ಕೋಲಾರ | ಸರ್ಕಾರಿ ಶಾಲೆ ಉಳಿಸಲು ಸಮೀಕ್ಷೆ ಅಗತ್ಯ: ಕೊತ್ತೂರು ಮಂಜುನಾಥ್

Date:

ಸರ್ಕಾರದಿಂದ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನ ದೊರೆಯುತ್ತಿದ್ದರೂ, ವಿದ್ಯಾರ್ಥಿಗಳು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವುದು ಏಕೆ ಎಂಬುದನ್ನು ಪತ್ತೆಹಚ್ಚಲು ಸಮೀಕ್ಷೆ ನಡೆಸುವ ಅಗತ್ಯವಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.

- Advertisement -

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಹೆಚ್ಚಿನ ಅನುದಾನ ನೀಡುತ್ತಿದ್ದರೂ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಮಕ್ಕಳು ಖಾಸಗಿ ಶಾಲೆಗಳತ್ತ ಏಕೆ ಹೋಗುತ್ತಿದ್ದಾರೆ ಎಂಬುದನ್ನು ಸಮೀಕ್ಷೆ ಮೂಲಕ ತಿಳಿದುಕೊಂಡು, ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

‘ವಿದ್ಯಾಭ್ಯಾಸ ಯಾರ ಅಪ್ಪನ ಸ್ವತ್ತೂ ಅಲ್ಲ. ಅದು ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ. ಶಿಕ್ಷಣ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುತ್ತದೆ. ಹಿಂದೆ ಉತ್ತರ ವಿಶ್ವವಿದ್ಯಾಲಯದಲ್ಲಿ ಇಬ್ಬರು ಇದ್ದ ಮುಸ್ಲಿಂ ವಿದ್ಯಾರ್ಥಿಗಳ ಸಂಖ್ಯೆ ಇದೀಗ 298ಕ್ಕೆ ಏರಿದೆ’ ಎಂದು ಹೇಳಿದರು.

ಗುರುಭವನ ನಿರ್ಮಾಣದ ಕುರಿತು ಮಾತನಾಡಿದ ಅವರು, ‘ಶಿಕ್ಷಕರ ಕಲ್ಯಾಣ ನಿಧಿಯಿಂದ ₹1 ಕೋಟಿ ಅನುದಾನ ದೊರೆಯಲಿದೆ. ಸರ್ಕಾರಿ ನೌಕರರು ಒಂದು ದಿನದ ವೇತನ ನೀಡುವುದಾಗಿ ತಿಳಿಸಿದ್ದಾರೆ. ನಿರ್ಮಿತಿ ಕೇಂದ್ರಕ್ಕೆ ಈಗಾಗಲೇ ₹2.5 ಕೋಟಿ ನೀಡಿ ಆರು ತಿಂಗಳಾಗಿದೆ. ಕಾಮಗಾರಿಯನ್ನು ವೇಗಗೊಳಿಸುವ ಜವಾಬ್ದಾರಿ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಡಿಡಿಪಿಐ ಅವರ ಮೇಲಿದೆ’ ಎಂದರು.

‘ನನಗೆ ಇನ್ನೂ ₹150 ಕೋಟಿ ವಿಶೇಷ ಅನುದಾನ ಬರಲಿದೆ. ಗುರುಭವನಕ್ಕೆ ಅನುದಾನದ ಕೊರತೆಯಾದರೆ ₹1 ಕೋಟಿ ಅನುದಾನ ನೀಡುತ್ತೇನೆ’ ಎಂದು ಭರವಸೆ ನೀಡಿದರು.

ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ, ಶಿಕ್ಷಕರ ದಿನಾಚರಣೆಯನ್ನು ಅದ್ದೂರಿಯಾಗಿ ನಡೆಸಬೇಕಿತ್ತು. ಶಿಕ್ಷಕರ ಸಂಘದ ಕೆಲ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳದಿರುವುದು ಬೇಸರದ ಸಂಗತಿ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಶಿಕ್ಷಕರ ಸಹಕಾರ ಅಗತ್ಯ ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ಶಿಕ್ಷಕರ ವೃತ್ತಿ ಗೌರವಯುತವಾದುದು. ಶಿಕ್ಷಕರಿಗೆ ಅಗೌರವ ತೋರಿಸುವ ಯಾವುದೇ ಬೆಳವಣಿಗೆ ನಡೆಯಬಾರದು. ಶಿಕ್ಷಕರ ದಿನಾಚರಣೆಯನ್ನು ಬಹಿಷ್ಕರಿಸುವುದು ಸರಿಯಲ್ಲ. ಭತ್ಯೆ ವಿಚಾರ 25 ಮಂದಿಗೆ ಸಮಸ್ಯೆಯಾಗಿದ್ದು, ವಿವಾದವನ್ನು ಬಗೆಹರಿಸಬೇಕು. ಡಿಡಿಪಿಐ ಅವರು ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸ್ಪಂದಿಸಬೇಕು ಎಂದರು.

‘ಪ್ರತಿ ವರ್ಷ ಮುಂದಿನ ಶಿಕ್ಷಕರ ದಿನಾಚರಣೆಯನ್ನು ಗುರುಭವನದಲ್ಲಿ ಆಚರಿಸುವುದಾಗಿ ಹೇಳಲಾಗುತ್ತಿತ್ತು. 35 ವರ್ಷಗಳಿಂದ ಈ ಮಾತು ಕೇಳಿಬರುತ್ತಿದೆ. ಆದರೆ ಕೊತ್ತೂರು ಮಂಜುನಾಥ್ ಶಾಸಕರಾದ ಬಳಿಕ ಗುರುಭವನ ನಿರ್ಮಾಣಕ್ಕೆ ಚಾಲನೆ ದೊರೆತಿದ್ದು, ₹2.5 ಕೋಟಿ ವಿಶೇಷ ಅನುದಾನ ನೀಡಿದ್ದಾರೆ. ಮುಂದಿನ ವರ್ಷ ಗುರುಭವನದಲ್ಲೇ ಶಿಕ್ಷಕರ ದಿನಾಚರಣೆ ನಡೆಯುವಂತಾಗಬೇಕು’ ಎಂದು ಹೇಳಿದರು.

ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಮಾತನಾಡಿ, ಶಿಕ್ಷಕ ವೃತ್ತಿಯಲ್ಲಿ ಗೌರವ ಹಾಗೂ ತೃಪ್ತಿ ಇದೆ. ಮಕ್ಕಳ ಪ್ರಗತಿಯಲ್ಲಿ ನಾವು ಸಂತೋಷ ಕಾಣುತ್ತೇವೆ. ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದ್ದ ಗುರುಭವನ ನಿರ್ಮಾಣಕ್ಕೆ ಚಾಲನೆ ದೊರೆತಿದ್ದು, ಅನುದಾನ ಹೊಂದಿಸಿಕೊಳ್ಳಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರನ್ನು ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಪ್ರಜಾ ಆಂದೋಲನ ಕಾರ್ಯಕ್ರಮ: ಒಂದೇ ವೇದಿಕೆಯಲ್ಲಿ ನೂರಾರು ಸಮಸ್ಯೆಗಳಿಗೆ ಪರಿಹಾರ: ಅಂಬರೀಷ್

ವೇದಿಕೆಯಲ್ಲಿ ಡಿಡಿಪಿಐ ಅಲ್ಮಾಸ್ ಪರ್ವೀನ್ ತಾಜ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಕುಡಾ ಅಧ್ಯಕ್ಷ ಮೊಹಮ್ಮದ್ ಹನೀಫ್, ಸಿಂಡಿಕೇಟ್ ಸದಸ್ಯರಾದ ಸೀಸಂದ್ರ ಗೋಪಾಲಗೌಡ, ಅಬ್ರಾಜ್ ಪಾಷ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಜಯ್ ಕುಮಾರ್, ಬಿಇಒ ಉಮಾ, ಮುಖಂಡರಾದ ಸೈಯದ್ ಅಫ್ಸರ್, ಷಂಷೀರ್, ಶಿಕ್ಷಕರ ಸಂಘದ ವೆಂಕಟಚಲಪತಿ, ತಿಮ್ಮರಾಯಪ್ಪ, ಮುಂತಾದವರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...