ಶ್ರೀನಿವಾಸಪುರ | ಭಾರತ್ ಜೋಡೋ ಯೂತ್ ನೋಂದಣಿ ಅಭಿಯಾನ

Date:

ಶ್ರೀನಿವಾಸಪುರ ಪಟ್ಟಣದ ಆಜಾದ್ ರಸ್ತೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್. ಅಕ್ಬರ್ ಷರೀಫ್ ಅವರ ನೇತೃತ್ವದಲ್ಲಿ ಅಲ್ಪಸಂಖ್ಯಾತ ಸಮುದಾಯದ 18ರಿಂದ 35 ವರ್ಷದ ಯುವಕರಿಗಾಗಿ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯೂತ್ (BJYS) ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಯಿತು.

- Advertisement -

ಈ ಸಂದರ್ಭದಲ್ಲಿ ಅರ್ಹ ಯುವಕರಿಗೆ ನೋಂದಣಿ ಅರ್ಜಿ ನಮೂನೆಗಳನ್ನು ವಿತರಿಸಿ, ಅಭಿಯಾನದ ಉದ್ದೇಶ ಹಾಗೂ ನೋಂದಣಿ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಲಾಯಿತು.

ಯುವಜನರನ್ನು ಸಂಘಟನೆಯೊಂದಿಗೆ ಸಂಪರ್ಕಿಸುವುದು, ಕಾಂಗ್ರೆಸ್ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಅವರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ನೋಂದಣಿ ಅಭಿಯಾನ ನಡೆಸಲಾಗುತ್ತಿದೆ ಎಂದು ಮುಖಂಡರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಬಗ್ಗೆ ಮಾತನಾಡುವ ಮೊದಲು ತಮ್ಮ ಕುಟುಂಬದ ರಾಜಕೀಯ...

ಮೂರು ತಲೆಮಾರುಗಳಿಂದ ರಾಜಕೀಯ ಅಧಿಕಾರ ಅನುಭವಿಸುತ್ತಿರುವ ದೇವೇಗೌಡರ ಕುಟುಂಬಕ್ಕೆ ಇತರರ ಮೀಸಲಾತಿಯ ಬಗ್ಗೆ ಮಾತನಾಡುವ ನೈತಿಕ ಅರ್ಹತೆ ಇದೆಯೇ? “ಮೀಸಲು ಅನುಕೂಲ ಪಡೆದವರೇ ಮತ್ತೆ ಮತ್ತೆ ಪಡೆಯುತ್ತಿದ್ದಾರೆ, ನನ್ನ ಜನ ಅನಾಥರಾಗಿದ್ದಾರೆ” ಎಂಬ ಕೇಂದ್ರ...

ನೋಟು ನಿಷೇಧಕ್ಕೆ 10 ವರ್ಷ: ಮೋದಿ ಸರ್ಕಾರದ ಒಂದು...

ಒಂದು ದಶಕದ ಆರ್ಥಿಕ ಪರಿಣಾಮಗಳು, ಅಧಿಕೃತ ಅಂಕಿಅಂಶಗಳು ಮತ್ತು ತಜ್ಞರ ಸಂಶೋಧನೆಗಳ ಆಧಾರಿತ ಅಧ್ಯಯನ ಬರಹ. 2016ರ ನವೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ₹500 ಮತ್ತು ₹1,000 ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವ...

150 ವರ್ಷ ಹಳೆಯ ಶಿವಮೊಗ್ಗ ತುಂಗಾ ಸೇತುವೆ ಮರುನಿರ್ಮಾಣಕ್ಕೆ...

ಮಲೆನಾಡಿನ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಬಿ.ಎಚ್. ರಸ್ತೆಯ ತುಂಗಾ ಸೇತುವೆಗೆ ಕೊನೆಗೂ ಹೊಸ ರೂಪ ನೀಡುವ ಕಾಲ ಸನ್ನಿಹಿತವಾಗಿದೆ. ಶತಮಾನಕ್ಕೂ ಹೆಚ್ಚು ಕಾಲದ ಇತಿಹಾಸ ಹೊಂದಿರುವ ಹಳೆಯ ತುಂಗಾ...

ಭಾರತ್ ಜೋಡೋ ಯೂತ್ ಮೂಲಕ ಯುವಜನರಲ್ಲಿ ದೇಶದ ಏಕತೆ, ಸಾಮಾಜಿಕ ಸಾಮರಸ್ಯ, ಸಹಬಾಳ್ವೆ ಹಾಗೂ ವಿವಿಧ ಸಮುದಾಯಗಳ ನಡುವೆ ಸೌಹಾರ್ದತೆಯ ಮನೋಭಾವವನ್ನು ಬೆಳೆಸುವ ಅಗತ್ಯವಿದೆ ಎಂದು ಹೇಳಿದರು. 18ರಿಂದ 35 ವರ್ಷದ ಯುವಕರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕ ಹಿತಾಸಕ್ತಿ ಹಾಗೂ ಸಾಮಾಜಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಅಲ್ಪಸಂಖ್ಯಾತ ಸಮುದಾಯದ 18ರಿಂದ 35 ವರ್ಷದ ಅರ್ಹ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ BJYSಗೆ ನೋಂದಣಿ ಮಾಡಿಕೊಂಡು ಸಂಘಟನೆಯ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಲಾಯಿತು.

ಯುವಜನರು ಶಿಕ್ಷಣ, ಉದ್ಯೋಗ, ಸಾಮಾಜಿಕ ಸೇವೆ ಹಾಗೂ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳಲ್ಲಿ ಜವಾಬ್ದಾರಿಯುತವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ನೋಂದಣಿ ಅಭಿಯಾನದ ಸಂದರ್ಭದಲ್ಲಿ ಯುವಕರಿಗೆ ಅರ್ಜಿ ನಮೂನೆಗಳನ್ನು ವಿತರಿಸಿ, ನೋಂದಣಿ ಕುರಿತು ಅಗತ್ಯ ಮಾಹಿತಿ ನೀಡಲಾಯಿತು.

ಇದನ್ನು ಓದಿದ್ದೀರಾ..?ಚಿಂತಾಮಣಿ | ಪಿಎಲ್‌ಡಿ ಮತ್ತು ಡಿಸಿಸಿ ಬ್ಯಾಂಕ್‌ಗಳ ಪುನಶ್ಚೇತನದಿಂದ ರೈತರಿಗೆ ಹೆಚ್ಚಿನ ಅನುಕೂಲ

ಈ ಸಂದರ್ಭದಲ್ಲಿ ಮೊಹಮ್ಮದ್ ಅಲಿ, ಸರ್ದಾರ್, ಡಿ.ಜೆ. ಫೈರೋಜ್, ಟಿ.ಎಂ.ಬಿ. ಮೊಹಮ್ಮದ್ ಇರ್ಷಾದ್, ಶಫಿ, ಅಕ್ರಮ್ ಪಾಷಾ, ಸಯ್ಯದ್ ಫೈಜ್, ಸಿರಾಜ್ ಪಾಷಾ, ಶಬ್ಬೀರ್ (ನವಾಬ್), ಎಲ್.ಆರ್. ಸರ್ದಾರ್, ಬಾಬು, ತಂಸೀರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶ್ರೀನಿವಾಸಪುರ | ಕಡವೆ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ?150ರಿಂದ 200 ಕೆ.ಜಿ. ಮಾಂಸ ವಶಕ್ಕೆ, ಓರ್ವ ಆರೋಪಿ ಬಂಧನ!

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಹೋಬಳಿಯ ಗುಂಟಪಲ್ಲಿ ಗ್ರಾಮದ ಸಮೀಪ...

ಕೋಲಾರ | ನಾನು ಮುಂದೆ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ‌, ಸಚಿವರಾಗುವುದು ಖಚಿತ : ವರ್ತೂರ್ ಪ್ರಕಾಶ್

ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸುವ...

ಕೋಲಾರ | ಕನ್ನಡ ರಾಜ್ಯೋತ್ಸವವನ್ನು ಮನೆಯ ಹಬ್ಬದಂತೆ ಸಂಭ್ರಮದಿಂದ ಆಚರಿಸೋಣ: ಶಾಸಕ ಕೊತ್ತೂರು ಮಂಜುನಾಥ್

ಕನ್ನಡ ರಾಜ್ಯೋತ್ಸವವನ್ನು ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ, ಮನೆಯ ಹಬ್ಬದಂತೆ...

ಕೋಲಾರ | ಇಂದಿರಾ ಗಾಂಧಿ ಸಾಧನೆಗಳು ದೇಶದ ಅಭಿವೃದ್ಧಿಗೆ ಭದ್ರ ಬುನಾದಿ: ಎಂಎಲ್ಸಿ ಅನಿಲ್ ಕುಮಾರ್

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದ ಅಭಿವೃದ್ಧಿಗೆ ಹಲವು ಮಹತ್ವದ...