ಮುಳಬಾಗಿಲು | ಅಕ್ರಮ ಮರಳು ಫಿಲ್ಟರ್ ದಂಧೆ: ನಂಗಲಿ ಪಿಎಸ್ಐ,ಎಸ್‌ಬಿ ಕಾನ್ಸ್‌ಟೇಬಲ್ ಅಮಾನತು

Date:

ಅಕ್ರಮ ಮರಳು ಫಿಲ್ಟರ್ ದಂಧೆ ತಡೆಯುವಲ್ಲಿ ವಿಫಲವಾದ ಹಾಗೂ ಅಕ್ರಮ ಚಟುವಟಿಕೆಗಳಿಗೆ ಪರೋಕ್ಷವಾಗಿ ಬೆಂಬಲ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿ ಪೊಲೀಸ್ ಠಾಣೆಯ ಪಿಎಸ್ಐ ವಿದ್ಯಾಶ್ರೀ ಮತ್ತು ಎಸ್‌ಬಿ ಕಾನ್ಸ್‌ಟೇಬಲ್ ಪ್ರವೀಣ್ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಆದೇಶ ಹೊರಡಿಸಿದ್ದಾರೆ.

ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯ ನಂಗಲಿ ದೊಡ್ಡಕೆರೆಯಲ್ಲಿ ಅಕ್ರಮವಾಗಿ ಮರಳು ಫಿಲ್ಟರ್ ಮಾಡುವ ಅಡ್ಡೆ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು.ಈ ಹಿನ್ನೆಲೆಯಲ್ಲಿ ಎಎಸ್ಪಿ ಮೊನಿಷಾ ಅವರು ಸ್ಥಳದ ಮೇಲೆ ದಾಳಿ ನಡೆಸಿದ್ದರು. ದಾಳಿ ಸಂದರ್ಭದಲ್ಲಿ ಅಕ್ರಮ ಚಟುವಟಿಕೆಗೆ ಬಳಸುತ್ತಿದ್ದ ಒಂದು ಟ್ರ್ಯಾಕ್ಟರ್ ಹಾಗೂ ಒಂದು ಜೆಸಿಬಿಯನ್ನು ವಶಕ್ಕೆ ಪಡೆಯಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ಪಿ ಮೊನಿಷಾ ಅವರು ನೀಡಿದ ವರದಿಯನ್ನು ಪರಿಶೀಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಅವರು ಕರ್ತವ್ಯಲೋಪದ ಹಿನ್ನೆಲೆಯಲ್ಲಿ ನಂಗಲಿ ಪಿಎಸ್ಐ ವಿದ್ಯಾಶ್ರೀ ಹಾಗೂ ಎಸ್‌ಬಿ ಕಾನ್ಸ್‌ಟೇಬಲ್ ಪ್ರವೀಣ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳ ಕರ್ತವ್ಯಲೋಪದ ಆರೋಪ ಇದೀಗ ಪೊಲೀಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಟಾ–ಹೊನ್ನಾವರ ಕ್ಷೇತ್ರಕ್ಕೆ ರೂ.12 ಲಕ್ಷ ಅನುದಾನ; ಮನ್ಸೂರ್ ಅಲಿ ಖಾನ್‌ಗೆ ನಿವೇದಿತ್ ಆಳ್ವಾ ಕೃತಜ್ಞತೆ

ಕುಮಟಾ–ಹೊನ್ನಾವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಲಾ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೌಲಭ್ಯಗಳ...

ಯಲ್ಲಾಪುರ | ಚೆಕ್‌ಡ್ಯಾಮ್‌ನಲ್ಲಿ ಸ್ನಾನಕ್ಕೆ ಇಳಿದ ವ್ಯಕ್ತಿ ಮುಳುಗಿ ಸಾವು

ಕುಟುಂಬದವರೊಂದಿಗೆ ಪ್ರವಾಸಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಚೆಕ್‌ಡ್ಯಾಮ್‌ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ನೀರಿನಲ್ಲಿ...

ಗುರುಪುರ | ನೂತನ ಕಾರ್ಮಿಕ ಸಂಹಿತೆ ರದ್ದತಿಗೆ ಒತ್ತಾಯಿಸಿ ಕಟ್ಟಡ ಕಾರ್ಮಿಕರ ಸಂಘದಿಂದ ಪ್ರತಿಭಟನೆ

ಕೇಂದ್ರ ಸರಕಾರ ಜಾರಿಗೊಳಿಸಿರುವ ನೂತನ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ...

ಶಿವಮೊಗ್ಗ | ರಸ್ತೆ ದಾಟಲು ನಿಂತಾಗ ಬೈಕ್ ಡಿಕ್ಕಿ; ವೃದ್ಧ ಕೊನೆಯುಸಿರು

ರಸ್ತೆ ದಾಟಲು ನಿಂತಿದ್ದ ವೃದ್ಧರೊಬ್ಬರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ...