ಉಡುಪಿ | ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಮುಳುಗಿ ಮೃತಪಟ್ಟ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ !

Date:

ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯ ಸಂಪ್ರೆ ಎಂಬಲ್ಲಿ ಸೌಪರ್ಣಿಕಾ ನದಿಯಲ್ಲಿ ಯುವಕನೋರ್ವ ಕೊಚ್ಚಿಕೊಂಡು ಹೋಗಿ ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ಲಭಿಸಿದ್ದು, ತನ್ನ ಬಗ್ಗೆ ಮಾಡುತ್ತಿರುವ ಅಪಪ್ರಚಾರದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಇಬ್ಬರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ಕೊಲ್ಲೂರಿನ ನಟೇಶ್ (36) ಆತ್ಮಹತ್ಯೆ ಮಾಡಿಕೊಂಡವರು. ಇವರು ಆ.7ರಂದು ಸಂಪ್ರೆಯ ಸೌಪರ್ಣಿಕಾ ನದಿಯಲ್ಲಿ ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -

ಈ ವೇಳೆ ನಟೇಶ್ ಸೌಪರ್ಣಿಕಾ ನದಿಯ ದಡದಲ್ಲಿ ನಿಲ್ಲಿಸಿದ್ದ ಕಾರನ್ನು ಮನೆಗೆ ಕೊಂಡೊಯ್ಯಲಾಗಿತ್ತು.. ಆ.8 ರಂದು ಬೆಳಗ್ಗೆ ಮನೆಮಂದಿ ನಟೇಶ್ ರ ಕಾರಿನ ಒಳಗೆ ಪರಿಶೀಲಿಸಿದಾಗ ನಟೇಶ್ ಬಳಸುತ್ತಿದ್ದ ಮೊಬೈಲ್ ಮತ್ತು ಅದರ ಜೊತೆಗೆ ಒಂದು ಚೀಟಿ ಲಭಿಸಿದೆ. ಆ ಚೀಟಿಯಲ್ಲಿ ತನ್ನ ಸಾವಿನ ರಹಸ್ಯ ಮೊಬೈಲ್ ಗ್ಯಾಲರಿಯಲ್ಲಿದೆ ಎಂದು ಬರೆದು ಮೊಬೈಲ್ ಪಾಸ್ ವರ್ಡ್ ಅನ್ನು ಕೂಡಾ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮೊಬೈಲ್ ಅನ್ನು ಪರಿಶೀಲಿಸಿದಾಗ ಸಂತು ಮತ್ತು ನಾಗೇಶ ಯಾನೆ ದಳಿ ನಾಗ ಎಂಬವರು ತನ್ನ ಬಗ್ಗೆ ಅಪ ಪ್ರಚಾರ ಮಾಡುತ್ತಿದ್ದು, ಇದರಿಂದ ಮನನೊಂದು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ನಟೇಶ್ ಮಾಡಿರುವ ವೀಡಿಯೊ ಪತ್ತೆಯಾಗಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂತು ಯಾನೆ ಸಂತೋಷ್ ಮತ್ತು ದಳಿ-ನಾಗ ವಿರುದ್ಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...