ಕೋಲಾರ | ರೈತರ ತೀರ್ಮಾನಕ್ಕೆ ಇನ್ನೆರಡು ತಿಂಗಳ ಕಾಲಾವಕಾಶ : ಶಾಸಕ ಕೊತ್ತೂರು ಮಂಜುನಾಥ್

Date:

ನಗರಾಭಿವೃದ್ಧಿ ಪ್ರಾಧಿಕಾರ (ಕುಡಾ) ವತಿಯಿಂದ ಹೊಸ ಬಡಾವಣೆ ನಿರ್ಮಾಣಕ್ಕಾಗಿ ರೈತರ ಜಮೀನು ಪಡೆಯುವ ಸಂಬಂಧ ರೈತರ ಅಭಿಪ್ರಾಯ ಸಂಗ್ರಹಿಸಲು ಇನ್ನೂ ಎರಡು ತಿಂಗಳ ಕಾಲಾವಕಾಶ ನೀಡಲಾಗುವುದು. ಬಳಿಕ ಮತ್ತೊಂದು ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

- Advertisement -

ನಗರ ಹೊರವಲಯದ ಕುಡಾ ಕಚೇರಿ ಬಳಿ ಸೋಮವಾರ ಟಮಕ, ಗಾಂಧಿನಗರ, ಗದ್ದೆಕಣ್ಣೂರು, ಹಾಗೂ ಅಮಾನಿಕೆರೆ ಭಾಗದಲ್ಲಿನ ಜಮೀನುಗಳ ರೈತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರಿಂದ ಯಾವುದೇ ರೀತಿಯ ಬಲವಂತದ ಭೂಸ್ವಾಧೀನ ಮಾಡುವುದಿಲ್ಲ ನಿಮಗೆ ಮಾಹಿತಿ ಕೊಟ್ಟು ಒಪ್ಪಿಗೆ ಪಡೆಯಲು ಸಭೆ ಮಾಡುತ್ತಿದ್ದೇವೆ ಕೆಲವರು ಜಮೀನು ನೀಡಲು ಒಪ್ಪಿದ್ದಾರೆ, ಇನ್ನೂ ಕೆಲವರು ಒಪ್ಪಿಗೆ ನೀಡಲಿಲ್ಲ ಇದು ಮೊದಲ ಸಭೆಯಾಗಿದ್ದು, ರೈತರು ಚರ್ಚಿಸಿ ಸೂಕ್ತ ನಿರ್ಧಾರ ತಿಳಿಸಲು ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಈ ಭಾಗದಲ್ಲಿ ಸುಮಾರು 167 ಎಕರೆ ಜಮೀನನ್ನು ಗುರುತಿಸಲಾಗಿದೆ ರೈತರಿಂದ 50:50 ಅನುಪಾತದಲ್ಲಿ ಭೂಮಿ ಪಡೆಯುವುದು ಅಥವಾ ನೇರವಾಗಿ ಖರೀದಿ ಪ್ರಕ್ರಿಯೆ ಮೂಲಕವಾಗಿ ಹೊಸ ಬಡಾವಣೆ ಅಭಿವೃದ್ಧಿ ಪಡಿಸಲಾಗುವುದು. ಈಗಾಗಲೇ ಕುಡಾ ಬಳಿ ಸುಮಾರು 333 ನಿವೇಶನಗಳಿದ್ದು, ಅವುಗಳಲ್ಲಿ 56 ನಿವೇಶನಗಳ ಹರಾಜಿಗೆ ಅನುಮೋದನೆ ದೊರೆತಿದೆ. ಹರಾಜಿನಿಂದ ಬರುವ ಆದಾಯ ಸೇರಿದಂತೆ ಇತರೆ ಎಲ್ಲಾ ಸೇರಿ ₹300 ಕೋಟಿ ಹಣ ಇದ್ದು ಅದರಲ್ಲಿ ಹೊಸ ಬಡಾವಣೆ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಗಾಂಧಿನಗರ ನಾರಾಯಣಸ್ವಾಮಿ, ಟಮಕ ವೆಂಕಟೇಶ್ ದಲಿತ ನಾರಾಯಣಸ್ವಾಮಿ ಸೇರಿದಂತೆ ರೈತರು ಮಾತನಾಡಿ ರೈತರು ಜಮೀನು ಯಾವುದೇ ಕಾರಣಕ್ಕೂ ನೀಡಲು ಸಿದ್ದವಿಲ್ಲ ಎಂದು ಸ್ಪಷ್ಟಪಡಿಸಿದರು ಮುಂದೆ ಮತ್ತೊಂದು ಬಾರಿ ಸಭೆ ನಡೆಸುವ ಅಗತ್ಯವಿಲ್ಲ ಇಂದೇ ಜಮೀನು ಬೇಡ ಎಂದು ತೀರ್ಮಾನಿಸಿದ್ದಾರೆ ಎಂದು ತಿಳಿಸಿ ಬಿಡಿ ಎಂದು ಒತ್ತಾಯಿಸಿದರು.

ಎಂಎಲ್ಸಿ ಎಂ.ಎಲ್. ಅನಿಲ್ ಕುಮಾರ್ ಮಾತನಾಡಿ, ಕೋಲಾರ ನಗರ ಹಾಗೂ ಗ್ರಾಮೀಣ ಪ್ರದೇಶಗಳು ವೇಗವಾಗಿ ವಿಸ್ತರಿಸುತ್ತಿವೆ. ಕಳೆದ 30 ವರ್ಷಗಳಿಂದ ಹೊಸ ಬಡಾವಣೆ ನಿರ್ಮಾಣವಾಗಿಲ್ಲ. ನಗರಾಭಿವೃದ್ಧಿ ಪ್ರಾಧಿಕಾರದ ಮೂಲ ಉದ್ದೇಶವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹೊಸ ಬಡಾವಣೆ ಅಗತ್ಯವಾಗಿದೆ ಅದು ರೈತರ ಒಪ್ಪಿಗೆ ಪಡೆದು ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಕೋಲಾರ | ಜು.22 ರಂದು ನೀಟ್ ವಿರುದ್ದ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಛಾತ್ರೋಂಕಿ ಗುಂಜ್ ಕಾರ್ಯಕ್ರಮ

ಸಭೆಯಲ್ಲಿ ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ತಹಶೀಲ್ದಾರ್ ಶ್ರೀನಿವಾಸ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ವೇಮಗಲ್–ನರಸಾಪುರ ಪ್ರಾಧಿಕಾರದ ಅಧ್ಯಕ್ಷ ಉರಟಿ ಅಗ್ರಹಾರ ಚೌಡರೆಡ್ಡಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ. ಶಿವಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನಗರಸಭೆ ಮಾಜಿ ಸದಸ್ಯ ಆಫ್ಸರ್, ಮುಖಂಡ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಕುಡಾ ಸದಸ್ಯರಾದ ಬಿ.ಟಿ. ಮಂಜುನಾಥ್, ಅನಿಲ್ ಐಯ್ಯ, ಕಿಲಾರಿಪೇಟೆ ಮಣಿ, ಜ್ಯೋತಿ ಬ್ಯಾಂಕ್ ಮುನಿಯಪ್ಪ, ಆಯುಕ್ತ ಶ್ರೀನಾಥ್ ಹಾಗೂ ರೈತರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...