ಕೋಲಾರ | ಭ್ರೂಣ ಹತ್ಯೆ ತಡೆ ಕಾಯ್ದೆ ಉಲ್ಲಂಘನೆ; ಹೋಪ್ ಹೆಲ್ತ್‌ ಕೇರ್‌ನ ಸ್ಕ್ಯಾನಿಂಗ್‌ ಕೇಂದ್ರ ಜಪ್ತಿ

Date:

ಪ್ರಸವ ಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ತಡೆ ಕಾಯ್ದೆ ಉಲ್ಲಂಘನೆ ಮಾಡಿದ ಆರೋಪದಲ್ಲಿ ಕೋಲಾರದ ಹೋಪ್ ಹೆಲ್ತ್‌ ಕೇರ್‌ನ ಸ್ಕ್ಯಾನಿಂಗ್‌ ಕೇಂದ್ರವನ್ನು ಜಪ್ತಿ ಮಾಡಲಾಗಿದೆ. ಆರೋಗ್ಯ ಇಲಾಖೆಯ ಜಿಲ್ಲಾ ತಪಸಣಾ ಮತ್ತು ಮೇಲ್ವಿಚಾರಣೆ ತಂಡವು ಕೇಂದ್ರವನ್ನು ಜಪ್ತಿ ಮಾಡಿದೆ.

- Advertisement -

ಸೋಮವಾರ ತಂಡವು ಆಸ್ಪತ್ರೆಯ ಮೇಲೆ ದಾಳಿ ನಡೆಸಿದೆ. ಈ ವೇಳೆ, ಸ್ಕ್ಯಾನಿಂಗ್‌ ಕೇಂದ್ರದಲ್ಲಿ ನೋಂದಾಯಿತ ವೈದ್ಯ ಡಾ. ಡೈಸಿ ಯಶವಂತ್ ಅವರು ಕಾರ್ಯ ನಿರ್ವಹಿಸುತ್ತಿಲ್ಲ ಎಂಬುದು ಕಂಡು ಬಂದಿದೆ. ಅಲ್ಲದೆ, ಅರ್ಹತೆ ಇಲ್ಲದ ಶುಶ್ರೂಷಕಿ ವಿಜಯಲಕ್ಷ್ಮಿ ಮತ್ತು ವೈದ್ಯ ಡಾ. ಯಶವಂತ್ ವಿಟ್ಲೆ ಎಂಬವರು ಸ್ಕ್ಯಾನಿಂಗ್ ಮಾಡುತ್ತಿರುವುದನ್ನು ತಂಡವು ಗಮನಿಸಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ನೋಂದಾಯಿತ ವೈದ್ಯರು ಕಾರ್ಯನಿರ್ವಹಿಸದೇ ಇರುವುದು ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ತಡೆ ಕಾಯ್ದೆ (ಪಿಸಿ ಅಂಡ್‌ ಪಿಎನ್‌ಡಿಟಿ) ಉಲ್ಲಂಘನೆ ಮಾಡಿರುವ ಆರೋಪದಲ್ಲಿ ಕೇಂದ್ರವನ್ನು ಜಪ್ತಿ ಮಾಡಲಾಗಿದೆ. ಅಧಿಕಾರಿಗಲು ಕೇಂದ್ರವನ್ನು ಪಂಚನಾಮೆ ಮಾಡಿದ್ದಾರೆ.

ದಾಳಿ ವೇಳೆ, ಸಮಿತಿಯ ಅಧ್ಯಕ್ಷ ಡಾ.ಎಸ್‌.ಚಂದನ್ ಕುಮಾರ್‌, ಡಾ.ರವೀಂದ್ರ ನಾಯಕ್, ಡಾ.ರಾಜೇಂದ್ರ ಹಾಗೂ ರುದ್ರೇಶ್ ಹುನ್ಸಾಳ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...