ಕೋಲಾರ | ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷ ಹಿನ್ನೆಲೆ ಸಸಿ ನೆಡುವ ಕಾರ್ಯಕ್ರಮ: ವೇಮಗಲ್ ಮುನಿಯಪ್ಪ

Date:

ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಮೂರು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮದೊಂದಿಗೆ ಸಂಭ್ರಮಾಚರಣೆಯನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ವೇಮಗಲ್ ಮುನಿಯಪ್ಪ ಸೂಚಿಸಿದರು.

- Advertisement -

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗೃಹಲಕ್ಷ್ಮಿ ಯೋಜನೆ 2026ರ ಜುಲೈ 19ಕ್ಕೆ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಶಾಲಾ ಆವರಣಗಳು ಹಾಗೂ ಇತರೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಯೋಜನೆಯ ಫಲಾನುಭವಿ ಮಹಿಳೆಯರ ಕೈಯಿಂದ ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಬೇಕು. ನೆಟ್ಟ ಸಸಿಗಳ ಸಂರಕ್ಷಣೆ ಮತ್ತು ಪೋಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಗೃಹಜ್ಯೋತಿ ಯೋಜನೆಯ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದ್ದು, ಮನೆಗಳಿಗೆ ಭೇಟಿ ನೀಡುವ ಮೀಟರ್ ರೀಡರ್‌ಗಳಿಗೆ ಸಾರ್ವಜನಿಕರು ಸಹಕರಿಸಬೇಕು. ಪರಿಷ್ಕರಣೆ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಲು ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿಯನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸೂಚಿಸಿದರು.

Advertisements

ಆಹಾರ ಪಡಿತರ ಅಂಗಡಿಗಳು ಕಡ್ಡಾಯವಾಗಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಇದರಿಂದ ಕೂಲಿ ಕಾರ್ಮಿಕರಿಗೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಬೇಕು. ಅಲ್ಲದೆ, ಕೆಎಸ್‌ಆರ್‌ಟಿಸಿ ವತಿಯಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಬಸ್ ನಿಲ್ದಾಣಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು

ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು ಸಾರ್ವಜನಿಕ ಸಮಸ್ಯೆಗಳ ಕುರಿತು ದೂರವಾಣಿ ಮೂಲಕ ಸಂಪರ್ಕಿಸಿದಾಗ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ತಾಲೂಕಿನಲ್ಲಿ ಮೃತಪಟ್ಟ ಸುಮಾರು 726 ಫಲಾನುಭವಿಗಳ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗಿರುವ ಮಾಹಿತಿ ದೊರೆತಿದ್ದು, ಪರಿಶೀಲನೆ ಬಳಿಕ ಸುಮಾರು 10 ಲಕ್ಷವನ್ನು ಸರ್ಕಾರಕ್ಕೆ ವಾಪಸ್ ಜಮೆ ಮಾಡಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಇದನ್ನು ಓದಿದ್ದೀರಾ..?ಕೋಲಾರ | ವಕೀಲರ ಸಂಘದ ಬೇಡಿಕೆಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸ್ಪಂದನೆ

ಸಭೆಯಲ್ಲಿ ತಾಪಂ ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಪ್ರಸಾದ್, ಇಎಸ್ಟಿ ವಿಷಯ ನಿರ್ವಾಹಕ ಕರಿಬಸಪ್ಪ, ಸಮಿತಿ ಸದಸ್ಯರಾದ ನವೀನ್, ಶ್ರೀನಿವಾಸರೆಡ್ಡಿ, ಬಿ.ಆರ್. ಬಾಬು, ನದಂಬಳ್ಳಿ ವಿಜಯಕುಮಾರ್, ಅಯೂಬ್ ಖಾನ್, ಯೂನಿಸ್ ಖಾನ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಆದಿಮದಲ್ಲಿ ಜಿಲ್ಲಾ ಮಟ್ಟದ ನಾಟಕೋತ್ಸವ ಸಂಭ್ರಮ, ಕಿಕ್ಕಿರಿದ ಪ್ರೇಕ್ಷಕರು.

ಕರ್ನಾಟಕ ನಾಟಕ ಅಕಾಡೆಮಿ ಮತ್ತು ಕೋಲಾರ ಆದಿಮ ಸಾಂಸ್ಕೃತಿಕ ಕೇಂದ್ರದ ಸಹಯೋಗದಲ್ಲಿ...

ಉಡುಪಿ | ಕಾಪು ಯಾರ್ಡ್ ಬೀಚ್‌ನಲ್ಲಿ 5.710 ಕೆ.ಜಿ. ಗಾಂಜಾ ವಶಕ್ಕೆ: ಇಬ್ಬರ ಬಂಧನ

ಕಾಪು ಹಾಗೂ ಮಟ್ಟು ಬೀಚ್‌ಗಳಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಗಾಂಜಾ ಮಾರಾಟ...

ರಾಯಚೂರು | 10 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಇಲಾಖೆ ಕಾರ್ಮಿಕರ ಧರಣಿ

ತುಂಗಭದ್ರಾ ನೀರಾವರಿ ಇಲಾಖೆಯ ಮಾನ್ವಿ ಉಪವಿಭಾಗದ ಕಾರ್ಮಿಕರಿಗೆ ಕಳೆದ 10 ತಿಂಗಳಿನಿಂದ...