ಶ್ರೀನಿವಾಸಪುರ | ಕರ್ನಾಟಕ ಮೌಲಾನಾ ಆಜಾದ್ ಸಾರ್ವಜನಿಕ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸನ್ಮಾನ

Date:

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಶ್ರೀನಿವಾಸಪುರದ ಕರ್ನಾಟಕ ಮೌಲಾನಾ ಆಜಾದ್ ಸಾರ್ವಜನಿಕ ಶಾಲೆಯಲ್ಲಿ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಅಭಿನಂದನಾ ಹಾಗೂ ಸನ್ಮಾನ ಸಮಾರಂಭವನ್ನು ಪೋಷಕರ ಸಮ್ಮುಖದಲ್ಲಿ ಆಯೋಜಿಸಲಾಗಿತ್ತು.

- Advertisement -

ಕಾರ್ಯಕ್ರಮದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮೈಲಾರಪ್ಪ ಮಾತನಾಡಿ, ಶಾಲೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು, ಅವರ ಪೋಷಕರು ಹಾಗೂ ಶಿಕ್ಷಕರನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ಉತ್ತಮ ಫಲಿತಾಂಶದ ಹಿಂದೆ ಶಿಕ್ಷಕರ ಪರಿಶ್ರಮದ ಜತೆಗೆ ಪೋಷಕರ ಪ್ರೋತ್ಸಾಹವೂ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕರ್ನಾಟಕ ಮೌಲಾನಾ ಆಜಾದ್ ಸಾರ್ವಜನಿಕ ಶಾಲೆಯ ಅಗತ್ಯ ಸೌಲಭ್ಯಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ಸರ್ಕಾರದಿಂದ ರೂ.5 ಕೋಟಿ ಅನುದಾನ ಮಂಜೂರಾಗಿದೆ. ಇದರ ಮೂಲಕ ಶಾಲೆಯ ಮೂಲಸೌಕರ್ಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ಮೌಲಾನಾ ಆಜಾದ್ ಸಾರ್ವಜನಿಕ ಶಾಲೆಯನ್ನು ಕೆಪಿಎಸ್ ಶಾಲೆಯ ಮಾದರಿಯಲ್ಲಿ ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿ ವರೆಗೆ ತರಗತಿಗಳನ್ನು ನಡೆಸುವ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಮುಂದಿನ ವರ್ಷ ಪಿಯುಸಿ ತರಗತಿಗಳನ್ನು ಆರಂಭಿಸುವ ಉದ್ದೇಶ ಹೊಂದಿದ್ದು, ವಿದ್ಯಾರ್ಥಿಗಳು ಶಾಲಾ ಶಿಕ್ಷಣದ ನಂತರವೂ ಇದೇ ವ್ಯವಸ್ಥೆಯಲ್ಲಿ ಉನ್ನತ ಶಿಕ್ಷಣದತ್ತ ಸಾಗಲು ಅನುಕೂಲವಾಗುವಂತೆ ಶೈಕ್ಷಣಿಕ ವ್ಯವಸ್ಥೆಯನ್ನು ವಿಸ್ತರಿಸಲಾಗುವುದು ಎಂದರು.

ಇದಲ್ಲದೆ, ಫಿಸಿಕ್ಸ್ ವಾಲಾ ಅಕಾಡೆಮಿ ವತಿಯಿಂದ ವಿದ್ಯಾರ್ಥಿಗಳಿಗೆ ನೀಟ್, ಜೆಇಇ ಹಾಗೂ ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ ನೇರ ಹಾಗೂ ಅಂತರ್ಜಾಲ ಆಧಾರಿತ ತರಗತಿಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮೈಲಾರಪ್ಪ ಹೇಳಿದರು.

ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣ ಮತ್ತು ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ. ವಿದ್ಯಾರ್ಥಿಗಳು ದೊರೆಯುತ್ತಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಸಾಧನೆ ಮಾಡಬೇಕು. ಶಾಲೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ತರಗತಿಗಳನ್ನು ಆರಂಭಿಸುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾತಿ ಪಡೆಯಲು ಪೋಷಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಶಿಕ್ಷಕರು ವಿದ್ಯಾರ್ಥಿಗಳಿಗೆ ಪಠ್ಯ ಶಿಕ್ಷಣದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾದ ತರಬೇತಿ ಹಾಗೂ ಮಾರ್ಗದರ್ಶನ ನೀಡಬೇಕು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಸೂಕ್ತ ಪ್ರೋತ್ಸಾಹ ನೀಡುವ ಮೂಲಕ ಅವರನ್ನು ಉನ್ನತ ಶಿಕ್ಷಣದತ್ತ ಮುನ್ನಡೆಸಬೇಕು ಎಂದು ಶಿಕ್ಷಕರಿಗೆ ಸಲಹೆ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕಿ ಅರುಣಾ ವಿ.ಬಿ. ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶಾಲೆ ಹಾಗೂ ಪೋಷಕರ ಸಹಕಾರ ಅತ್ಯಂತ ಅಗತ್ಯ. ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶ ಗಳಿಸಿರುವಂತೆ ಮುಂದಿನ ಹಂತದ ಶಿಕ್ಷಣದಲ್ಲಿಯೂ ಉತ್ತಮ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಂಗವಾಗಿ ಯುಕೆಜಿ ತರಗತಿಯ ಪುಟಾಣಿ ಮಕ್ಕಳು ಆಕರ್ಷಕ ನೃತ್ಯ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದರು. ಮಕ್ಕಳ ನೃತ್ಯ ಪ್ರದರ್ಶನಕ್ಕೆ ಪೋಷಕರು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿ, ಪುಟಾಣಿ ಮಕ್ಕಳ ಪ್ರತಿಭೆಯನ್ನು ಅಭಿನಂದಿಸಿದರು.

ಇದನ್ನು ಓದಿದ್ದೀರಾ..?ಬಾಗೇಪಲ್ಲಿ | ದ್ವಿಚಕ್ರ ವಾಹನ ಚಾಲನೆ ವೇಳೆ ನಿಯಂತ್ರಣ ತಪ್ಪಿ ಬಸ್ ಚಕ್ರದಡಿ ಸಿಲುಕಿ ಪೌರ ಕಾರ್ಮಿಕ ಸ್ಥಳದಲ್ಲೆ ಸಾವು

ಕಾರ್ಯಕ್ರಮದಲ್ಲಿ ಸರ್ಕಾರಿ ಉರ್ದು ಬಾಲಕರ ಶಾಲೆಯ ಮುಖ್ಯ ಶಿಕ್ಷಕಿ ವೀಣಾ, ಪಟ್ಟಣದ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಶ್ರೀನಿವಾಸ್, ಸಮೂಹ ಸಂಪನ್ಮೂಲ ವ್ಯಕ್ತಿ ನಜೀಮಾ ಸೇರಿದಂತೆ ಕರ್ನಾಟಕ ಮೌಲಾನಾ ಆಜಾದ್ ಸಾರ್ವಜನಿಕ ಶಾಲೆಯ ಶಿಕ್ಷಕರಾದ ಆಸಿಫ್ ಪಾಷಾ, ಶಬಾನಾ ತಾಜ್, ನಾಗಮಣಿ.ಸಿ, ಖಾಲಿದ್, ಹಜೀರಾ, ಶಾಜಿಯಾ ಪರ್ವೀನ್ (ಯುಕೆಜಿ) ಹಾಗೂ ಸಮ್ರೀನ್ ತಾಜ್ (ಎಲ್‌ಕೆಜಿ), ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...