ ಅವಶ್ಯಕತೆ ಇಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ತೆರಿಗೆ ಇಲಾಖೆಯಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಂಡಿರುವುದರಿಂದ ತೆರಿಗೆದಾರರಿಗೆ ಸಾಕಷ್ಟು ಅನುಕೂಲವಾಗಿದೆ. ನೋಟಿಸ್‌ಗಳಿಗೆ ಉತ್ತರ ಹಾಗೂ ಅಗತ್ಯ ದಾಖಲೆಗಳನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬಹುದಾಗಿದ್ದು, ಪ್ರತಿಯೊಂದು ವಿಚಾರಕ್ಕೂ ಕಚೇರಿಗೆ ತೆರಳಿ ದಾಖಲೆ ಸಲ್ಲಿಸುವ ಅಗತ್ಯವಿಲ್ಲ. ತೆರಿಗೆ ಸಲಹೆಗಾರರು ಮತ್ತು ತೆರಿಗೆದಾರರು ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡು ವ್ಯವಸ್ಥೆಯನ್ನು ಸರಳಗೊಳಿಸಿಕೊಳ್ಳಬೇಕು ಎಂ‌ದು ಸಲಹೆ ನೀಡಿದರು.

ಇಂದಿನ ಬದಲಾಗುತ್ತಿರುವ ತೆರಿಗೆ ವ್ಯವಸ್ಥೆ ಹಾಗೂ ಹೊಸ ತಂತ್ರಜ್ಞಾನಗಳ ಹಿನ್ನೆಲೆಯಲ್ಲಿ ತೆರಿಗೆ ಸಲಹೆಗಾರರಿಗೆ ನಿರಂತರ ತರಬೇತಿ ಅಗತ್ಯವಿದೆ. ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೆರಿಗೆ ಸಲಹೆಗಾರರ ಕ್ಷೇತ್ರಕ್ಕೆ ಬಂದು ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಂಘವು ಕೇವಲ ತೆರಿಗೆ ಸಂಬಂಧಿತ ವಿಚಾರಗಳಿಗೆ ಸೀಮಿತವಾಗಿಲ್ಲ. ಕೈಗಾರಿಕೋದ್ಯಮಿಗಳು ಸೇರಿದಂತೆ ವಿವಿಧ ವೃಂದಗಳ ಆರ್ಥಿಕ ಚಟುವಟಿಕೆಗಳಿಗೆ ತೆರಿಗೆ ಸಲಹೆಗಾರರು ಪ್ರಮುಖ ಕೊಂಡಿಯಾಗಿದ್ದಾರೆ. ತೆರಿಗೆದಾರರ ಸಹಕಾರದಿಂದಲೇ ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ಸುಗಮವಾಗಿ ಸಾಗಲು ಸಾಧ್ಯವಾಗುತ್ತಿದೆ ಎಂದರು.

ಬಡ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು: ಗುತ್ತಿಗೆದಾರ ಹಾಗೂ ಶಿಕ್ಷಣೋದ್ಯಮಿ ವಿ.ಕೃಷ್ಣಾರೆಡ್ಡಿ ಮಾತನಾಡಿ, ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಉದ್ದೇಶ ವ್ಯಕ್ತಪಡಿಸಿ ಪ್ರತಿ ವರ್ಷ ಇಬ್ಬರು ಬಡ ಹೆಣ್ಣು ಮಕ್ಕಳನ್ನು ಆಯ್ಕೆ ಮಾಡಿಕೊಂಡು ಅವರ ಶಿಕ್ಷಣಕ್ಕೆ ನೆರವು ನೀಡಿ, ಅವರು ವಿದ್ಯಾಭ್ಯಾಸ ಪೂರ್ಣಗೊಳಿಸಿದ ಬಳಿಕ ಉದ್ಯೋಗಕ್ಕೆ ಸೇರುವಂತೆ ಸಹಕಾರ ನೀಡುತ್ತಿದ್ದೇನೆ. ಇದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಹೇಳಿದರು.

ದೇಶದ ಅಭಿವೃದ್ಧಿ ಆಗಬೇಕಾದರೆ ತೆರಿಗೆ ಪಾವತಿ ಒಂದು ಅಭಿಯಾನ ಆಗಬೇಕು. ತೆರಿಗೆ ಸಲಹೆಗಾರರು ಸರ್ಕಾರದ ಬೆನ್ನೆಲುಬು, ಸೇತುವೆ ಇದ್ದಂತೆ. ಆದರೆ, ಈಚೆಗೆ ಇಲಾಖೆಯಿಂದ ಗುತ್ತಿಗೆದಾರರಿಗೆ ಏಕಾಏಕಿ ನೋಟಿಸ್‌ ಬರುತ್ತಿದ್ದು, ಕಸಿವಿಸಿ ಆಗುತ್ತಿದೆ. ನೋಟಿಸ್ ಸ್ವಲ್ಪ ಕಡಿಮೆ ಮಾಡಬೇಕು. ಗುತ್ತಿಗೆದಾರರ ಈಗಿನ ಪರಿಸ್ಥಿತಿ ಸರಿ ಇಲ್ಲ ಎಂದು ಮನವಿ ಮಾಡಿದರು.

ರಾಜ್ಯ ಸಂಘದ ಅಧ್ಯಕ್ಷ ಎಸ್.ನಂಜುಂಡಪ್ರಸಾದ್ ಮಾತನಾಡಿ, ತೆರಿಗೆ ಸಲಹೆಗಾರರು ಸಂಘಟಿತರಾಗಬೇಕು. ನಾವು ಸಂಘಟಿತರಾದರೆ ತೆರಿಗೆ ವಂಚನೆ ತಪ್ಪಿಸಬಹುದು. ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸುವ ಮೂಲಕ ದಂಡ ತಪ್ಪಿಸಬಹುದು. ಈ ಎಲ್ಲದರ ಅರಿವು ಮೂಡಿಸುವುದು ಈ ಸಮಾವೇಶದ ಉದ್ದೇಶವಾಗಿದೆ ಎಂದರು.

ಎಲ್ಲಾ ತೆರಿಗೆ ಸಲಹೆಗಾರರನ್ನು ಆಹ್ವಾನಿಸಿ ಶೈಕ್ಷಣಿಕ ವಿಚಾರಕ್ಕೆ ಒತ್ತು ನೀಡಿ ಆದಾಯ ತೆರಿಗೆ, ಜಿಎಸ್‌ಟಿ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಚಾರಗೋಷ್ಠಿ ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲಾ ಜಿಲ್ಲೆಯವರು ಕೋಲಾರದ ಸಂಸ್ಕೃತಿಯನ್ನು ಅರಿಯಬೇಕೆಂಬ ಉದ್ದೇಶದಿಂದ ಇಲ್ಲಿ ಆಯೋಜಿಸಿದ್ದೇವೆ ಎಂದು ತಿಳಿಸಿದರು.

ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷ ರಾಜ್‌ಕುಮಾರ್ ಮಾತನಾಡಿ, ರಾಷ್ಟ್ರೀಯ ಸಮಾವೇಶವನ್ನು ಕೋಲಾರದಲ್ಲಿ ‌ಆಯೋಜಿಸಲು ಅವಕಾಶ ಸಿಕ್ಕಿರುವುದು ನಮ್ಮೆಲ್ಲರ ಪಾಲಿಗೆ ಹೆಮ್ಮೆಯ ವಿಚಾರ. ‌ಕೋಲಾರದಲ್ಲಿ ಇದೇ ಮೊದಲ ಬಾರಿ ಆಯೋಜನೆ ಮಾಡಲಾಗಿದೆ ಎಂದರು.

ಜಿಲ್ಲಾ ಸಂಘದಲ್ಲಿ 52 ಸದಸ್ಯರು‌ ಇದ್ದು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ತೆರಿಗೆ ಪಾವತಿ ಸಂಬಂಧ ಜಾಗೃತಿ ಮೂಡಿಸಲಾಗುತ್ತಿದೆ. ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಿ ನೋಟಿಸ್, ದಂಡ, ಬಡ್ಡಿ ಬಾರದಂತೆ ಎಚ್ಚರಿಕೆ ವಹಿಸಬೇಕು. ಸರಿಯಾದ ದಾಖಲೆ ಹಾಗೂ ಮಾಹಿತಿ ನೀಡಬೇಕು. ಈ ಸಂಬಂಧ ಸಲಹೆ ನೀಡಲು ನಾವು ಬದ್ಧರಿದ್ದೇವೆ. ಸರ್ಕಾರದ ಜೊತೆ ಕೈಜೋಡಿಸಿ ಅಭಿವೃದ್ಧಿಗೆ ಸಿದ್ಧ ಎಂದು ಹೇಳಿದರು.

ಎರಡು ದಿನಗಳ ಸಮ್ಮೇಳನ ಇದಾಗಿದ್ದು, ತೆರಿಗೆ, ಜಿಎಸ್‌ಟಿ ಕುರಿತು ವಿಚಾರಗೋಷ್ಠಿ ನಡೆದವು. ತೆರಿಗೆ ಸಲಹೆಗಾರರು, ತೆರಿಗೆದಾರರು ಹಾಗೂ ಇಲಾಖೆಯ ಅಧಿಕಾರಿಗಳ ನಡುವೆ ಉತ್ತಮ ಸಮನ್ವಯದೊಂದಿಗೆ ಹೊಸ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರೆ ತೆರಿಗೆ ವ್ಯವಸ್ಥೆ ಮತ್ತಷ್ಟು ಸರಳ ಮತ್ತು ಪಾರದರ್ಶಕವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು. ರಾಜ್ಯದ ವಿವಿಧ ಜಿಲ್ಲೆಗಳ ಹಿರಿಯ ತೆರಿಗೆ ಸಲಹೆಗಾರರ ಸೇವೆ ಗುರುತಿಸಿ ಸನ್ಮಾನಿಸಲಾಗುತ್ತಿದೆ. ಶನಿವಾರ ಕೂಡ ವಿಚಾರಗೋಷ್ಠಿ ಹಾಗೂ ವಾರ್ಷಿಕ ಮಹಾಸಭೆ ನಡೆಯಲಿದೆ.

ಇದನ್ನು ಓದಿದ್ದೀರಾ..? ಮಾಲೂರಿನಲ್ಲಿ ಮುಖ್ಯಮಂತ್ರಿಗಳ ಬೃಹತ್ ಕಾರ್ಯಕ್ರಮ: ಅದ್ದೂರಿ ಸ್ವಾಗತಕ್ಕೆ ಜಿಲ್ಲಾಧಿಕಾರಿ ಖಡಕ್ ಸೂಚನೆ

ಕಾರ್ಯಕ್ರಮದಲ್ಲಿ ಎಫ್‍ಕೆಸಿಸಿಐ ಅಧ್ಯಕ್ಷೆ ಉಮಾರಡ್ಡಿ, ರಾಜ್ಯ ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳು, ರವೀಂದ್ರ ವಿ.ಶೆಟ್ಟಿ, ಸೋಮಲಿಂಗಪ್ಪ, ಅಬ್ದುಲ್ ಬಷೀರ್ ಸಾಬ್‌, ರವೀಂದ್ರ ಎಸ್.ಕೆ, ಕೆ.ಆರ್.ನರಸಿಂಹಮೂರ್ತಿ, ಪ್ರಸಾದ್‌, ಜ್ಯೋತಿ‌ಜಂಬಗಿ ಹಾಗೂ ವಿವಿಧ ಜಿಲ್ಲೆಗಳಿಂದ ಬಂದಿರುವ ಸಂಘದ ಪದಾಧಿಕಾರಿಗಳು, ತೆರಿಗೆ ಸಲಹೆದಾರರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು...

ರಾಯಚೂರು | ಭೂರಹಿತರಿಗೆ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ವಸತಿ ಹಾಗೂ ಭೂ ರಹಿತರಿಗೆ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಬೇಕು,...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...