ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಯುವಕರಿಗೆ ಉತ್ತಮ ಅವಕಾಶಗಳು ದೊರೆಯಬೇಕು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡುವುದರ ಜತೆಗೆ ಯುವಕರಲ್ಲಿ ಶಿಸ್ತು, ನಾಯಕತ್ವ ಗುಣ ಮತ್ತು ಸ್ನೇಹಭಾವ ಬೆಳೆಸುತ್ತದೆ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಕ್ಕಲೇರಿ ಮಾಜಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ತಿಳಿಸಿದರು
ತಾಲೂಕಿನ ವಕ್ಕಲೇರಿ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾಗವಹಿಸಿ, ವಿಜೇತ ವಕ್ಕಲೇರಿ ತಂಡಕ್ಕೆ ಪ್ರಥಮ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ಸ್ಥಳೀಯ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗುತ್ತದೆ. ಯುವಕರು ಕ್ರೀಡೆಯೊಂದಿಗೆ ಶಿಕ್ಷಣ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಕ್ರೀಡಾಕೂಟಗಳು ಗ್ರಾಮಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.
ಟೂರ್ನಮೆಂಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಗೆಲುವು ಸಾಧಿಸಿದ ವಕ್ಕಲೇರಿ ತಂಡದ ಆಟಗಾರರನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿಯೂ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯ ಪ್ರೋತ್ಸಾಹ ನೀಡುವುದಾಗಿ ತಿಳಿಸಿದರು.
ಇದನ್ನು ಓದಿದ್ದೀರಾ..?ಕೋಲಾರ | ಟಿ.ಚನ್ನಯ್ಯ ಜನ್ಮ ಶತಮಾನೋತ್ಸವಕ್ಕೆ ಮಹಾನುಭಾವನಿಂದ ಅಡ್ಡಿ: ಎಸ್.ಎನ್. ನಾರಾಯಣಸ್ವಾಮಿ
ಈ ಸಂದರ್ಭದಲ್ಲಿ ಹಿರಿಯ ಮುಖಂಡ ಬಾಬಣ್ಣ, ಮಂಜುನಾಥ್, ಅರುಣ್, ರಾಮಾಂಜಿ, ಲೋಕೇಶ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು, ಕ್ರೀಡಾಪಟುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.




