ಕೋಲಾರ | ನೂತನ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಗೆ ದಲಿತ ಸಂಘಟನೆಗಳ ಸಂಯುಕ್ತ ರಂಗದಿಂದ ಸ್ವಾಗತ, ಅಭಿನಂದನೆ

Date:

ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಎಂ.ಆರ್. ರವಿ ಕುಮಾರ್ ಅವರಿಗೆ ದಲಿತ ಸಂಘಟನೆಗಳ ಸಂಯುಕ್ತ ರಂಗದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಅಭಿನಂದನೆ ಸಲ್ಲಿಸಿ ಜಿಲ್ಲೆಯ ಅಭಿವೃದ್ಧಿಗೆ ಸ್ವಾಗತ ಕೋರಿದರು.

- Advertisement -

ಜಿಲ್ಲೆಯವರೇ ಆಗಿರುವ ಅವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ, ರೈತರು, ದಲಿತರು, ಕಾರ್ಮಿಕರು ಹಾಗೂ ಎಲ್ಲಾ ವರ್ಗಗಳ ಏಳಿಗೆಗಾಗಿ ಕಾರ್ಯನಿರ್ವಹಿಸಿ ಕೋಲಾರವನ್ನು ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯಾಗಿ ರೂಪಿಸಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ಸಂದರ್ಭದಲ್ಲಿ ಸಂಘಟನೆಗಳ ಮುಖಂಡರು ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ದಲಿತ ಸಂಘಟನೆಗಳಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿ ಸಾಮಾಜಿಕ ನ್ಯಾಯ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಕೆಲಸ ಮಾಡುವುದಾಗಿ ತಿಳಿಸಿದರು.

ಈ ವೇಳೆ ನಚಿಕೇತನ ನಿಲಯದ ಕಲ್ಲಿನ ಕಾಂಪೌಂಡ್‌ನ ಮಧ್ಯಭಾಗದಲ್ಲಿ ಗಾಜಿನ ಕವಚದಲ್ಲಿ ಬುದ್ಧ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಗಳನ್ನು ಅಳವಡಿಸಬೇಕು, ಹಾಗೂ ಹಾಸ್ಟೆಲ್ ಮುಂಭಾಗದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಬಂಗಾರಪೇಟೆ ನಗರದಲ್ಲಿ ನಿರ್ಮಿಸಿರುವ ಮಾದರಿಯಂತೆ ಮೇಲ್ಚಾವಣಿ ಅಳವಡಿಸಿ, ಹಾಳಾಗಿರುವ ಭಾಗಗಳನ್ನು ದುರಸ್ತಿ ಮಾಡಿಸಬೇಕು ಎಂದು ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಸಂಘಟನೆಗಳೊಂದಿಗೆ ಶೀಘ್ರದಲ್ಲೇ ಸಭೆ ನಡೆಸಿ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಹಂತ ಹಂತವಾಗಿ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದನ್ನು ಓದಿದ್ದೀರಾ..?ಕೋಲಾರ | ಎಸ್‌ಐಆರ್‌ ಅವಾಂತರ: ಇಷ್ಟು ವರ್ಷ ಮತ ಚಲಾಯಿಸಿದ್ದರೂ ಕೆಲವರ ಹೆಸರು ಗಾಯಬ್…?

ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಸಂಯುಕ್ತರಂಗದ ಅಧ್ಯಕ್ಷ ಡಿಪಿಎಸ್ ಮುನಿರಾಜು, ಪದಾಧಿಕಾರಿಗಳಾದ ಖಾದ್ರಿಪುರ ಬಾಬು, ಮೇಡಿಹಾಳ ಮುನಿಅಂಜಿನಪ್ಪ, ಮಂಜುಳಮ್ಮ, ಗಾಂಧಿನಗರ ಯುವರಾಜ್, ರಾಮಚಂದ್ರ, ಗದ್ದೆಕಣ್ಣೂರು ಮುನಿಯಪ್ಪ, ಮೋಚಿಪಾಳ್ಯ ನಾಗೇಶ್, ಹರಳಕುಂಟೆ ರಾಜು, ಗಂಗಮ್ಮನಪಾಳ್ಯ ಶಿವಣ್ಣ, ಶ್ರೀರಾಮಪುರ ರವಿ, ಖಾದ್ರಿಪುರ ಚಲಪತಿ, ಹುತ್ತೂರು ರವಿ, ಜಗದೀಶ್, ನವೀನ್, ಸೇರಿದಂತೆ ಮುಂತಾದ ದಲಿತ ಸಂಘಟನೆಗಳ ಮುಖಂಡರು ಇದ್ದರು,

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...