ಕೋಲಾರ | ರೈತರ ಬೆಳೆ ಪರಿಹಾರ ಸೇರಿದಂತೆ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

Date:

ಮಳೆಯ ಅನಿಶ್ಚಿತತೆ, ಬರಗಾಲ, ಬೆಳೆ ನಷ್ಟ, ಕೃಷಿ ವೆಚ್ಚದ ಹೆಚ್ಚಳ, ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆ ಸೇರಿದಂತೆ ರೈತರು ಹಾಗೂ ಗ್ರಾಮೀಣ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಪಿ. ಆರ್. ಸೂರ್ಯನಾರಾಯಣ ಮಾತನಾಡಿ ಜಿಲ್ಲೆಯಲ್ಲಿ ಕೃಷಿ ಮತ್ತು ಪಶುಸಂಗೋಪನೆಯೇ ಬಹುತೇಕ ಗ್ರಾಮೀಣ ಕುಟುಂಬಗಳ ಜೀವನಾಧಾರವಾಗಿದೆ. ಮಳೆಯ ಕೊರತೆ, ಅಂತರ್ಜಲ ಮಟ್ಟ ಕುಸಿತ ಹಾಗೂ ಕೃಷಿ ಉತ್ಪಾದನಾ ವೆಚ್ಚ ಹೆಚ್ಚಳದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ರೈತರ ಬದುಕು ರಕ್ಷಿಸಲು ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಸಂಘದ ಅಧ್ಯಕ್ಷ ಎನ್.ಎನ್. ಶ್ರೀರಾಮ್ ಮಾತನಾಡಿ, ಬೆಳೆ ನಷ್ಟದಿಂದ ರೈತರ ಆದಾಯ ಕುಸಿದಿದ್ದು, ಕೃಷಿ ಕೂಲಿಕಾರರಿಗೆ ಉದ್ಯೋಗದ ಕೊರತೆ ಎದುರಾಗಿದೆ. ಹೈನುಗಾರರು, ಕುರಿ-ಮೇಕೆ ಮತ್ತು ಕೋಳಿ ಸಾಕಾಣಿಕೆದಾರರೂ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ರೈತರು ಹಾಗೂ ಗ್ರಾಮೀಣ ಬಡಜನರಿಗೆ ಅಗತ್ಯ ನೆರವು ಒದಗಿಸುವ ಮೂಲಕ ಅವರ ಜೀವನೋಪಾಯವನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಪಾತಕೋಟೆ ನವೀನ್‌ಕುಮಾರ್ ಮಾತನಾಡಿ, ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು 22 ಬೇಡಿಕೆಗಳ ಕುರಿತು ಚರ್ಚಿಸಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ತಲುಪುವಂತೆ ಕ್ರಮ ಕೈಗೊಂಡು, ಬೇಡಿಕೆಗಳ ಅನುಷ್ಠಾನಕ್ಕೆ ಕಾಲಮಿತಿ ನಿಗದಿಪಡಿಸಬೇಕು. ಕೈಗೊಂಡ ಕ್ರಮಗಳ ಬಗ್ಗೆ ಸಂಘಕ್ಕೆ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಕೃಷಿ ಉತ್ಪಾದನೆ ಕುಸಿತ, ಸಾಲದ ಹೊರೆ, ಉದ್ಯೋಗದ ಕೊರತೆ ಹಾಗೂ ಗ್ರಾಮೀಣ ಬಡತನ ಹೆಚ್ಚಾಗುವ ಅಪಾಯವಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಸಂಕಷ್ಟ ನಿವಾರಣೆಗೆ ಸಮಗ್ರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.


ಇದನ್ನು ಓದಿದ್ದೀರಾ..?ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ವೆಂಕಟಪ್ಪ, ಗಂಗಮ್ಮ, ವಕೀಲ ವೆಂಕಟೇಶ್, ಸೈಯದ್ ಫಾರೂಕ್, ಸಹ ಕಾರ್ಯದರ್ಶಿಗಳಾದ ಮುನಿರತ್ನ, ಜಿ. ಮಂಜುಳ, ರಂಗನಾಥ್, ವಿ. ನಾರಾಯಣರೆಡ್ಡಿ, ಡಿ.ಎಸ್. ವೆಂಕಟಚಲಪತಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕಾರಿಪುರ | ಕವಿ, ಬರಹಗಾರರಿಂದ ಮನಸ್ಸು ಒಂದಾಗಿಸುವ ಕೆಲಸವಾಗಲಿ: ಡಾ. ಸರ್ಫ್ರಾಜ್ ಚಂದ್ರಗುತ್ತಿ

ಕವಿ ಹಾಗೂ ಬರಹಗಾರರು ತಮ್ಮ ಬರವಣಿಗೆ ಮೂಲಕ ಮನಸ್ಸುಗಳನ್ನು ಕೂಡಿಸುವ ಕೆಲಸ...

ರಾಯಚೂರು | ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ದಾಳಿ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ

ಜಿಲ್ಲೆಯಾದ್ಯಂತ ವಿವಿಧೆಡೆ ವೈದ್ಯಕೀಯ ಪದವಿ ಪಡೆಯದೆ ವೈದ್ಯ ವೃತ್ತಿ ನಡೆಸುತ್ತಿದ್ದರೆನ್ನಲಾದ ನಕಲಿ...

ವಿಜಯಪುರ | ಕಾರ್ಯಕರ್ತರಿಗೆ ಸಮಾನ ಅವಕಾಶ ನೀಡಿ, ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ: ಪ್ರದೀಪ್ ಪಾಟೀಲ್

ರಾಜಕೀಯದಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಮತ್ತು ಹೊಸ ನಾಯಕತ್ವಕ್ಕೆ ಸಮಾನ ಅವಕಾಶ ಕಲ್ಪಿಸುವ...