ಕೋಲಾರ | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಸೋನಮ್ ವಾಂಗ್ ಚುಕ್ ಹೋರಾಟ ಬೆಂಬಲಿಸಿ ಪ್ರಗತಿಪರರಿಂದ ಪ್ರತಿಭಟನೆ

Date:

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆಯನ್ನು ಕೇಂದ್ರ ಸರ್ಕಾರ ವಹಿಸಬೇಕು ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುವಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ, ಸೋನಮ್ ವಾಂಗ್ ಚುಕ್ ಅವರ ಹೋರಾಟವನ್ನು ಬೆಂಬಲಿಸಿ ಕೋಲಾರ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ಗಾಂಧಿವನದಲ್ಲಿ ಧರಣಿ ನಡೆಸಲಾಯಿತು.

- Advertisement -

ಈ ಸಂದರ್ಭದಲ್ಲಿ ಸಿಪಿಐಎಂ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುವ ನೀಟ್ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಬೇಕು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಸೋನಮ್ ವಾಂಗ್ ಚುಕ್ ಅವರ ಬೇಡಿಕೆಗಳಿಗೆ ಕೂಡಲೇ ಕೇಂದ್ರ ಸರ್ಕಾರ ಸ್ಪಂದಿಸಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಕೋಲಾರ ಎನ್ ಎಸ್ ಯು ಐ ಜಿಲ್ಲಾ ಅಧ್ಯಕ್ಷ ನಿಹಾಲ್ ತರೀನ್ ಮಾತನಾಡಿ ನೀಟ್ ಪತ್ರಿಕೆ ಸೋರಿಕೆ ಕುರಿತು ಕೇವಲ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅಲ್ಲ, ಅವರ ಜೊತೆ ಪ್ರಧಾನಿ ಮೋದಿ ಸಹ ರಾಜಿನಾಮೆ ನೀಡಬೇಕು ಯಾಕಂದ್ರೆ ಅವರಿಂದ ಸರ್ಕಾರ ನಡೆಸಲಿಕ್ಕೆ ಸಾದ್ಯವಾಗುತ್ತಿಲ್ಲಾ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ ಮಾತನಾಡಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಕೇಂದ್ರ ಸರ್ಕಾರವೇ ನೈತಿಕ ಹೊಣೆ ಹೊರಬೇಕು ಕೇಂದ್ರ ಮಾನವ ಸಂಪನ್ಮೂಲ ಸಚಿವ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಸೋನಂ ವಾಂಗ್ ಚುಕ್ ಅವರ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸಲು ಅವರ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ..?ಶ್ರೀನಿವಾಸಪುರ | ಹಸಿರು ತರಕಾರಿಗಳ ಮಹತ್ವ ಸಾರಿದ ‘ಗ್ರೀನ್ ಡೇ–ವೆಜಿಟೆಬಲ್ಸ್ ಡೇ’ ಆಚರಣೆ

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎನ್.ಎನ್. ಶ್ರೀರಾಮ್, ದಲಿತ ಸಂಘರ್ಷ ಸಮಿತಿ ಮುಖಂಡರಾದ ಟಿ. ವಿಜಯಕುಮಾರ್, ಹಾರೋಹಳ್ಳಿ ರವಿ, ವಕ್ಕಲೇರಿ ರಾಜಪ್ಪ, ಹೂವರಸನಹಳ್ಳಿ ರಾಜಪ್ಪ, ವರದೇನಹಳ್ಳಿ ವೆಂಕಟೇಶ್, ದೇವರಾಜ್, ಮಲ್ಲಸಂದ್ರ ವೆಂಕಟಸ್ವಾಮಿ, ಭೀಮಸೇನೆ ಮುಖಂಡ ಪಂಡಿತ್ ಮುನಿವೆಂಕಟಪ್ಪ, ಮಾನವ ಬಂಧುತ್ವ ವೇದಿಕೆಯ ಬೀರಮಾನಹಳ್ಳಿ ಆಂಜನಪ್ಪ, ಸಿಐಟಿಯು ಮುಖಂಡರಾದ ವಿಜಯಕೃಷ್ಣ ಹಾಗೂ ಎಂ. ಭೀಮರಾಜ್, ರೈತ ಸಂಘದ ಮುಖಂಡರಾದ ಆನಂದ್ ಕುಮಾರ್ ಕೋಟಿಗಾನಹಳ್ಳಿ ಗಣೇಶ್ ಗೌಡ, ನಾರಾಯಣರೆಡ್ಡಿ, ಯಲ್ಲಪ್ಪ, ಅಲ್ಪಸಂಖ್ಯಾತ ಮುಖಂಡ ಅನ್ವರ್ ಪಾಷಾ ಹಾಗೂ ಎಸ್‌ಎಫ್‌ಐ ಮುಖಂಡರಾದ ಸುರೇಶ್, ಶಶಿಕುಮಾರ್ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...