ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ ನೇಮಕಾತಿಯ ಮೇಲಿನ ತಡೆಯನ್ನು ಹಿಂಪಡೆದು, ಅವರನ್ನು ಹುದ್ದೆಯಲ್ಲಿ ಮರುಸ್ಥಾಪಿಸಲಾಗಿದೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ್‌ಗೌಡ ತಿಳಿಸಿದ್ದಾರೆ.
ಕಾರಣಾಂತರಗಳಿಂದ ತಾತ್ಕಾಲಿಕವಾಗಿ ಅವರ ಹುದ್ದೆಯನ್ನು ತಡೆಹಿಡಿಯಲಾಗಿತ್ತು ಅದಕ್ಕೆ ಪೂರಕವಾಗಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಸಲ್ಲಿಸಿದ್ದ ಪತ್ರ ಹಾಗೂ ವಿವರಣೆಯನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಸೈಯದ್ ಅಫ್ರೀದ್ ಪಾಷಾ ಅವರು ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ..?ಚಿಂತಾಮಣಿ |ನಾನು ಸೆಲ್ಫ್ ಮೇಡ್ ಮ್ಯಾನ್,ಲೆಟ್ಸ್ ಫೈಟ್’:ಸುಧಾಕರ್‌ಗೆ ಪ್ರದೀಪ್ ಈಶ್ವರ್ ಪರೋಕ್ಷ ಸವಾಲ್!
ಮುಂದಿನ ದಿನಗಳಲ್ಲಿ ಯುವ ಕಾಂಗ್ರೆಸ್ ಸಂಘಟನೆಯ ಚಟುವಟಿಕೆಗಳಲ್ಲಿ ಉತ್ಸಾಹ, ಶಿಸ್ತು ಹಾಗೂ ಬದ್ಧತೆಯಿಂದ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಸಂದೇಶಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಜತೆಗೆ ಸಂಘಟನೆಯನ್ನು ಬಲಪಡಿಸಲು ಮತ್ತು ಪಕ್ಷದ ಹಿತದೃಷ್ಟಿಯಿಂದ ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಲಾಗಿದೆ.




