ಕೋಲಾರ | ಪಂಚಾಯತಿ ನಿಮ್ಮಪ್ಪನ ಆಸ್ತಿಯಾ? ವಸೂಲಿಗೆ ಇಳಿದಿದ್ದೀರಾ? PDOಗೆ ತರಾಟೆ!

Date:

“ಪಂಚಾಯಿತಿಯನ್ನು ನಿಮ್ಮ ಅಪ್ಪನ ಆಸ್ತಿ ಅಂದುಕೊಂಡಿದ್ದೀಯಾ? ಇಲ್ಲಿಗೆ ರಾಜನಂತೆ ಆಗಿದ್ದೀಯಾ, ವಸೂಲಿಗೆ ಇಳಿದಿದ್ದೀರಾ? ನೆಪ ಹೇಳಿದರೆ ಕಪಾಳಕ್ಕೆ ಹೊಡೆಯುತ್ತೇನೆ, ಕಲಬುರಗಿ ಅಥವಾ ರಾಯಚೂರಿಗೆ ವರ್ಗಾವಣೆ ಮಾಡುತ್ತೇನೆ” ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಅವರು ನರಸಾಪುರ ಗ್ರಾಮ ಪಂಚಾಯತಿ ಪಿಡಿಒ ಮುನಿರಾಜು ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

ಕೋಲಾರ ತಾಲೂಕಿನ ನರಸಾಪುರ ಗ್ರಾಮ ಪಂಚಾಯತಿಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ, ರಾಜಕಾಲುವೆ ಒತ್ತುವರಿ ಹಾಗೂ ಕೆರೆಗೆ ಕೊಳಚೆ ನೀರು ಹರಿಯುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಉಪಲೋಕಾಯುಕ್ತರು ಪಂಚಾಯತಿಗೆ  ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಪಂಚಾಯಿತಿ ಕಟ್ಟಡದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಲೋಕಾಯುಕ್ತರ ಮೊಬೈಲ್ ಸಂಖ್ಯೆಯ ಫಲಕ ಹಾಕದಿರುವುದನ್ನು ಕಂಡು ಕೆಂಡಾಮಂಡಲರಾದ ವೀರಪ್ಪ ಅವರು, ಜನರಿಗೆ ಸಮಸ್ಯೆಯಾದರೆ ಯಾರ ಬಳಿ ಹೇಳಿಕೊಳ್ಳಬೇಕು ಎಂದು ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಲ್ಲದೆ,‌ ಪಿಡಿಒ ಮುನಿರಾಜು ಅವರ ಮೊಬೈಲ್ ಫೋನ್ ಪಡೆದು ಹಣಕಾಸಿನ ವಹಿವಾಟುಗಳನ್ನು ತಪಾಸಣೆ ನಡೆಸಿದ್ದಾರೆ. ಅಲ್ಲದೆ, ಪಿಡಿಒ ಮತ್ತು ಅವರ ಪತ್ನಿಯ ಬ್ಯಾಂಕ್ ಸ್ಟೇಟ್‌ಮೆಂಟ್‌ಗಳನ್ನು ಸಲ್ಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.

ನರಸಾಪುರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಸೊಸೈಟಿ ಕಟ್ಟಡದ ಕಾಂಪೌಂಡ್ ನಿರ್ಮಿಸಲು ಅವಕಾಶ ನೀಡಿರುವ ಕಾರಣಕ್ಕೆ ಪಿಡಿಒ, ಸಣ್ಣ ನೀರಾವರಿ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಸಿಟ್ಟಾದ ಅವರು, “ಒತ್ತುವರಿ ಕಣ್ಣಿಗೆ ಕಾಣಿಸುವುದಿಲ್ಲವೇ, ಹಣ ಪಡೆದು ಜೀವನ ನಡೆಸುವುದಷ್ಟೇ ನಿಮ್ಮ ಕೆಲಸವೇ” ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ರೈತ ನಾಯಕ ಸಿ.ಬೈರೇಗೌಡ ಸಹಕಾರ ಭವನದ ಹಿಂಭಾಗದಲ್ಲಿರುವ ಪಶು ಆಸ್ಪತ್ರೆಗೆ ತೆರಳಲು ಸರಿಯಾದ ದಾರಿಯಿಲ್ಲ ಎಂದು ಗ್ರಾಮಸ್ಥರು ದೂರು ಸಲ್ಲಿಸಿದ್ದಾರೆ.

ನರಸಾಪುರ ಕೆರೆಯಲ್ಲಿ ಬೆಳೆದಿರುವ ಜೊಂಡನ್ನು ತೆರವುಗೊಳಿಸುವಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಉಪಲೋಕಾಯುಕ್ತರು ಆದೇಶಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...