ಕೊಳ್ಳೇಗಾಲ | ಬಿಜೆಪಿ ಅಭ್ಯರ್ಥಿ ಎನ್ ಮಹೇಶ್‌ ವಿರುದ್ಧ ಗ್ರಾಮಸ್ಥರ ಆಕ್ರೋಶ

Date:

ಮತ ಕೇಳಲು ಬಂದ ಕೊಳ್ಳೇಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎನ್ ಮಹೇಶ್‌ ವಿರುದ್ಧ ಗ್ರಾಮಸ್ಥರು ಧಿಕ್ಕಾರ ಕೂಗಿರುವ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರಿನ ಗಂಗವಾಡಿ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಲ್ಲದೆ, ʼಗೋ ಬ್ಯಾಕ್‌ ಮಹೇಶ್‌ʼ ಅಭಿಯಾನವೂ ಸದ್ದು ಮಾಡುತ್ತಿದೆ.

- Advertisement -

ಗ್ರಾಮಸ್ಥರು ಎನ್‌ ಮಹೇಶ್‌ ಅವರನ್ನು ಸುತ್ತುವರೆದಿದ್ದು, ʼಕಾಂಗ್ರೆಸ್‌ಗೆ ಜೈ, ಕಾಂಗ್ರೆಸ್‌ಗೆ ಜೈʼ ಎಂಬ ಘೋಷಣೆಗಳನ್ನು ಕೂಗಿದ್ದು, ಮಹೇಶ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಬಾಬಾ ಸಾಹೇಬ್ ಅಂಬೇಡ್ಕರ್ ವಾದಕ್ಕೆ ಬೆಂಕಿ ಇಟ್ಟು, ಸಾವರ್ಕರ್ ಬೆಂಬಲಿಸುವ ಸಮುದಾಯ ದ್ರೋಹಿ ಮಹೇಶ್‌ಗೆ ಈ ಬಾರಿಯ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸೋಣ. ಇದು ದಲಿತರ ಸ್ವಾಭಿಮಾನದ ಪ್ರಶ್ನೆ. ಬಹುಜನ ಚಳವಳಿಯ ದ್ರೋಹಿಗಳಿಗೆ ತಕ್ಕ ಉತ್ತರ ಕೊಡುವುದಕ್ಕೆ ಈ ಚುನಾವಣೆಯೇ ಸಾಕ್ಷಿಯಾಗುವಂತೆ ಮಾಡೋಣ” ಎಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಬರೆದುಕೊಂಡಿದ್ದಾರೆ.

ಕಳೆದ ಬಾರಿ ಗೆಲುವು ಸಾಧಿಸಿದ್ದ ಮಹೇಶ್

2018ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿದ್ದ ಎನ್ ಮಹೇಶ್‌ ಗೆಲುವು ಸಾಧಿಸಿದ್ದರು. ರಾಜ್ಯಾದ್ಯಂತ ಒಂದೇ ಒಂದು ಕ್ಷೇತ್ರದಲ್ಲಿ ಬಿಎಸ್‌ಪಿ ಗೆದ್ದಿತ್ತು. ಬಳಿಕ, ಸಮ್ಮಿಶ್ರ ಸರ್ಕಾರದಲ್ಲಿ ಎನ್ ಮಹೇಶ್ ಸಚಿವರು ಕೂಡ ಆಗಿದ್ದರು. ಪ್ರಸ್ತುತ ಸರ್ಕಾರಕ್ಕೆ ಸೂಕ್ತ ಬೆಂಬಲ ನೀಡದ ಕಾರಣ ಹಾಗೂ ಇತರೆ ಕಾರಣಾಂತರಗಳಿಂದ ಬಿಎಸ್‌ಪಿ ಮಹೇಶ್ ಅವರನ್ನು ಪಕ್ಷದಿಂದ ಉಚ್ಚಾಟಿಸಿತ್ತು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಜನ ವಿರೋಧಿ ಬಿಜೆಪಿ ಸೋಲಿಸಿ, ಜನಪರ ಕಾಂಗ್ರೆಸ್ ಗೆಲ್ಲಿಸೋಣ: ದಸಂಸ

ಒಂದೇ ಕ್ಷೇತ್ರದಲ್ಲಿ ಕಳೆದ ಬಾರಿ ಬಿಎಸ್‌ಪಿ, ಈ ಬಾರಿ ಬಿಜೆಪಿ

ಕಳೆದ ಚುನಾವಣೆಯಲ್ಲಿ ಬಿಎಸ್‌ಪಿಯಿಂದ ಸ್ಪರ್ಧಿಸಿ ಗೆದ್ದಿದ್ದ ಎನ್ ಮಹೇಶ್‌, ಇತ್ತೀಚೆಗೆ ಬಿಜೆಪಿ ಸೇರಿದ್ದರು. ಇದೀಗ, ಅದೇ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ನೀಲಿ ಶಾಲನ್ನು ಕಳಚಿ ಕೇಸರಿ ಶಾಲು ಧರಿಸಿದ ಎನ್. ಮಹೇಶ್ ಪರ ವಿರೋಧದ ನಡುವೆ ಮತಯಾಚನೆ ಮುಂದುವರಿಸಿದ್ದಾರೆ.

ಅವರ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿ ರಾಚಯ್ಯನವರ ಮಗ ಎ.ಆರ್ ಕೃಷ್ಣಮೂರ್ತಿ ಸ್ಪರ್ಧಿಸಿದ್ದಾರೆ. ಮಹೇಶ್‌ ವಿರುದ್ಧ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...