ಕೋಲಾರ | ಜಿಪಿಎಸ್ ನಿಯಮದ ಬಿಗಿ: ಬಡವರ ಪಡಿತರಕ್ಕೂ ಅಡ್ಡಿ

Date:

ಪಡಿತರ ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಿರುವ ಸರ್ಕಾರದ ನಿಯಮದಿಂದ ಗ್ರಾಮೀಣ ಪ್ರದೇಶದ ಬಡವರು ದೂರದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಪಡಿತರ ಪಡೆಯಲು ಪರದಾಡುವಂತಾಗಿದೆ. ಆದ್ದರಿಂದ ಜಿಪಿಎಸ್ ವ್ಯವಸ್ಥೆಯಲ್ಲೇ ಉಪಕೇಂದ್ರಗಳನ್ನು ಗುರುತಿಸಿ, ಲಾರಿಗಳು ಅಲ್ಲಿಗೂ ತೆರಳಿ ಪಡಿತರ ವಿತರಿಸಲು ಅವಕಾಶ ಕಲ್ಪಿಸಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೇಮಗಲ್ ಮುನಿಯಪ್ಪ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

- Advertisement -

ನಗರದ ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸರ್ಕಾರದ ಯೋಜನೆಗಳು ಜನರ ಅನುಕೂಲಕ್ಕಾಗಿ ಇರಬೇಕೇ ಹೊರತು, ತಾಂತ್ರಿಕ ನಿಯಮಗಳಿಂದ ಫಲಾನುಭವಿಗಳಿಗೆ ತೊಂದರೆಯಾಗಬಾರದು. ವಿಶೇಷವಾಗಿ ವೃದ್ಧರು, ಮಹಿಳೆಯರು ಹಾಗೂ ಬಡ ಕುಟುಂಬಗಳು ದೂರದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಪಡಿತರ ಪಡೆಯುವುದು ಕಷ್ಟವಾಗಿದೆ. ಸಾರಿಗೆ ವ್ಯವಸ್ಥೆಯ ಕೊರತೆಯಿಂದ ಕೆಲವರು ಪಡಿತರ ಪಡೆಯುವುದನ್ನೇ ಕೈಬಿಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಪಡಿತರ ವಾಹನಗಳ ಚಲನವಲನದ ಮೇಲೆ ನಿಗಾ ಇಡುವ ಉದ್ದೇಶದಿಂದ ಜಿಪಿಎಸ್ ಅಳವಡಿಸಿರುವುದನ್ನು ವಿರೋಧಿಸುವುದಿಲ್ಲ. ಆದರೆ ಉಪಕೇಂದ್ರಗಳನ್ನೂ ಜಿಪಿಎಸ್‌ನಲ್ಲಿ ಗುರುತಿಸಿ ಅಲ್ಲಿಯೂ ಪಡಿತರ ವಿತರಿಸುವ ವ್ಯವಸ್ಥೆ ಕಲ್ಪಿಸಿದರೆ ಪಾರದರ್ಶಕತೆ ಉಳಿಯುವುದರ ಜತೆಗೆ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ಕಡ್ಡಾಯವಾಗಿ ತೆರೆದಿದ್ದು, ಪಡಿತರ ವಿತರಿಸಬೇಕು. ನಾಮಫಲಕ ಹಾಗೂ ಸೂಚನಾ ಫಲಕ ಅಳವಡಿಸುವುದು ಕಡ್ಡಾಯ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೋಲಾರ ನಗರ ಸಾರಿಗೆ ಸೇವೆಯನ್ನು ತಲಗುಂದವರೆಗೆ ಮಾತ್ರ ಸೀಮಿತಗೊಳಿಸಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಮಸ್ಯೆ ಅರಿತು ಸೇವೆಯನ್ನು ವೇಮಗಲ್‌ವರೆಗೆ ವಿಸ್ತರಿಸಲು ಸಭೆಯಲ್ಲಿ ಸೂಚನೆ ನೀಡಿದ್ದು ಇದರ ಸದುಪಯೋಗ ಪಡೆಯುವಂತೆ ಮನವಿ ಮಾಡಿದರು.

ಪಂಚ ಗ್ಯಾರಂಟಿ ಯೋಜನೆಗಳು ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಇನ್ನೂ ಎರಡು ವರ್ಷ ಮುಂದುವರಿಯಲಿವೆ. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಲಾಭ ತಲುಪಿಸುವ ಜವಾಬ್ದಾರಿ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರ ಮೇಲಿದೆ’ ಎಂದರು.

ಇದನ್ನು ಓದಿದ್ದೀರಾ..?ಕೋಲಾರ | ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾದ ಮದ್ದೇರಿ ಶಾಲೆಯ ರಜತ ಮಹೋತ್ಸವ:ಶಿಕ್ಷಕರಿಗೆ ಅದ್ಧೂರಿ ಸನ್ಮಾನ

ಸಭೆಯಲ್ಲಿ ತಾಪಂ ಯೋಜನಾ ನಿರ್ದೇಶಕ ಮಂಜುನಾಥ್ ಪ್ರಸಾದ್, ಸಮಿತಿ ಸದಸ್ಯರಾದ ನವೀನ್, ಅಯೂಭ್ ಖಾನ್, ಭರತ್, ನಂದಂಬಳ್ಳಿ ವಿಜಿ, ಶ್ರೀನಿವಾಸರೆಡ್ಡಿ, ಯೂನಿಸ್ ಖಾನ್, ವಿನೋದ್ ಸೇರಿದಂತೆ ಅಧಿಕಾರಿಗಳು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...