ಕೋಲಾರ | ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭ : ರಾಧಾಕೃಷ್ಣನ್ ಓಜಾ

Date:

ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಪಕ್ಷದ ಯುವಕರು, ಮಹಿಳೆಯರು, ಹಿರಿಯ ಮುಖಂಡರು ಜನಪ್ರತಿನಿಧಿಗಳು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ವರದಿ ಸಿದ್ಧಪಡಿಸಿ ಕಾಂಗ್ರೆಸ್ ಹೈಕಮಾಂಡ್‌ಗೆ ಸಲ್ಲಿಸಲಾಗುವುದು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಜಿಲ್ಲಾ ವೀಕ್ಷಕ ರಾಧಾಕೃಷ್ಣನ್ ಓಜಾ ತಿಳಿಸಿದರು

- Advertisement -

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಮುಖಂಡರ ಅಭಿಪ್ರಾಯಗಳನ್ನು ಪಡೆದು ಸಮರ್ಥ ಹಾಗೂ ಸಂಘಟನಾ ಸಾಮರ್ಥ್ಯ ಹೊಂದಿರುವ ಜಿಲ್ಲಾ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಆಯ್ಕೆಯಾದ ಅಧ್ಯಕ್ಷರಿಗೆ ಅಗತ್ಯ ತರಬೇತಿ ನೀಡಿ ಪಕ್ಷದ ಸಂಘಟನೆ ಬಲಪಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಸಜ್ಜುಗೊಳಿಸಲಾಗುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಕಾಂಗ್ರೆಸ್ ಪಕ್ಷ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇದೀಗ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ “ಸಂಘಟನ್ ಸೃಜನ್ ಅಭಿಯಾನ” ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಕೆಪಿಸಿಸಿ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹೊಸ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿವರಿಸಿದರು.

ಜಿಲ್ಲಾವಾರು ಹಾಗೂ ವಿಧಾನಸಭಾ ಕ್ಷೇತ್ರವಾರು ಪ್ರಮುಖ ಮುಖಂಡರ ಅಭಿಪ್ರಾಯ ಸಂಗ್ರಹಿಸಲಾಗುವುದು. ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿ, ಅವುಗಳನ್ನು ಪರಿಶೀಲಿಸಿದ ವರದಿಯೊಂದಿಗೆ ಎಐಸಿಸಿಗೆ ಸಲ್ಲಿಸಲಾಗುವುದು. ಪಕ್ಷಕ್ಕೆ ಸಮರ್ಥ ನಾಯಕತ್ವ ರೂಪಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಕೋಲಾರ | ಜಂತರ್ ಮಂತರ್‌ನಲ್ಲಿ ಹಲ್ಲೆ ಖಂಡಿಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ನಗರದಲ್ಲಿ ಪಂಜಿನ ಮೆರವಣಿಗೆ

ಕೋಲಾರ | ಜಂತರ್ ಮಂತರ್‌ನಲ್ಲಿ ಹಲ್ಲೆ ಖಂಡಿಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ನಗರದಲ್ಲಿ ಪಂಜಿನ ಮೆರವಣಿಗೆಈ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಎನ್ ಸಂಪಂಗಿ, ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ವರ್, ವೆಂಕಟೇಶಲು ಕಾರ್ಯಕ್ರಮದ ಸಹ ಸಂಯೋಜಕಿ ಯೋಗೇಶ್ವರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷರಾದ ಮ್ಯಾಕಲ ನಾರಾಯಣಸ್ವಾಮಿ, ಊರಬಾಗಿಲು ಶ್ರೀನಿವಾಸ್, ಹಿರಿಯ ಮುಖಂಡ ಬೆಳಗಾನಹಳ್ಳಿ ಮುನಿವೆಂಟಪ್ಪ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೈಯದ್ ಆಫ್ಸರ್, ಓಬಿಸಿ ರಾಜ್ಯ ಉಪಾಧ್ಯಕ್ಷ ಒಬಿಸಿ ಮಂಜುನಾಥ್ ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಪಶ್ಚಿಮ ಪದವೀಧರರ ಕ್ಷೇತ್ರ: ಎರಡನೇ ಸುತ್ತಿನಲ್ಲೂ ಸಂಕನೂರಗೆ ಮುನ್ನಡೆ

ಕಾರವಾರ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ...

ಅಕ್ಟೋಬರ್ 28ರಂದು ಕಾರವಾರ, ಕುಮಟಾ ಹಾಗೂ ಗೋಕರ್ಣ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಕಾರವಾರ: ತುರ್ತು ವಿದ್ಯುತ್ ಮಾರ್ಗ ನಿರ್ವಹಣೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಉತ್ತರ ಕನ್ನಡ | ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 11.39 ಲಕ್ಷ ಮತದಾರರು

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಅಕ್ಟೋಬರ್ 1 ಅನ್ನು ಅರ್ಹತಾ...