ಶ್ರೀನಿವಾಸಪುರ | ಕಡವೆ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ?150ರಿಂದ 200 ಕೆ.ಜಿ. ಮಾಂಸ ವಶಕ್ಕೆ, ಓರ್ವ ಆರೋಪಿ ಬಂಧನ!

Date:

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಹೋಬಳಿಯ ಗುಂಟಪಲ್ಲಿ ಗ್ರಾಮದ ಸಮೀಪ ವನ್ಯಪ್ರಾಣಿಯನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

- Advertisement -

ನವೆಂಬರ್ 2ರ ಬೆಳಗಿನ ಜಾವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಸಿಬ್ಬಂದಿ, ಹುಣಸೆ ಮರದ ಕೆಳಗೆ ಮಾಂಸ ಕತ್ತರಿಸುತ್ತಿದ್ದ ಸ್ಥಳವನ್ನು ಪತ್ತೆಹಚ್ಚಿದ್ದಾರೆ. ಆದರೆ ಸಿಬ್ಬಂದಿ ಬರುವಷ್ಟರಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ಸ್ಥಳದಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಸುಮಾರು 150ರಿಂದ 200 ಕೆ.ಜಿ. ಕಡವೆ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ವಿದ್ಯುತ್ ಶಾಕ್ ನೀಡಿ ಪ್ರಾಣಿಯನ್ನು ಬೇಟೆಯಾಡಿರುವ ಶಂಕೆಯೂ ವ್ಯಕ್ತವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಟಪಲ್ಲಿ ಗ್ರಾಮದ ರಾಘವೇಂದ್ರ ನಾಯಕ ಅಲಿಯಾಸ್ ಸದಾನಂದ ನಾಯಕ ಎಂಬಾತನನ್ನು ಬಂಧಿಸಲಾಗಿದ್ದು, ಸುಬ್ರಮಣಿ ಮತ್ತು ಸತ್ಯಂ ಎಂಬ ಮತ್ತಿಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಎರಡು ಮೊಬೈಲ್ ಫೋನ್‌ಗಳು, ಎರಡು ಮಚ್ಚುಗಳು, ಎರಡು ಚಾಕುಗಳು, ಒಂದು ಸತ್ತುರಿ ಹಾಗೂ ಆರು ಚೀಲಗಳಲ್ಲಿದ್ದ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನು ಓದಿದ್ದೀರಾ..? ಶ್ರೀನಿವಾಸಪುರ | ರೈತರ ಮೇಲೆ ದೌರ್ಜನ್ಯ ಆರೋಪ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ವಲಯ ಅರಣ್ಯಾಧಿಕಾರಿ ಕೆ. ವಾಸುದೇವ ಮೂರ್ತಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ. ಉಳಿದ ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ತನಿಖೆ ಚುರುಕುಗೊಳಿಸಿದೆ. ವನ್ಯಜೀವಿಗಳ ಬೇಟೆಗೆ ಕಡಿವಾಣ ಬೀಳುತ್ತದೆಯೇ? ಎಂಬುದನ್ನು ಕಾದು ನೋಡಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕುಂದಾಪುರ ಪತ್ರಕರ್ತನ ಮೇಲಿನ ಹಲ್ಲೆ ಪ್ರಕರಣ; ವೈದ್ಯರ ವರ್ಗಾವಣೆಗೆ ಆಗ್ರಹಿಸಿ ಉಸ್ತುವಾರಿ ಸಚಿವರಿಗೆ ಮನವಿ

ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸರ್ಜನ್...

ಚಿಕ್ಕಮಗಳೂರು | ನಾಡ ಹಬ್ಬದಲ್ಲೇ ಆಂಗ್ಲ ಭಾಷೆ ಬಳಕೆ: ಕನ್ನಡಿಗರ ಆಕ್ರೋಶ 

ಜಿಲ್ಲೆಯ ಮೂಡಿಗೆರೆ ತಾಲೂಕು ಕೇಂದ್ರದಲ್ಲಿ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು...

ಬಾಗಲಕೋಟೆ | ಜನಗಣತಿ-2027ಕ್ಕೆ ಸಿದ್ಧತೆ: ಜಿಲ್ಲೆಯ 120 ಅಧಿಕಾರಿಗಳಿಗೆ ತರಬೇತಿ

ಜಿಲ್ಲೆಯಾದ್ಯಂತ ಜನಗಣತಿ-2027ರ ಕಾರ್ಯವನ್ನು ಯಶಸ್ವಿಯಾಗಿ ಹಾಗೂ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಜಿಲ್ಲೆಯ...

ಧಾರವಾಡ | ಜನರ ಸಮಸ್ಯೆಗಳಿಗೆ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್

"ಪ್ರಜಾಸೇವಾ ಕಾರ್ಯಕ್ರಮಗಳ ಮೂಲಕ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿಕಾರಿಗಳನ್ನು ಗ್ರಾಮ ಪಂಚಾಯತಿ...