ಶ್ರೀನಿವಾಸಪುರ | ಹಸಿರು ತರಕಾರಿಗಳ ಮಹತ್ವ ಸಾರಿದ ‘ಗ್ರೀನ್ ಡೇ–ವೆಜಿಟೆಬಲ್ಸ್ ಡೇ’ ಆಚರಣೆ

Date:

ಚಿಂತಾಮಣಿ ರಸ್ತೆಯ ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಯಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ವಿದ್ಯಾರ್ಥಿಗಳಿಗಾಗಿ ‘ಗ್ರೀನ್ ಡೇ–ವೆಜಿಟೆಬಲ್ಸ್ ಡೇ’ ಕಾರ್ಯಕ್ರಮವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

- Advertisement -

ಕಾರ್ಯಕ್ರಮದಲ್ಲಿ ಪುಟಾಣಿ ವಿದ್ಯಾರ್ಥಿಗಳು ಹಸಿರು ಬಣ್ಣದ ಉಡುಪು ಧರಿಸಿ, ವಿವಿಧ ಹಸಿರು ತರಕಾರಿಗಳು, ಸೊಪ್ಪುಗಳು, ಸಸಿಗಳು ಹಾಗೂ ಎಲೆಗಳನ್ನು ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು. ಶಾಲಾ ಆವರಣವನ್ನು ಹಸಿರು ಬಣ್ಣದ ಅಲಂಕಾರಗಳಿಂದ ಸಿಂಗರಿಸಲಾಗಿದ್ದು, ಪರಿಸರ ಸಂರಕ್ಷಣೆ, ಪೌಷ್ಟಿಕ ಆಹಾರ ಸೇವನೆ ಹಾಗೂ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಶಾಲೆಯ ಮುಖ್ಯ ಶಿಕ್ಷಕಿ ಅರುಣ ಮಾತನಾಡಿ, ಹಸಿರು ತರಕಾರಿಗಳು ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯಂತ ಅಗತ್ಯವಾಗಿವೆ. ಅವುಗಳಲ್ಲಿ ವಿಟಮಿನ್‌, ಖನಿಜಾಂಶ, ನಾರಿನಾಂಶ ಹಾಗೂ ಅಗತ್ಯ ಪೌಷ್ಟಿಕಾಂಶಗಳು ಸಮೃದ್ಧವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಉತ್ತಮ ಆರೋಗ್ಯ ಕಾಪಾಡಲು ನೆರವಾಗುತ್ತವೆ. ಬಾಲ್ಯದಿಂದಲೇ ಪ್ರತಿದಿನ ಹಸಿರು ತರಕಾರಿಗಳನ್ನು ಸೇವಿಸುವ ಅಭ್ಯಾಸ ರೂಢಿಸಿಕೊಂಡರೆ ಮಕ್ಕಳು ಆರೋಗ್ಯವಂತರಾಗಿ, ಚೈತನ್ಯದಿಂದ ಬೆಳೆಯಲು ಸಾಧ್ಯ ಎಂದು ತಿಳಿಸಿದರು.

ಯುಕೆಜಿ ಶಿಕ್ಷಕಿ ಶಾಜಿಯಾ ಮಕ್ಕಳಿಗೆ ವಿವಿಧ ಹಸಿರು ತರಕಾರಿಗಳನ್ನು ಪರಿಚಯಿಸಿ, ಅವುಗಳ ಪೌಷ್ಟಿಕಾಂಶ, ಆರೋಗ್ಯದ ಪ್ರಯೋಜನಗಳು ಹಾಗೂ ದೈನಂದಿನ ಆಹಾರದಲ್ಲಿ ತರಕಾರಿಗಳ ಅಗತ್ಯತೆಯನ್ನು ವಿವರಿಸಿದರು. ಮಕ್ಕಳು ವಿವಿಧ ತರಕಾರಿಗಳನ್ನು ಗುರುತಿಸಿ, ಅವುಗಳ ಉಪಯೋಗಗಳ ಬಗ್ಗೆ ಉತ್ಸಾಹದಿಂದ ತಿಳಿದುಕೊಂಡರು.

ವಿದ್ಯಾರ್ಥಿಗಳು ಹಾಡು, ವೇಷಭೂಷಣ ಪ್ರದರ್ಶನ ಹಾಗೂ ವಿವಿಧ ಸೃಜನಾತ್ಮಕ ಚಟುವಟಿಕೆಗಳ ಮೂಲಕ ಆರೋಗ್ಯಕ್ಕಾಗಿ ಪ್ರತಿದಿನ ಹಸಿರು ತರಕಾರಿಗಳನ್ನು ಸೇವಿಸೋಣ ಎಂಬ ಸಂದೇಶವನ್ನು ಸಾರಿದರು. ಕಾರ್ಯಕ್ರಮವು ಮಕ್ಕಳಲ್ಲಿ ಆರೋಗ್ಯಕರ ಆಹಾರ ಪದ್ಧತಿ, ಪರಿಸರ ಪ್ರೀತಿ ಹಾಗೂ ಉತ್ತಮ ಜೀವನಶೈಲಿಯ ಬಗ್ಗೆ ಅರಿವು ಮೂಡಿಸುವಲ್ಲಿ ಯಶಸ್ವಿಯಾಯಿತು.

ಇದನ್ನು ಓದಿದ್ದೀರಾ..? ಕೋಲಾರ | ರಸ್ತೆ ಅಭಿವೃದ್ಧಿಗೆ ಶಾಸಕರಿಂದ 80 ಲಕ್ಷ ಅನುದಾನ: ಶೀಘ್ರದಲ್ಲೇ ಗುದ್ದಲಿ ಪೂಜೆ

ಕಾರ್ಯಕ್ರಮದಲ್ಲಿ ಶಿಕ್ಷಕರಾದ ಆಸಿಫ್ ಪಾಷಾ, ಶಬಾನಾ ತಾಜ್, ಬಿಬಿ ಹಾಜಿರಾ, ನಾಗಮಣಿ, ಯುಕೆಜಿ ಶಿಕ್ಷಕಿ ಶಾಜಿಯಾ ಹಾಗೂ ಎಲ್‌ಕೆಜಿ ಶಿಕ್ಷಕಿ ಸಮ್ರೀನ್ ತಾಜ್ ಸೇರಿದಂತೆ ಶಾಲೆಯ ಶಿಕ್ಷಕ-ಶಿಕ್ಷಕಿಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...