ಜನರ ಮನೆ ಬಾಗಿಲಿಗೆ ಸರ್ಕಾರವೇ ಬಂದಿದೆ, ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ಕೊತ್ತೂರು ಮಂಜುನಾಥ್

Date:

ಕೋಲಾರ: ಸರ್ಕಾರಿ ಕಚೇರಿಗಳಿಗೆ ಅಲೆದಾಡಿದರೂ ಜನರ ಕೆಲಸಗಳು ಸಮರ್ಪಕವಾಗಿ ಆಗುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ, ಜನರ ಮನೆ ಬಾಗಿಲಿಗೆ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ರೂಪಿಸಲಾಗಿದೆ. ಸರ್ಕಾರವೇ ಗ್ರಾಮ ಪಂಚಾಯಿತಿ ಮಟ್ಟಕ್ಕೆ ಬಂದಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಎಂದು ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊತ್ತೂರು ಮಂಜುನಾಥ್ ತಿಳಿಸಿದರು.

- Advertisement -

ತಾಲೂಕಿನ ವೇಮಗಲ್ ಹೋಬಳಿಯ ಕ್ಯಾಲನೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಕಚೇರಿಗಳಲ್ಲಿ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ವಿಚಾರವನ್ನು ಜಿಲ್ಲೆಯ ಶಾಸಕರು ಅಧಿವೇಶನ ಮುಗಿದ ಬಳಿಕ ಚರ್ಚಿಸಿದ್ದು, ಜನರಿಗೆ ಕಚೇರಿಗಳ ಅಲೆದಾಟ ತಪ್ಪಿಸಿ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸುವ ಬಗ್ಗೆ ಮುಖ್ಯಮಂತ್ರಿಯವರೂ ಚಿಂತನೆ ನಡೆಸಿ ಈ ಕಾರ್ಯಕ್ರಮ ರೂಪಿಸಿದ್ದಾರೆ. ಜನರು ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡಿದ್ದು, ಐದು ಗ್ಯಾರಂಟಿ ಯೋಜನೆಗಳ ಮೂಲಕ ನೀಡಿದ ಭರವಸೆಗಳನ್ನು ಈಡೇರಿಸಲಾಗಿದೆ. ಶಾಲಾ ಮಕ್ಕಳಿಗೂ ಉಚಿತ ಬಸ್ ಸೇವೆ ಒದಗಿಸಲಾಗಿದೆ. ಇದೀಗ ಪಂಚಾಯಿತಿ ಮಟ್ಟದಲ್ಲೇ ಅಧಿಕಾರಿಗಳು ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಹಾಲಿನ ದರ ಹೆಚ್ಚಳದ ವಿಚಾರದಲ್ಲಿ ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ. ಆದರೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣವಾಗಿದ್ದರೂ ಪ್ರಶ್ನಿಸುತ್ತಿಲ್ಲ. ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ಹಿಂಡಿ ಮತ್ತು ಬೂಸ ಮಾರಾಟಗಾರರು ಏಕಾಏಕಿ ಬೆಲೆ ಹೆಚ್ಚಿಸಿರುವುದು ಗಮನಕ್ಕೆ ಬಂದಿದೆ. ಅಧಿಕಾರಿಗಳು ಕೂಡಲೇ ಪರಿಶೀಲಿಸಿ, ಅಕ್ರಮವಾಗಿ ದರ ಹೆಚ್ಚಿಸುವ ಅಂಗಡಿಗಳ ಪರವಾನಗಿ ರದ್ದುಪಡಿಸುವುದೂ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಶಯದಂತೆ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಹಾಗೂ ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರತಿ ಇಲಾಖೆಯ ಮಳಿಗೆಗಳನ್ನು ಸ್ಥಾಪಿಸಿ ಯೋಜನೆಗಳ ಮಾಹಿತಿ ನೀಡಲಾಗುತ್ತಿದ್ದು, ಮಧ್ಯವರ್ತಿಗಳ ಹಾವಳಿಯಿಲ್ಲದೆ ಸೇವೆ ಒದಗಿಸಲಾಗುತ್ತಿದೆ ಎಂದರು.

ಕ್ಯಾಲನೂರು ಗ್ರಾಮಕ್ಕೆ ಸೇತುವೆಗೆ ₹6 ಕೋಟಿ, ಜಲಜೀವನ್ ಮಿಷನ್ ಯೋಜನೆಗೆ ₹6 ಕೋಟಿ, ಪಾಡಿಗಾನಹಳ್ಳಿಯಿಂದ ಕ್ಯಾಲನೂರಿಗೆ ರಸ್ತೆ ಅಭಿವೃದ್ಧಿಗೆ ₹2.95 ಕೋಟಿ, ತಿಪ್ಪೇನಹಳ್ಳಿ ಮತ್ತು ಕ್ಯಾಲನೂರು ಗ್ರಾಮಗಳ ಒಳರಸ್ತೆಗಳಿಗೆ ₹2 ಕೋಟಿ, ಕ್ಯಾಲನೂರು-ವೇಮಗಲ್-ಸೀತಿ-ಕಾಡಹಳ್ಳಿ ರಸ್ತೆ ದ್ವಿಪಥಗೊಳಿಸಲು ₹14 ಕೋಟಿ ಹಾಗೂ ಪಿಎಲ್‌ಸಿ ಕೇಂದ್ರಕ್ಕೆ ₹4 ಕೋಟಿ ಸೇರಿದಂತೆ ಈ ಭಾಗದ ಅಭಿವೃದ್ಧಿಗೆ ಸುಮಾರು ₹25 ಕೋಟಿ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ಕನಿಷ್ಠ ₹7 ಸಾವಿರದಷ್ಟು ಆರ್ಥಿಕ ನೆರವು ದೊರೆಯುತ್ತಿದ್ದು ಜೊತೆಗೆ ಸರ್ಕಾರ ಇತ್ತಿಚೆಗೆ ಹಾಲು ಉತ್ಪಾದಕರ ಹಿತದೃಷ್ಟಿಯಿಂದ ಹಾಲು ಉತ್ಪಾದಕರಿಗೆ ನೀಡುವ 7 ರೂಪಾಯಿ ಹೆಚ್ಚುವರಿ ಹಣವನ್ನು ವಿರೋಧಿಸುವುದು ಸರಿಯಲ್ಲ ಎಂದರು.

ಅಪರ ಜಿಲ್ಲಾಧಿಕಾರಿ ಎಂ.ಎಸ್. ಮಂಗಳ ಮಾತನಾಡಿ, ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲೇ ಅರ್ಜಿಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ಸಮಸ್ಯೆಗಳಿಗೆ ತಕ್ಷಣ ಹಾಗೂ ಇನ್ನುಳಿದವುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಇಲಾಖೆಗಳ ಸೌಲಭ್ಯಗಳ ಕುರಿತು ಜನರಿಗೆ ಮಾಹಿತಿ ನೀಡಲಾಗುತ್ತಿದೆ ಎಂದರು.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ. ಶಿವಕುಮಾರ್, ತಾಲೂಕು ಅಧ್ಯಕ್ಷ ವೇಮಗಲ್ ಮುನಿಯಪ್ಪ, ವೇಮಗಲ್-ನರಸಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ, ಕೋಮುಲ್ ನಿರ್ದೇಶಕರಾದ ಚಂಜಿಮಲೆ ರಮೇಶ್, ಷಂಷೀರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಕುಡಾ ಅಧ್ಯಕ್ಷ ಹನೀಫ್, ಪ್ರಭಾರಿ ತಹಶೀಲ್ದಾರ್ ನಾಗಮಣಿ, ತಾಪಂ ಇಒ ಮಂಜುನಾಥ್, ವಿವಿಧ ಇಲಾಖೆಗಳ ನಾಮನಿರ್ದೇಶಿತ ಸದಸ್ಯರಾದ ಚೊಕ್ಕಪುರ ಚೌಡಪ್ಪ, ಕುಮಾರ್, ನಾಗರಾಜ್, ವೆಂಕಟರಾಮ್, ಬೈರಂಡಹಳ್ಳಿ ನಾಗೇಶ್, ಜೈದೀಪ್, ಶೇಕ್ ಮಹಮ್ಮದ್ ಬಾಬು, ಕೆಪಿಎಸ್ ಶಾಲೆ ಅಧ್ಯಕ್ಷ ಪ್ರಕಾಶ್, ಗೌರವ ಅಧ್ಯಕ್ಷ ಅನಿಲ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | 47 ಸಾವಿರ ರೈತರಿಗೆ ಬೆಳೆಹಾನಿ ಪರಿಹಾರ: ರೂ. 11.75 ಕೋಟಿ ಬಿಡುಗಡೆಗೆ ಅನುಮೋದನೆ

ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ ಆರಂಭವಾಗಿದ್ದು,...

ಬಾಗಲಕೋಟೆ | ಆಲಮಟ್ಟಿ ನೀರು ಕಾಯ್ದಿರಿಸಲು ಆಗ್ರಹ: ಮೂಲನಿವಾಸಿಗಳ ಮೌನ ಪ್ರತಿಭಟನೆ

ಬೇಸಿಗೆ ಆರಂಭವಾಗುವ ಮುನ್ನವೇ ಕೃಷ್ಣಾ ಮತ್ತು ಘಟಪ್ರಭಾ ನದಿಗಳಲ್ಲಿ ನೀರಿನ ಪ್ರಮಾಣ...

ಧಾರವಾಡ |ಪ್ರತಿ ವಿದ್ಯಾರ್ಥಿಗೂ 60ಕ್ಕೂ ಹೆಚ್ಚು ಅಂಕ, ಪ್ರತಿ ಶಾಲೆಗೂ ಶೇ.100 ಫಲಿತಾಂಶ: ಮಧು ಬಂಗಾರಪ್ಪ ಗುರಿ

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಫಲಿತಾಂಶ ಸುಧಾರಿಸುವುದಷ್ಟೇ ಅಲ್ಲ, ಪ್ರತಿಯೊಬ್ಬ...

ರಾಯಚೂರು | ಮದರಸಾದಲ್ಲಿ ಬಾಲಕನಿಗೆ ಹಲ್ಲೆ; ಶಿಕ್ಷಕ ಬಂಧನ

ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಮದರಸಾ ದಾರುಲ್ ಹುಪ್ಪಾಜ್ ಶಾಲೆಯಲ್ಲಿ...