ತಾಲೂಕಿನ ವಿವಿಧ ಇಲಾಖೆಯ 3200 ಕೋಟಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು.
ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರ ಜಮೀನುಗಳಿಗೆ ಹಾಗೂ ಕೆರೆಗಳಿಗೆ ನೀರು ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ‘ನೀರಿನ ಗ್ಯಾರಂಟಿ’ಯೇ ನಮ್ಮ ಸರ್ಕಾರದ ಏಳನೇ ಗ್ಯಾರಂಟಿ. ಹಾಸನದ ಮೂಲಕ ಪಶ್ಚಿಮ ಘಟ್ಟದ ನೀರನ್ನು ತಂದು ಈ ಭಾಗದ ಕೆರೆಗಳನ್ನು ತುಂಬಿಸುವ ‘ಎತ್ತಿನಹೊಳೆ ಯೋಜನೆ’ಯನ್ನು 2027ರ ವೇಳೆಗೆ ಪೂರ್ಣಗೊಳಿಸಲು ಸಂಕಲ್ಪ ಮಾಡಿದ್ದೇವೆ. ವಿರೋಧ ಪಕ್ಷಗಳು ಈ ಯೋಜನೆಯನ್ನು ಲೇವಡಿ ಮಾಡುತ್ತಿದ್ದರೂ, ಸವಾಲನ್ನು ಸ್ವೀಕರಿಸಿ ಕೆಲಸ ಪೂರ್ಣಗೊಳಿಸಲಿದ್ದೇವೆ ಎಂದು ಉಪಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ನಂಜೇಗೌಡರು ರಾಜ್ಯಕ್ಕೆ ಆದರ್ಶ ಶಾಸಕರು. ಕೋವಿಡ್ ಸಮಯದಲ್ಲಿ ರೈತರ ಬೆಳೆಗೆ ಮಾರುಕಟ್ಟೆ ಇಲ್ಲದೇ ಇರುವಾಗ ನಾವು ಇಲ್ಲಿ ತರಕಾರಿ ಖರೀದಿ ಮಾಡಿ ಬೆಂಗಳೂರಿನಲ್ಲಿ ಜನರಿಗೆ ಉಚಿತವಾಗಿ ಹಂಚಿದ್ದೇವೆ. ನಂಜೇಗೌಡರು ನಿಮಗೆ ಮಾತು ಕೊಟ್ಟಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಮುಖ್ಯ. ನಂಜೇಗೌಡರು ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಅದಕ್ಕೆ ಈ ಕಾರ್ಯಕ್ರಮ ಉದಾಹರಣೆ. ಅವರು ತಮಗೆ ಸಿಕ್ಕ ಅವಕಾಶದಲ್ಲಿ ಇಂತಹ ಯೋಜನೆಗಳ ಮೂಲಕ ಸಾಕ್ಷಿಗುಡ್ಡಿ ಬಿಟ್ಟಿದ್ದಾರೆ. ವಿರೋಧ ಪಕ್ಷದವರು ಟೀಕೆ ಮಾಡಲಿ, ನಮ್ಮ ತಪ್ಪು ಕಂಡು ಹಿಡಿದರೆ ತಿದ್ದುಕೊಳ್ಳೋಣ. ಆದರೆ ಕಳೆದ ಮೂರು ವರ್ಷಗಳಲ್ಲಿ ವಿರೋಧ ಪಕ್ಷಗಳ ಟೀಕಗಳು ಸತ್ತಿವೆ, ನಮ್ಮ ಸಾಧನೆಗಳು ಶಾಶ್ವತವಾಗಿ ಉಳಿದಿವೆ ಎಂದು ತಿಳಿಸಿದರು.
ನಮ್ಮ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ. ಈ ಯೋಜನೆಗಳನ್ನು ಪ್ರಧಾನಮಂತ್ರಿ ಮೋದಿ ಅವರಿಂದ ಬಿಜೆಪಿ ಸ್ನೇಹಿತರು ಟೀಕಿಸಿದರು. ನಾವು ಪ್ರತಿ ವರ್ಷ 52 ಸಾವಿರ ಕೋಟಿ ಹಣ ಮೀಸಲಿಟ್ಟಿದ್ದೇವೆ. ಗ್ಯಾರಂಟಿ ಯೋಜನೆಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಹಕ್ಕು ನೀಡಿ ಎಲ್ಲರ ಆಸ್ತಿ ದಾಖಲೆ ಸರಿ ಮಾಡುವುದರ ಜತೆಗೆ ಪಟ್ಟಾ ದಾಖಲೆ, ಹಕ್ಕು ಪತ್ರ ನೀಡಲಾಗಿದೆ. ಕಾಯಕದಿಂದ ನಾಯಕತ್ವ ಸಿಗುತ್ತದೆ. ಜನಪರವಾಗಿದ್ದರೆ ಮಾತ್ರ ಅಧಿಕಾರ ಸಿಗುತ್ತದೆ. ಅಧಿಕಾರ ನಶ್ವರ, ಸಾಧನೆಗಳು ಅಜರಾಮರ, ಮತದಾರರೇ ಈಶ್ವರ ಎಂದು ನಿಮ್ಮನ್ನು ನಾವು ದೇವರಂತೆ ಕಾಣುತ್ತಿದ್ದೇವೆ. ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳ ಖಾತೆಗಳನ್ನು ಮನೆ ಬಾಗಿಲಿಗೆ ನೀಡುತ್ತಿದ್ದೇವೆ. ಕೇಂದ್ರ ಬಿಜೆಪಿ ಸರ್ಕಾರ ನಮ್ಮ ಈ ಯೋಜನೆಗೆ ಪ್ರಶಸ್ತಿ ನೀಡಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಯುವಕರಿಗೆ ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆ, ಜಾತ್ಯಾತೀತ ಮನೋಭಾವ, ನಾಯಕತ್ವ ಗುಣ ಬೆಳೆಸಲು ಪಂಚಾಯ್ತಿ ಹಾಗೂ ವಾರ್ಡ್ ಮಟ್ಟದಲ್ಲಿ ಭಾರತ ಜೋಡೋ ಯುವ ಶಕ್ತಿ ಸಂಘ ರಚಿಸಲು ಮುಂದಾಗಿದ್ದೇವೆ. ಈ ಸಂಘದಲ್ಲಿ 16-40 ವರ್ಷದ ಯುವಕರು ಸದಸ್ಯರಾಗಬಹುದು. ಪ್ರತಿ ಸಂಘಕ್ಕೆ ವಾರ್ಷಿಕ 10 ಲಕ್ಷದಂತೆ ಒಟ್ಟು 1 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚಿಸಲಾಗಿದೆ. ಮೂಲಕ ಫಲಾನುಭವಿಗಳ ಜತೆ ಸಂಪರ್ಕ ಸಾಧಿಸಲು ಅವಕಾಶ ಕಲ್ಪಿಸಲಾಗಿದೆ. ಆರು ಜನ ಸಮಿತಿಯಲ್ಲಿ ಹಿಂದುಳಿದವರು, ಅಲ್ಪಸಂಖ್ಯಾತರು ಪರಿಶಿಷ್ಟರು ಮಹಿಳೆಯರಿಗೆ ಅವಕಾಶ ನೀಡಲಾಗುವುದು ಎಂದರು.
ಜಿಲ್ಲೆಯ ಎಲ್ಲಾ ಶಾಸಕರು ಆಧಾರ ಸ್ತಂಭವಾಗಿದ್ದಾರೆ. ಒಗ್ಗಟ್ಟಿನಲ್ಲಿ ಬಲವಿದೆ. ಮಂತ್ರಿ ಮಂಡಲದಲ್ಲಿ ಜಿಲ್ಲೆಗೆ ಸಚಿವ ಸ್ಥಾನ ನೀಡಲು ಆಗಿಲ್ಲ. ಆದರೆ ಈ ಜಿಲ್ಲೆಯ ಪ್ರತಿ ಶಾಸಕರೂ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು. ಅವರಿಗೆ ಶಕ್ತಿ ತುಂಬುವ ಕೆಲಸ ನಾನು ಮಾಡುವೆ. ಅದು ನನ್ನ ಕರ್ತವ್ಯ. ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ಜಿಲ್ಲಾ ಮಂತ್ರಿಗಳು ಪ್ರತಿ ತಾಲ್ಲೂಕಿನಲ್ಲಿ 15 ದಿನಕ್ಕೊಮ್ಮೆ ಜನರ ಅಹವಾಲು ಸ್ವೀಕರಿಸಲಿದ್ದಾರೆ. ಶಾಸಕರು ಪಂಚಾಯಿತಿಗಳಿಗೆ ಹೋಗಿ ಜನರ ಸಮಸ್ಯೆ ಆಲಿಸಬೇಕು. ಅದಕ್ಕಾಗಿ ಪ್ರಜಾಸೇವೆ ಇಲಾಖೆ ಪ್ರಾರಂಭಿಸುತ್ತಿದ್ದೇವೆ ಎಂದರು.
ರಾಜ್ಯದಲ್ಲಿ ಎಸ್ಐಆರ್ ನಡೆಯುತ್ತಿದೆ. ನೀವು ನಿಮ್ಮ ಮತ ಉಳಿಸಿಕೊಳ್ಳದಿದ್ದರೆ, ನೀವು ಅನೇಕ ಯೋಜನೆಗಳಿಂದ ವಂಚಿತರಾಗುತ್ತೀರಿ. ನಿಮ್ಮ ಮತ ನಿಮ್ಮ ಹಕ್ಕು. ನಿಮ್ಮ ಹಕ್ಕನ್ನು ಉಳಿಸಿಕೊಳ್ಳಿ. ಕರಡುಪಟ್ಟಿಯಲ್ಲಿ 1 ಕೋಟಿಗೂ ಹೆಚ್ಚು ಹೆಸರು ತೆಗೆಯಲಾಗುತ್ತಿದೆ. ನಿಮ್ಮ ಜಾತಿ ಪ್ರಮಾಣಪತ್ರ, ವಾಸ ದೃಢೀಕರಣ ಪತ್ರ ನೀಡಲು ಸರ್ಕಾರ ಮುಂದಾಗಿದೆ. ಸರ್ಕಾರ ಚುನಾವಣಾ ಆಯೋಗದ ಜತೆ ಕೈಜೋಡಿಸಲಿದೆ” ಎಂದು ಹೇಳಿದರು.
ಅಧಿಕಾರ ಶಕ್ತಿ ಸಂಕೇತವಲ್ಲ, ಜವಾಬ್ದಾರಿಯ ಸಂಕೇತ. ನಾವು ಅಧಿಕಾರವನ್ನು ಸಿಂಹಾಸನವೆಂದು ತಿಳಿದಿಲ್ಲ, ಜನಸೇವೆಗೆ ಸಿಕ್ಕಿರುವ ಅವಕಾಶ ಎಂದು ಭಾವಿಸಿದ್ದೇವೆ. ಮೂರ್ತಿಗೆ ಬೆಲೆ ಕಟ್ಟಬಹುದು ದೇವರಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ದೇವರು. ನಮಗೆ ಆಶೀರ್ವಾದ ಮಾಡಿ ನಿಮ್ಮ ಸೇವೆಗೆ ಅವಕಾಶ ಮಾಡಿಕೊಟ್ಟಿದ್ದೀರಿ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ಬಸ್ಗಾಗಿ ವಿದ್ಯಾರ್ಥಿಗಳು ಪರದಾಟ.. ಬಸ್ ಬಾಗಿಲಿಗೆ ಜೋತು ಬಿದ್ದು ಪ್ರಯಾಣ..!ಶಾಲೆ-ಕಾಲೇಜ್ ಸಮಯಕ್ಕೆ ಪ್ರತ್ಯೇಕ ಬಸ್ ಸಂಚರಿಸಲಿ
ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ, ಆರೋಗ್ಯ ಸಚಿವ ಯು.ಟಿ ಖಾದರ್, ಆಹಾರ ಸಚಿವರಾದ ಕೆ.ಹೆಚ್ ಮುನಿಯಪ್ಪ, ಸಚಿವರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಯತೀಂದ್ರ ಸಿದ್ದರಾಮಯ್ಯ, ಮಾಲೂರು ಶಾಸಕ ನಂಜೇಗೌಡ, ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ, ಕೆಜಿಎಫ್ ಶಾಸಕಿ ರೂಪ ಶಶೀಧರ್,ಕೋಲಾರ ಶಾಸಕ ಕೋತ್ತೂರ್ ಮಂಜುನಾಥ್, ಶ್ರೀನಿವಾಸಪುರ ಶಾಸಕ ವೆಂಕಟಶಿವಾರೆಡ್ಡಿ, ಮುಳಬಾಗಿಲು ಶಾಸಕ ಸಂವೃದ್ಧಿ ಮುಂಜುನಾಥ್, ವಿಧಾನಪರಿಷತ್ ಸದಸ್ಯರಾದ ನಸೀರ್ ಅಹ್ಮದ್, ಅನೀಲ್ ಕುಮಾರ್, ಟಿ.ಡಿ ಶ್ರೀನಿವಾಸ್, ಜಿಲ್ಲಾಧಿಕಾರಿ ರವಿ ಎಂ.ಆರ್, ಜಿಲ್ಲಾ ಪಂಚಾಯತ್ ಸಿಇಒ ಪ್ರವೀಣ್ ಬಾಗೇವಾಡಿ ಮುಂತಾದವರು ಉಪಸ್ಥಿತರಿದ್ದರು.
ಮಾಲೂರು | 2027ರ ವೇಳೆಗೆ ಕೋಲಾರಕ್ಕೆ ನೀರು ಹರಿಸಲು ಸರ್ಕಾರದ ಸಂಕಲ್ಪ : ಸಿಎಂ ಡಿ ಕೆ ಶಿವಕುಮಾರ್
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ




