ಹಿರಿಯ ನಾಯಕ ನಜೀರ್ ಅಹ್ಮದ್ ರಾಜೀನಾಮೆ ಪಡೆದರೆ ಕಾಂಗ್ರೆಸ್‌ಗೆ ತಕ್ಕ ಪಾಠ: ಬೆಂಬಲಿಗರ ಎಚ್ಚರಿಕೆ

Date:

ಕೋಲಾರ ಜಿಲ್ಲೆಯ ಹಾಗೂ ರಾಜ್ಯದ ಮುಸ್ಲಿಂ ಸಮುದಾಯದ ಪ್ರಭಾವಿ ಹಿರಿಯ ನಾಯಕರಾದ ನಜೀರ್ ಅಹ್ಮದ್ ಅವರು ತಮ್ಮ ರಾಜಕೀಯ ಜೀವನವನ್ನು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆಯಾದ ಎನ್.ಎಸ್.ಯು.ಐ (NSUI) ಮತ್ತು ಯುವ ಕಾಂಗ್ರೆಸ್ ಮೂಲಕ ಆರಂಭಿಸಿದವರು. ಸುಮಾರು 50 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿರುವ ಇವರು, ಪಕ್ಷ ಅಧಿಕಾರದಲ್ಲಿ ಇರಲಿ ಅಥವಾ ಇಲ್ಲದಿರಲಿ, ಸದಾ ಪಕ್ಷದ ಪರವಾಗಿಯೇ ದೃಢವಾಗಿ ನಿಂತವರು. ಪಕ್ಷ ಸಂಕಷ್ಟದ ಸಮಯದಲ್ಲಿದ್ದಾಗಲೂ ಕೈ ಬಿಡದೆ ಜೊತೆಗಿದ್ದ ನಿಷ್ಠಾವಂತ ನಾಯಕ ಇವರಾಗಿದ್ದಾರೆ.

- Advertisement -

ತಮ್ಮ ಸುದೀರ್ಘ ರಾಜಕೀಯ ಪಯಣದಲ್ಲಿ ಅವರು ಒಂದು ಬಾರಿ ಶಾಸಕರಾಗಿ ಮತ್ತು ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿ (MLC) ಆಯ್ಕೆಯಾಗಿದ್ದು, ಪ್ರಸ್ತುತ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲಾ ಸಮುದಾಯದ ಜನರನ್ನು ಸಮಾನವಾಗಿ ಕಂಡು, ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುವ ಇವರ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕೋಲಾರ ಇವರ ತವರು ಜಿಲ್ಲೆಯಾಗಿದ್ದು, ಅಲ್ಲಿ ಅವರು ಅಪಾರ ಬೆಂಬಲಿಗರನ್ನು ಹೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
WhatsApp Image 2026 04 13 at 7.16.06 PM

ಪಕ್ಷಕ್ಕಾಗಿ ಅರ್ಧ ಶತಮಾನ ಕಾಲ ದುಡಿದ ಇಂತಹ ಹಿರಿಯ ನಾಯಕರಿಂದ ಈಗ ರಾಜೀನಾಮೆ ಪಡೆಯುತ್ತಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಇದರಿಂದ ಅಸಮಾಧಾನಗೊಂಡಿರುವ ಅವರ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ನಜೀರ್ ಅಹ್ಮದ್ ಅವರ ರಾಜೀನಾಮೆ ಪಡೆದರೆ, ಮುಂದಿನ 2028ರ ಚುನಾವಣೆಯಲ್ಲಿ ರಾಜ್ಯದ ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ಕೈಬಿಡಲಿದೆ ಮತ್ತು ಇದರಿಂದ ಪಕ್ಷಕ್ಕೆ ದೊಡ್ಡ ಮಟ್ಟದ ಹಿನ್ನಡೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.

ಕೋಲಾರ ಜಿಲ್ಲೆಯ ಸಮಾಜ ಸೇವಕ ಅಬ್ದುಲ್ ರಶೀದ್ ಅವರು‘ಈ ದಿನ.ಕಾಮ್’ಗೆ ನೀಡಿದ ಪ್ರತಿಕ್ರಿಯೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರಾಜ್ಯದ ಮುಸ್ಲಿಂ ಸಮುದಾಯವು ಸಚಿವ ಜಮೀರ್ ಅಹಮದ್ ಖಾನ್ ಮತ್ತು ನಜೀರ್ ಅಹ್ಮದ್ ಅವರ ಪರವಾಗಿ ದೃಢವಾಗಿ ನಿಂತಿದೆ. ಇವರಿಬ್ಬರನ್ನು ನಾವು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕೂಡಲೇ ನಜೀರ್ ಅಹ್ಮದ್ ಅವರ ಬೆಂಬಲಕ್ಕೆ ನಿಲ್ಲಬೇಕು. ಒಂದು ವೇಳೆ ಈ ಹಿರಿಯ ನಾಯಕರ ರಾಜೀನಾಮೆ ಪಡೆದರೆ, 2028ರ ಚುನಾವಣೆಯಲ್ಲಿ ರಾಜ್ಯದ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷವನ್ನು ಕೈಬಿಡುವ ಮೂಲಕ ತಕ್ಕ ಪಾಠ ಕಲಿಸಲಿದ್ದಾರೆ. ಈ ನಡೆಯಿಂದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ನೂರಕ್ಕೆ ನೂರು ನಿರ್ನಾಮವಾಗುವುದು ಖಚಿತ” ಎಂದು ಅವರು ಎಚ್ಚರಿಸಿದ್ದಾರೆ.

WhatsApp Image 2026 04 13 at 18.23.43

ಇದೇ ವೇಳೆ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ಕಿಡಿಕಾರಿದ ಅವರು, “ರಿಜ್ವಾನ್ ಅರ್ಷದ್ ಮತ್ತು ಅವರ ತಂದೆ ಸತತವಾಗಿ ಚುನಾವಣೆಯಲ್ಲಿ ಸೋತಿದ್ದಾಗ, ಶಿವಾಜಿನಗರದಲ್ಲಿ ರಿಜ್ವಾನ್ ಗೆಲುವಿಗೆ ಶ್ರಮಿಸಿದ್ದು ಇದೇ ಜಮೀರ್ ಅಹಮದ್ ಮತ್ತು ನಜೀರ್ ಅಹ್ಮದ್. ಅಂತಹ ನಾಯಕರ ವಿರುದ್ಧವೇ ಈಗ ರಿಜ್ವಾನ್ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಇನ್ನು ಸಲೀಂ ಅಹ್ಮದ್ ಅವರು ಹೆಸರಿಗೆ ಮಾತ್ರ ವಿಧಾನಪರಿಷತ್ ಸದಸ್ಯರಾಗಿದ್ದು, ಸಮುದಾಯಕ್ಕೆ ಅವರಿಂದ ಯಾವುದೇ ಕೊಡುಗೆ ಸಿಕ್ಕಿಲ್ಲ. ಮುಸ್ಲಿಂ ಮತದಾರರಿಂದ ಗೆದ್ದು ಶಾಸಕರಾಗಿರುವ ರಿಜ್ವಾನ್ ಅರ್ಷದ್ ಅವರು ಹಿರಿಯ ನಾಯಕರ ವಿರುದ್ಧದ ನಡವಳಿಕೆ ಮುಂದುವರಿಸಿದರೆ, ಮುಂದಿನ ಬಾರಿ ಅವರ ಸೋಲು ಖಚಿತ. ನಾಯಕತ್ವದ ವಿರುದ್ಧದ ಇಂತಹ ಸಂಚುಗಳು ಮುಂದುವರಿದರೆ ಕಾಂಗ್ರೆಸ್ ಪಕ್ಷವನ್ನು ಮಣ್ಣುಮುಕ್ಕಿಸುತ್ತೇವೆ,” ಎಂದು ನುಡಿದಿದ್ದಾರೆ.

“ರಾಜಕೀಯವಾಗಿ ಮುಸ್ಲಿಂ ಸಮುದಾಯದವರು ಶಾಸಕರು ಅಥವಾ ಸಂಸದರಾಗಬಾರದು ಎನ್ನುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಹಿಂದೆ ಕೋಲಾರದಲ್ಲಿ ನಜೀರ್ ಅಹ್ಮದ್ ಅವರು ಸ್ಪರ್ಧೆ ಮಾಡಿದಾಗ ಕೆ.ಎಚ್. ಮುನಿಯಪ್ಪ ಅವರೇ ಅವರಿಗೆ ಬೆಂಬಲ ನೀಡಲಿಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. ಬೇರೆ ಸಮುದಾಯದ ವ್ಯಕ್ತಿಗಳು ಸ್ಪರ್ಧಿಸಿದರೆ ಮುಸ್ಲಿಮರು ಮತ ಹಾಕುತ್ತಾರೆ, ಆದರೆ ಮುಸ್ಲಿಮರು ಸ್ಪರ್ಧಿಸಿದರೆ ಇತರರು ಮತ ಹಾಕದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಶೇ. 90ಕ್ಕೂ ಹೆಚ್ಚು ಮುಸ್ಲಿಂ ಮತಗಳೇ ಕಾರಣ, ಆದರೂ ಇಂದು ಅದೇ ಸಮುದಾಯದ ನಾಯಕರನ್ನು ಮುಗಿಸಲು ಹೊರಟಿದ್ದಾರೆ. ಬಿಜೆಪಿಯ ಭಯ ತೋರಿಸಿ ಮತ ಪಡೆಯುವ ಕಾಂಗ್ರೆಸ್, ಅಧಿಕಾರ ನೀಡುವಲ್ಲಿ ಮಾತ್ರ ವಂಚಿಸುತ್ತಿದೆ. ಇಂತಹ ಗುಲಾಮಗಿರಿ ಪದ್ಧತಿಯಿಂದ ಸಮುದಾಯ ಹೊರಬರಬೇಕು. ಸಲೀಂ ಅಹ್ಮದ್ ಹಾಗೂ ರಿಜ್ವಾನ್ ಅರ್ಷದ್ ಹಿರಿಯ ನಾಯಕರ ಮೇಲೆ ಆರೋಪ ಮಾಡುವುದು ಸರಿಯಲ್ಲ, ಸಮುದಾಯದ ನಾಯಕರೆಲ್ಲರೂ ಒಗ್ಗಟ್ಟಾಗಿ ಇರಬೇಕು” ಎಂದು ಕರೆ ನೀಡಿದ್ದಾರೆ.

ಕೋಲಾರ ಕಾಂಗ್ರೆಸ್ ಯುವ ಮುಖಂಡ ಸಾಧೀಕ್ ಪಕ್ಷದ ದ್ವಂದ್ವ ನೀತಿಯನ್ನು ಪ್ರಶ್ನಿಸಿ ಹೈಕಮಾಂಡ್ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. “2013ರ ವಿಧಾನಸಭಾ ಚುನಾವಣೆಯಲ್ಲಿ ನಜೀರ್ ಅಹ್ಮದ್ ಅವರು ಸ್ಪರ್ಧಿಸಿದಾಗ ಅವರ ವಿರುದ್ಧ ಕೆಲಸ ಮಾಡಿದ ಕೋಲಾರದ ಕಾಂಗ್ರೆಸ್ ಹಿರಿಯ ನಾಯಕರ ಮೇಲೆ ಪಕ್ಷ ಯಾಕೆ ಕ್ರಮ ಕೈಗೊಳ್ಳಲಿಲ್ಲ? 2023ರಲ್ಲಿ ರಾಯಚೂರಿನಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಯ ಸೋಲಿಗೆ ಕಾರಣರಾದ ಸಚಿವ ಬೋಸರಾಜು ಪುತ್ರನ ವಿರುದ್ಧ ಕ್ರಮ ಜರುಗಿಸುವ ಬದಲು ಅವರಿಗೆ ಮಿನಿಸ್ಟರ್ ಮಾಡಿದ್ದೀರಿ. ಆದರೆ, ಬಾಗಲಕೋಟೆಯ ಗಲ್ಲಿ ಗಲ್ಲಿಗಳಲ್ಲಿ ಹಗಲಿರುಳು ಅಲೆದು ಪಕ್ಷದ ಪರ ಕೆಲಸ ಮಾಡಿದ ನಜೀರ್ ಅಹ್ಮದ್ ಅವರಿಗೆ ಈಗ ರಾಜೀನಾಮೆ ಕೇಳುತ್ತಿರುವುದು ಎಷ್ಟು ಸರಿ?” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

WhatsApp Image 2026 04 13 at 18.26.27

ಕೋಲಾರ ಜಿಲ್ಲಾ ಎಸ್‌ಡಿಪಿಐ ಅಧ್ಯಕ್ಷ ಶಾಹುಜ್ ಅವರು ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕಾಂಗ್ರೆಸ್ ಪಕ್ಷವು ಹೊಸ ನಾಯಕರನ್ನು ಮುಂದೆ ಬಿಟ್ಟು ಹಿರಿಯ ನಾಯಕರನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸುತ್ತಿರುವುದು ಸರಿಯಲ್ಲ. ಮುಸ್ಲಿಮರನ್ನು ಕೇವಲ ಗುಲಾಮರಂತೆ ಇಟ್ಟುಕೊಂಡು, ತಾವು ಹೇಳಿದಂತೆ ಕೇಳಿಕೊಂಡು ಇರಬೇಕು ಎಂಬ ಮನಸ್ಥಿತಿಯನ್ನು ಕಾಂಗ್ರೆಸ್ ನಾಯಕರು ಹೊಂದಿದ್ದಾರೆ. ಕಳೆದ 70 ವರ್ಷಗಳಿಂದ ಮುಸಲ್ಮಾನರನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್, ಸಮುದಾಯದ ನಾಯಕರು ಸ್ವತಂತ್ರವಾಗಿ ಬೆಳೆಯಲು ಬಿಡುತ್ತಿಲ್ಲ. ಹಿರಿಯ ನಾಯಕ ನಜೀರ್ ಅಹ್ಮದ್ ಅವರ ರಾಜೀನಾಮೆ ಕೇಳುತ್ತಿರುವುದು ಈ ಶೋಷಣೆಯ ಒಂದು ಭಾಗವಾಗಿದೆ. ದಾವಣಗೆರೆಯಲ್ಲಿ ದಶಕಗಳಿಂದ ಶಾಮನೂರು ಕುಟುಂಬವೇ ಅಧಿಕಾರ ಅನುಭವಿಸಬಹುದು ಎಂದಾದರೆ, ಮುಸ್ಲಿಂ ನಾಯಕರಿಗೆ ಮಾತ್ರ ಯಾಕೆ ಈ ತಾರತಮ್ಯ?” ಎಂದು ಪ್ರಶ್ನಿಸಿದ್ದಾರೆ.

“2023ರ ಚುನಾವಣೆಯಲ್ಲಿ ರಾಜ್ಯದ ಮುಸ್ಲಿಂ ಸಮುದಾಯವು ಒಗ್ಗಟ್ಟಾಗಿ ಕಾಂಗ್ರೆಸ್ ಬೆಂಬಲಿಸಲು ನಜೀರ್ ಅಹ್ಮದ್ ಮತ್ತು ಜಮೀರ್ ಅಹಮದ್ ಅವರ ಶ್ರಮ ಅಪಾರವಾಗಿದೆ. ಇಂತಹ ಹಿರಿಯ ನಾಯಕರನ್ನು ಮೂಲೆಗುಂಪು ಮಾಡುತ್ತಿರುವುದಕ್ಕೇ ಕಾಂಗ್ರೆಸ್ ದೇಶಾದ್ಯಂತ ನೆಲಕಚ್ಚುತ್ತಿದೆ. ನಮ್ಮ ನಾಯಕರ ರಾಜೀನಾಮೆ ಪಡೆದರೆ 2028ರ ಚುನಾವಣೆಯಲ್ಲಿ ಶೇ. 100ರಷ್ಟು ಅಲ್ಪಸಂಖ್ಯಾತರು ಕಾಂಗ್ರೆಸ್ ಕೈಬಿಡುವುದು ಖಚಿತ. ಒಂದು ವೇಳೆ ಅವರ ರಾಜೀನಾಮೆ ಪಡೆದರೆ, ಕೋಲಾರ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತ ಪದಾಧಿಕಾರಿಗಳು ಹಾಗೂ ಸರ್ಕಾರಿ ಮಂಡಳಿಗಳಿಗೆ ನಾಮನಿರ್ದೇಶನಗೊಂಡಿರುವವರೆಲ್ಲರೂ ಒಟ್ಟಾಗಿ ರಾಜೀನಾಮೆ ನೀಡುತ್ತೇವೆ” ಎಂದು ಸಾಧೀಕ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಕೋಲಾರ | ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು : ಎಂ.ಕೆ.ರಾಘವೇಂದ್ರ

WhatsApp Image 2026 04 13 at 7.14.28 PM 1

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರ ಮೇಲೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಯಾವುದೇ ಒತ್ತಡ ಹೇರಬಾರದು ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ರೀದ್ ಮನವಿ ಮಾಡಿದ್ದಾರೆ. ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಅಲ್ಪಸಂಖ್ಯಾತರ ಪ್ರಬಲ ನಾಯಕರಾಗಿರುವ ನಜೀರ್ ಅಹ್ಮದ್ ಅವರ ನೇತೃತ್ವದಲ್ಲೇ ಜಿಲ್ಲೆಯಲ್ಲಿ ಕಾಂಗ್ರೆಸ್ ಹಲವು ಗೆಲುವುಗಳನ್ನು ಸಾಧಿಸಿದೆ. ಒಂದು ವೇಳೆ ರಾಜಕೀಯ ಷಡ್ಯಂತ್ರದ ಮೂಲಕ ಅವರ ರಾಜೀನಾಮೆ ಪಡೆದರೆ, ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯಾದ್ಯಂತ ಭಾರಿ ದೊಡ್ಡ ಮಟ್ಟದ ಹೊಡೆತ ಅನುಭವಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಹಿರಿಯ ನಾಯಕ ನಜೀರ್ ಅಹ್ಮದ್ ಅವರ ಪರವಾಗಿ ಹಮ್ಮಿಕೊಂಡಿರುವ ಈ ಹೋರಾಟವು ಇಂದು ಮತ್ತಷ್ಟು ತೀವ್ರಗೊಂಡಿದೆ. ಕೋಲಾರ ಜಿಲ್ಲೆಯ ನೂರಾರು ಅಲ್ಪಸಂಖ್ಯಾತ ಮತ್ತು ಅಹಿಂದ ವರ್ಗದ ಮುಖಂಡರು ಇಂದು ಕೋಲಾರದಿಂದ ಬೆಂಗಳೂರಿಗೆ ತೆರಳಿ, ನಜೀರ್ ಅಹ್ಮದ್ ಅವರು ಯಾವುದೇ ಕಾರಣಕ್ಕೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಾರದು ಎಂದು ಆಗ್ರಹಿಸಲಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ಹಠಕ್ಕೆ ಬಿದ್ದು ರಾಜೀನಾಮೆ ಪಡೆದಿದ್ದೇ ಆದಲ್ಲಿ, ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಈ ರಾಜಕೀಯ ಬೆಳವಣಿಗೆಯು ಜಿಲ್ಲೆಯ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಮಟ್ಟದ ಸಂಚಲನ ಸೃಷ್ಟಿಸಿದ್ದು, ಹೈಕಮಾಂಡ್ ಈ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ ಕುಸಿಯುತ್ತಿರುವ ವಿಶ್ವಾಸಾರ್ಹತೆ

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ...