ಕೊಳ್ಳೇಗಾಲ | ಸ್ವಾಭಿಮಾನದ ಕ್ಷೇತ್ರದಲ್ಲಿ ಬಿಜೆಪಿಗೆ ಹೀನಾಯ ಸೋಲು

Date:

Advertisements
  • 50 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು
  • ಬಿಜೆಪಿ ಅಭ್ಯರ್ಥಿ ಹೋದ ಕಡೆಗಳಲ್ಲೆಲ್ಲ ‘ಗೋ ಬ್ಯಾಕ್‌ ಮಹೇಶ್‌’ ಘೋಷಣೆ

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಅನುಯಾಯಿಗಳು ಮತ್ತು ಅಲ್ಪಸಂಖ್ಯಾತರು ಸೇರಿದಂತೆ ಹಿಂದುಳಿದವರು, ಬುಡಕಟ್ಟು ಜನಾಂಗದವರು, ಆದಿವಾಸಿಗಳು ಹೆಚ್ಚಾಗಿರುವ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ, ಈ ಬಾರಿ ಸ್ವಾಭಿಮಾನದ ಕ್ಷೇತ್ರವಾಗಿ ಬಿಂಬಿತವಾಗಿತ್ತು. ಹಾಗೆಯೇ ಈ ಬಾರಿ ಕೊಳ್ಳೇಗಾಲದಲ್ಲಿ ಸ್ವಾಭಿಮಾನವೇ ಗೆದ್ದಿದೆ ಎನ್ನಲಾಗುತ್ತಿದೆ.

2018ರ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್‌ಪಿ ಗೆದ್ದಿತ್ತು. ಈ ಕ್ಷೇತ್ರದಿಂದ ಎನ್ ಮಹೇಶ್ ಶಾಸಕರಾಗಿದ್ದರು. ದಲಿತರ ನಾಯಕನಾಗಿ ಬಿಂಬಿಸಿಕೊಂಡಿದ್ದ ಎನ್ ಮಹೇಶ್‌ಗೆ ಅಲ್ಲಿನ ಮತದಾರರು ಆಶೀರ್ವಾದ ಮಾಡಿದ್ದರು. ಇದ್ದ ಒಂದೇ ಒಂದು ಬಿಎಸ್‌ಪಿ ಕ್ಷೇತ್ರವನ್ನು ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ವಿಲೀನಗೊಳಿಸಿ ಮಹೇಶ್ ಸಚಿವರೂ ಆಗಿದ್ದರು.

ಸಚಿವರಾದ ಕೆಲವು ಸಮಯದ ಬಳಿಕ ಬಿಎಸ್‌ಪಿಯಿಂದ ಉಚ್ಛಾಟನೆಯಾಗಿ ಬಿಜೆಪಿಯನ್ನು ಸೇರಿದರು. ಈ ಬಾರಿ ಕೊಳ್ಳೇಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಬಾರಿ ಎನ್ ಮಹೇಶ್‌ಗೆ ಮತದಾರರು ಮರುಮತ ಮಾಡಿ ಮಣೆ ಹಾಕುವ ಬದಲಿಗೆ, ʼದಲಿತ ವಿರೋಧಿʼ ನೀತಿ ಅನುಸರಿಸಿದ್ದಾರೆಂದು ಈ ಬಾರಿ ಎಲ್ಲೇ ಚುನಾವಣಾ ಪ್ರಚಾರಕ್ಕೆ ಹೋದರೂ ʼಗೋ ಬ್ಯಾಕ್ ಎನ್ ಮಹೇಶ್ʼ ಎಂಬ ಕೂಗು ಕೇಳಿ ಬರುತ್ತಿತ್ತು. ಈ ಕಾರಣಕ್ಕಾಗಿಯೂ ಕ್ಷೇತ್ರದ ಜನತೆ ಮಹೇಶ್ ಅವರನ್ನು ಮನೆಗೆ ಕಳುಹಿಸಿ ನೂತನ ಕಾಂಗ್ರೆಸ್ ಅಭ್ಯರ್ಥಿ ಎ ಆರ್ ಕೃಷ್ಣಮೂರ್ತಿ ಅವರಿಗೆ ಆಶೀರ್ವಾದ ಮಾಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಹಳೆ ಮೈಸೂರು ಭಾಗದಿಂದ ಆರು ಮಂದಿ ಯುವ ನಾಯಕರು ವಿಧಾನಸಭೆಗೆ

ಎ ಆರ್ ಕೃಷ್ಣಮೂರ್ತಿ ಅವರು ಈ ಹಿಂದೆ ಕೇರಳ ಮತ್ತು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಕೆಲಸ ನಿರ್ವಹಿಸಿದ ಬಿ ರಾಚಯ್ಯ ಅವರ ಪುತ್ರ. ಗೆದ್ದ ಬಳಿಕ ಸುದ್ದಿ ಮಾಧ್ಯಮಗಳಿಗೆ ಪ್ರತಿಕ್ರೀಯೆ ನೀಡಿರುವ ಎ ಆರ್ ಕೃಷ್ಣಮೂರ್ತಿ “ಈ ಮುಂಚೆ ಒಂದೇ ಒಂದು ಮತದಲ್ಲಿ ಸೋತಿದ್ದೆ. ಆದರೆ, ಕ್ಷೇತ್ರದ ಜನತೆ ಈ ಬಾರಿ 50,000ಕ್ಕೂ ಹೆಚ್ಚು ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿದ್ದಾರೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X