ಆಗ್ನೇಯ ಪದವೀಧರರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ. ಕೆ. ನಾಗರಾಜ್ ಅವರು ಕೋಲಾರ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡು ಪದವೀಧರರು, ಶಿಕ್ಷಕರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರನ್ನು ಭೇಟಿ ಮಾಡಿ ಅ.23 ರಂದು ನಡೆಯಲಿರುವ ಚುನಾವಣೆಯಲ್ಲಿ ಬೆಂಬಲಿಸುವಂತೆ ಮತಯಾಚಿಸಿದರು.
ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿದ ಅವರು, ಪದವೀಧರರು ಹಾಗೂ ಶಿಕ್ಷಕರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳು ಮತ್ತು ನಿರೀಕ್ಷೆಗಳನ್ನು ಆಲಿಸಿದರು. ಉದ್ಯೋಗಾವಕಾಶ, ಶಿಕ್ಷಣ, ಕೌಶಲಾಭಿವೃದ್ಧಿ, ನಿರುದ್ಯೋಗ ಹಾಗೂ ಪದವೀಧರರಿಗೆ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳ ಕುರಿತು ಚರ್ಚಿಸಿದರು.
ಪದವೀಧರರ ಕ್ಷೇತ್ರವು ವಿದ್ಯಾವಂತ ಮತದಾರರನ್ನು ಪ್ರತಿನಿಧಿಸುವ ಮಹತ್ವದ ಕ್ಷೇತ್ರವಾಗಿದ್ದು, ಮತದಾರರ ಸಮಸ್ಯೆಗಳನ್ನು ವಿಧಾನ ಪರಿಷತ್ತಿನಲ್ಲಿ ಪರಿಣಾಮಕಾರಿಯಾಗಿ ಪ್ರಸ್ತಾಪಿಸುವ ಅಗತ್ಯವಿದೆ ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಅಭಿಪ್ರಾಯಗಳನ್ನು ಸಂಗ್ರಹಿಸಿ ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಹಾಗೂ ಪದವೀಧರರ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದರು.
ಇದನ್ನು ಓದಿದ್ದೀರಾ..?ಕೋಲಾರ | ಸಾಲ ಮರುಪಾವತಿಸಿ, ಸಹಕಾರಿ ವ್ಯವಸ್ಥೆ ಉಳಿಸಿ: ಕೊತ್ತೂರು ಮಂಜುನಾಥ್
ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ 2026ರ ಸೆಪ್ಟೆಂಬರ್ 29ರಂದು ಅಧಿಸೂಚನೆ ಹೊರಬೀಳಲಿದ್ದು, ಅ. 23ರಂದು ಮತದಾನ ನಡೆಯಲಿದೆ ಎಂದರು ಈ ಸಂದರ್ಭದಲ್ಲಿ ಜೆಡಿಯು ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಶಿಕ್ಷಕರು ಪದವೀಧರರು ಇದ್ದರು




