ಮಾಲೂರು ವಿಧಾನಸಭಾ ಕ್ಷೇತ್ರ: ಇಂದು ಮರು ಮತ ಎಣಿಕೆ

Date:

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಮಾಲೂರು ವಿಧಾನಸಭಾ ಕ್ಷೇತ್ರದ ಮತಗಳ ಮರುಎಣಿಕೆ ಮಂಗಳವಾರ (ನ.11) ನಡೆಯಲಿದೆ.

- Advertisement -

ನಗರ ಹೊರವಲಯದ ತೋಟಗಾರಿಕೆ ಮಹಾವಿದ್ಯಾಲಯದ ಒಂದೇ ಕೊಠಡಿಯಲ್ಲಿ ಅಂಚೆ ಮತ ಹಾಗೂ ಎಲೆಕ್ಟ್ರಾನಿಕ್‌ ಮತಯಂತ್ರ (ಇವಿಎಂ) ಮತಗಳ ಎಣಿಕೆ ಬೆಳಗ್ಗೆ 8ಕ್ಕೆ ಆರಂಭವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳ ಸಮ್ಮುಖದಲ್ಲಿ ಸೋಮವಾರ ಭದ್ರತಾ ಕೊಠಡಿ (ಸ್ಟ್ರಾಂಗ್‌ ರೂಂ) ಬಾಗಿಲು ತೆರೆದು ಬಿಗಿ ಭದ್ರತೆಯಲ್ಲಿ ಎವಿಎಂ, ಇತರ ಸಾಮಗ್ರಿಗಳನ್ನು ಎಣಿಕೆ ಕೇಂದ್ರಕ್ಕೆ ಸಾಗಿಸಲಾಯಿತು.

ಉಪವಿಭಾಗಾಧಿಕಾರಿ ಡಾ.ಎಚ್.ಪಿ.ಎಸ್‌.ಮೈತ್ರಿ ಚುನಾವಣಾಧಿಕಾರಿ ಆಗಿದ್ದಾರೆ. ಉತ್ತರ ಪ್ರದೇಶದ ಐಎಎಸ್‌ ಅಧಿಕಾರಿ ಪ್ರಭು ನಾರಾಯಣಸಿಂಗ್‌ ಚುನಾವಣಾ ಆಯೋಗವು ವೀಕ್ಷಕರನ್ನಾಗಿ ಅವರನ್ನು ನೇಮಿಸಿದೆ.

ಶಾಸಕ, ಕಾಂಗ್ರೆಸ್‌ನ ಕೆ.ವೈ.ನಂಜೇಗೌಡರ ಸ್ಥಾನ ಅಬಾಧಿತವೊ, ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಕೆ.ಎಸ್‌. ಮಂಜುನಾಥಗೌಡರಿಗೆ ಅದೃಷ್ಟ ಒಲಿಯಲಿದೆಯೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಎಸ್‌ಎಸ್‌ನ ಇತಿಹಾಸವನ್ನೇ ತಿರುಚುತ್ತಿರುವ ಭಾಗವತ್!

2023ರ ಚುನಾವಣೆಯಲ್ಲಿ ನಂಜೇಗೌಡ 248 ಮತಗಳಿಂದ ಗೆದ್ದಿದ್ದರು. ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಮಂಜುನಾಥಗೌಡ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ನಂಜೇಗೌಡರ ಆಯ್ಕೆ ಅಸಿಂಧುಗೊಳಿಸಿದ್ದ ಹೈಕೋರ್ಟ್‌ ಮರುಎಣಿಕೆಗೆ ಸೂಚಿಸಿತ್ತು. ಇದನ್ನು ನಂಜೇಗೌಡ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಮುಚ್ಚಿದ ಲಕೋಟೆಯಲ್ಲಿ ಫಲಿತಾಂಶ ರವಾನೆ

ಮರು ಮತ ಎಣಿಕೆ‌ಯ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್‌ಗೆ ರವಾನಿಸಲಾಗುತ್ತದೆ. ಸಾರ್ವಜನಿಕವಾಗಿ ಫಲಿತಾಂಶ ಪ್ರಕಟಿಸದಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಈಗಾಗಲೇ ನಿರ್ದೇಶನ ನೀಡಿದೆ. ಹೀಗಾಗಿ ಚುನಾವಣಾಧಿಕಾರಿಯು ಫಲಿತಾಂಶ ಪ್ರಕಟಿಸುವುದಿಲ್ಲ. ಆದರೆ ಮತ ಎಣಿಕೆ ವೇಳೆ ಅಭ್ಯರ್ಥಿಗಳ ಏಜೆಂಟರು ಇರಲಿದ್ದು ಅವರಿಗೆ ಫಲಿತಾಂಶ ಏನೆಂದು ಗೊತ್ತಾಗಲಿದೆ. ಗೆದ್ದವರು ಸಂಭ್ರಮಿಸಲು ಸಿದ್ಧತೆ ಕೂಡ ಮಾಡಿಕೊಂಡಿದ್ದಾರೆ. ಎಣಿಕೆ ಕೇಂದ್ರಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಪಾರದರ್ಶಕವಾಗಿ ಎಣಿಕೆಗೆ ಬಿಜೆಪಿ ಆಗ್ರಹ

ಭದ್ರತಾ ಕೊಠಡಿಯಲ್ಲಿರುವ ಚುನಾವಣಾ ಸಾಮಗ್ರಿ ದಾಖಲೆಗಳಿಗೆ ಸಂಬಂಧಿಸಿದಂತೆ ಹಲವಾರು ನ್ಯೂನತೆ ಕಂಡುಬಂದಿವೆ. ಅಂಚೆ ಮತಗಳು ಇರುವ ಪೆಟ್ಟಿಗೆಯ ಸೀಲ್ ತೆರೆದುಕೊಂಡಿದೆ. ಕೆಲ ಇವಿಎಂ ವಿವಿ ಪ್ಯಾಟ್‌ಗಳನ್ನು ಕೂಡ ಕ್ರಮವಾಗಿ ಇಟ್ಟಿಲ್ಲ. ಎಲ್ಲ ಮತಗಟ್ಟೆಗಳ ವಿವಿ ಪ್ಯಾಟ್‌ ಚೀಟಿಗಳನ್ನು ತಾಳೆ ಮಾಡಿ ನೋಡಬೇಕು.‌ ಸಂಪೂರ್ಣ ವಿಡಿಯೊ ಚಿತ್ರೀಕರಣ ಮಾಡಬೇಕು ಎಂದು ಪರಾಜಿತ ಅಭ್ಯರ್ಥಿ ಕೆ.ಎಸ್‌.ಮಂಜುನಾಥಗೌಡ ಆಗ್ರಹಿಸಿದ್ದಾರೆ.

ಸುಪ್ರೀಂ ಕೋರ್ಟ್‌ ನಿರ್ದೇಶನ ಹಾಗೂ ಚುನಾವಣಾ ಆಯೋಗದ ಸೂಚನೆಗಳಂತೆ ಪಾರದರ್ಶಕವಾಗಿ ಮರು ಮತ ಎಣಿಕೆ ನಡೆಸಬೇಕು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಸದಸ್ಯ ಕೇಶವ ಪ್ರಸಾದ್ ನೇತೃತ್ವದ ಬಿಜೆಪಿ ನಿಯೋಗ ಜಿಲ್ಲಾಧಿಕಾರಿ ಎಂ.ಆರ್‌.ರವಿ ಅವರಿಗೆ ಸೋಮವಾರ ಮನವಿ ಸಲ್ಲಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...