ಕೋಲಾರ : ಸಚಿವ ನಾಗೇಂದ್ರ ರಾಜೀನಾಮೆ ನೀಡದಂತೆ ಒತ್ತಾಯಿಸಿ ಡಿಸಿ ಕಛೇರಿ ಮುಂದೆ ಪ್ರತಿಭಟನೆ

Date:

ಸಚಿವ ಬಿ.ನಾಗೇಂದ್ರ ರಾಜೀನಾಮೆಗಾಗಿ ಒತ್ತಾಯಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಬಿಜೆಪಿ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಗೆ ವಿರುದ್ದವಾಗಿ ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದಿಂದ ಗುರುವಾರ ಸಚಿವ ನಾಗೇಂದ್ರ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡದಂತೆ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದರು.

- Advertisement -

ಈ ವೇಳೆ ಮಾತನಾಡಿದ ಕಾಂಗ್ರೆಸ್ ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಅಂಬರೀಷ್ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ಬಿಜೆಪಿಯವರು ಕೇಳುತ್ತಿದ್ದು, ಭ್ರಷ್ಟಾಚಾರದ ಆರೋಪ ಬಂದ ಕೂಡಲೇ ಅವರೇ ಸ್ವಇಚ್ಛೆಯಿಂದ ರಾಜೀನಾಮೆಯನ್ನು ನೀಡಿದ್ದರು. ಆ ಬಳಿಕ ಎಸ್‌ಐಟಿ ತನಿಖೆಯಲ್ಲಿ ಅವರು ಅಪರಾಧಿಯಲ್ಲ ಆರೋಪಿ ಎಂಬುದಾಗಿ ಕ್ಲೀನ್ ಚಿಟ್ ನೀಡಿದ ಬಳಿಕ ಇದೀಗ ಪುನಃ ಸಚಿವ ಸಂಪುಟದಲ್ಲಿ ಅವಕಾಶದಲ್ಲಿ ನೀಡಲಾಗಿದೆ ಅವರ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿ ಪಕ್ಷಕ್ಕೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಯೋಧ್ಯೆ ರಾಮಮಂದಿರದಲ್ಲಿ ಹುಂಡಿ ಹಣ ಕದ್ದ ವಿಚಾರವಾಗಿ ಎಸ್‌ಐಟಿ ನೀಡಿದ ವರದಿ ಇವರಿಗೆ ಒಪ್ಪಿಗೆಯಾಗುತ್ತದೆ, ಆದರೆ ಇಲ್ಲಿನ ಎಸ್‌ಐಟಿ ವರದಿ ನೀಡಿದರೆ ಒಪ್ಪಿಗೆಯಾಗುವುದಿಲ್ಲವೇ ? ಅವರಿಗೆ ಒಂದು ನ್ಯಾಯ ಕಾಂಗ್ರೆಸ್ ಪಕ್ಷಕ್ಕೆ ಒಂದು ನ್ಯಾಯವಾ ಇವರಿಗೆ ಪ್ರತಿಭಟನೆ ಮಾಡುವುದಕ್ಕೆ ಯಾವ ಅರ್ಥದಲ್ಲಿ ಹೇಳಬೇಕು ಎಂದು ಪ್ರಶ್ನೆ ಮಾಡಿದರು.

ಬಿಜೆಪಿಗರು ಸದಾ ದಲಿತರನ್ನೇ ಧ್ವೇಷ ಮಾಡುತ್ತಾರೆ. ದಲಿತ ವಿರುದ್ಧವೇ ಘೋಷಣೆ ಮಾಡುತ್ತಾರೆ. ದಲಿತ ಮಂತ್ರಿಗಳ ವಿರುದ್ಧ ಹೋರಾಟ ಮಾಡುತ್ತಾರೆ. ಬೇರೆ ಯಾರ ಮೇಲೂ ಮಾಡುವುದಿಲ್ಲ. ಬಿ.ವೈ.ವಿಜಯೇಂದ್ರ ಅವರು ಆರ್‌ಟಿಜಿಎಸ್ ಮುಖಾಂತರ ಕೋಟ್ಯಾಂತರ ರೂಪಾಯಿ ಹಣ ಪಡೆದಿದ್ದರು. ಶಶಿಕಲಾ ಜೊಲ್ಲೆ ಕೋಟ್ಯಾಂತರ ರೂ ಹಣ ಲೂಟಿ ಮಾಡಿದ್ದರು ಜನಾರ್ದನ ರೆಡ್ಡಿ ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿದ್ದರು, ರಾಜ್ಯದ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಯಾಕೆ ಜೈಲಿಗೆ ಹೋಗಿದ್ದು ಇದನ್ನು ಪ್ರಶೆ ಮಾಡಲಿ ಆದರೂ ಅವರನ್ನು ಉನ್ನತ ಸ್ಥಾನದಲ್ಲಿ ಇರಿಸಿಲ್ಲವೇ ಎಂದು ಕಿಡಿಕಾರಿದರು.

ರಾಮಲೀಲಾ ಮೈದಾನದಲ್ಲಿ ಖರ್ಗೆಯವರು ಹೋಗಿ ಭಾಷಣ ಮಾಡಿದ್ದಕ್ಕೆ ಬಿಜೆಪಿ ಪೋಷಿತ ಶ್ರೀರಾಮಸೇನೆ ಮುಖಂಡರು ಗೋಮೂತ್ರ ಸಿಂಪಡಿಸಿ, ಅಸ್ಪೃಶ್ಯ ವ್ಯಕ್ತಿ ಭಾಷಣ ಮಾಡಿದ್ದಾರೆಂದು ಸ್ವಚ್ಛಗೊಳಿಸಿದ್ದಾರೆ. ಈ ಘಟನೆ ನಡೆದು ತಿಂಗಳಾದರೂ ಬಿಜೆಪಿಯ ಯಾವ ನಾಯಕರೂ ಪ್ರಶ್ನೆ ಮಾಡದೇ ಇರುವುದನ್ನು ನೋಡಿದರೆ ಇನ್ನೂ ಸಹ ಅಸ್ಪೃಶ್ಯತೆಯನ್ನು ಇಟ್ಟುಕೊಂಡಿದ್ದಾರೆಂಬುದು ನಮ್ಮ ಮನಗಂಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಅಧಿಕಾರಿಗಳ ಮುಖಾಂತರ ಮೋದಿಯವರಿಗೆ ಮನವಿ ಮಾಡುತ್ತಿದ್ದು, ತಪ್ಪಿತಸ್ಥರನ್ನು ಗಡಿಪಾರು ಮಾಡದೇ ಇದ್ದರೆ ಅಸ್ಪೃಶ್ಯತೆಯನ್ನು ಪಾಲನೆ ಮಾಡುತ್ತಿದ್ದೀರಿ ಎನ್ನುವುದು ಖಚಿತವಾಗುತ್ತದೆ ಎಂದು ಎಚ್ಚರಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ, ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ಅವಾಚ್ಯವಾಗಿ ಮಾತನಾಡಿದಾಗಲೂ ಧ್ವನಿ ಎತ್ತದ ಬಿಜೆಪಿಯವರು ನಿಜವಾದ ದಲಿತ ವಿರೋಧಿಗಳಾಗಿದ್ದು, ಸಚಿವ ನಾಗೇಂದ್ರ ಅವರಿಂದ ಭ್ರಷ್ಟಾಚಾರ ಆಗಿದ್ದರೆ, ಅವರು ತಪ್ಪು ಮಾಡಿದ್ದರೆ ಸಚಿವ ಸ್ಥಾನದಿಂದ ತೆಗೆದು ಬಿಸಾಡಲಿ ನಮ್ಮ ಅಭ್ಯಂತರವಿಲ್ಲ. ಆದರೆ, ವಿನಾಕಾರಣ ರಾಜೀನಾಮೆ ಕೇಳುವುದು ಸರಿಯಲ್ಲ ಎಂದು ಹೇಳಿದರು.

ಬಿಜೆಪಿಯಲ್ಲಿ ಇರುವ ಶೇ.೭೦ ರಷ್ಟು ಸಚಿವರು ಭ್ರಷ್ಟರೇ ಇದ್ದು, ಬೇರೆಯವರ ರಾಜೀನಾಮೆ ಕೇಳುವ ನೈತಿಕತೆ ನಿಮಗೆ ಇಲ್ಲ. ಮೀಸಲಾತಿ ಹೆಚ್ಚಳದಲ್ಲೂ ಅನ್ಯಾಯ ಮಾಡಿರುವ ನೀವು ದಲಿತರ ಪರ ಇದ್ದೀರಾ ಎಂದು ಕಿಡಿಕಾರಿ, ಯಾವುದೇ ಕಾರಣಕ್ಕೂ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಬಾರದೆಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | ಆಗಸ್ಟ್ 22ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿಗಳಿಂದ ಚಾಲನೆ

ಪ್ರತಿಭಟನೆ ಸ್ಥಳಕ್ಕಾಗಮಿಸಿದ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಾಲೂರು ವೆಂಕಟರಾಮ್, ಕುಡುವನಹಳ್ಳಿ ಆನಂದ್, ವ್ಯಾಪಲಪಲ್ಲಿ ನರೇಶ್, ಬೈರಂಡಹಳ್ಳಿ ನಾಗೇಶ್, ವಾಸು, ವಗಲಗೆರೆ ಅಂಜಿ, ನರಸಿಂಹ, ಗಡ್ಡೂರು ಪ್ರಕಾಶ್, ಬಂಗಾರಪೇಟೆ ನಾರಾಯಣಸ್ವಾಮಿ, ದೇವರಾಜ್, ಕಲ್ವಂಜಲಿ ರವೀಂದ್ರ, ಅನಿಲ್, ಹರಟಿ ಸಂಪತ್, ಸುಗಟೂರು ಕೃಷ್ಣಪ್ಪ, ಸಂಗೊಂಡಹಳ್ಳಿ ಪಿಳ್ಳಪ್ಪ, ಪವನ್,, ಯಾರಂಘಟ್ಟ ಮಂಜು, ಕಾರ್ತಿಕ್, ವೆಂಕಟಾಚಲಪತಿ, ಶಶಿ, ಅರುಣ್, ವೆಂಕಟೇಶ್ ಮುಂತಾದವರಿದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ದಲಿತರ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಅಗತ್ಯ: ಸಂಜೀವ ಬಳ್ಕೂರು

ದಲಿತರ ಹಕ್ಕು, ಸಮಸ್ಯೆ ಹಾಗೂ ನ್ಯಾಯಕ್ಕಾಗಿ ಸಂಘಟಿತ ಹೋರಾಟ ಅಗತ್ಯವಾಗಿದ್ದು, ಸಂಘಟನೆಯೇ...

ಬೀದರ್ | ಉದ್ಯೋಗ ಖಾತ್ರಿ ಯೋಜನೆಯಡಿ 20 ಲಕ್ಷ ಮಾನವ ದಿನ ಸೃಜನೆ: ಈಶ್ವರ ಖಂಡ್ರೆ

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಬೀದರ್ ಜಿಲ್ಲೆಯಲ್ಲಿ 20...

ಗದಗ | ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ

ಗದಗ ಜಿಲ್ಲೆಯ ಮುಳಗುಂದದ ಶ್ರೀ ಆರ್. ಎನ್. ದೇಶಪಾಂಡೆ ಸರ್ಕಾರಿ ಪ್ರಥಮ...

ಶಿವಮೊಗ್ಗ | ಸಿಇಒ ಹೇಮಂತ್‌ಗೆ ಬೀಳ್ಕೊಡುಗೆ; ನೂತನ ಸಿಇಒ ರಿಷಿ ಆನಂದ್‌ ಸ್ವಾಗತಿಸಿದ ಜಿ.ಪಂ

ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ನಿಕಟಪೂರ್ವ...