ಉಡುಪಿ | ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ವಂಚನೆ; ರಾಜಸ್ಥಾನ ಮೂಲದ ಆರೋಪಿ ಬಂಧನ

Date:

ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್‌ಸೈಟ್ ಅನ್ನು ಹೋಲುವ ನಕಲಿ ವೆಬ್‌ಸೈಟ್ ಸೃಷ್ಠಿಸಿ, ಭಕ್ತರಿಂದ ಮುಂಗಡ ರೂಮ್ ಬುಕಿಂಗ್ ಹೆಸರಿನಲ್ಲಿ ಹಣ ಪಡೆದು ನಕಲಿ ರಶೀದಿಗಳನ್ನು ನೀಡುತ್ತಿದ್ದ ಆನ್‌ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕೊಲ್ಲೂರು ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯವರು ನೀಡಿದ ದೂರಿನ ಮೇರೆಗೆ, ಕಳೆದ ನವೆಂಬರ್‌ 3ರಂದು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದು ಮುಜುರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನಕ್ಕೆ ಸಂಬಂಧಿಸಿದ ಗಂಭೀರ ಮಾಹಿತಿ ತಂತ್ರಜ್ಞಾನ ವಂಚನೆ ಪ್ರಕರಣವಾಗಿರುವುದರಿಂದ, ಕುಂದಾಪುರ ಉಪವಿಭಾಗದ ಮಾನ್ಯ ಪೊಲೀಸ್ ಉಪಾಧೀಕ್ಷಕ ಹೆಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ತನಿಖೆ ಕೈಗೊಳ್ಳಲಾಯಿತು. ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ.ಬಿ ಹಾಗೂ ಕುಂದಾಪುರ ಗ್ರಾಮಾಂತರ ವೃತ್ತದ ಸಿಪಿಐ ಸಂತೋಷ ಎ. ಕಾಯ್ಕಿಣಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ತನಿಖೆಯ ವೇಳೆ ರಾಜಸ್ಥಾನ ರಾಜ್ಯದ ಆಲ್ವಾರ್ ಜಿಲ್ಲೆಯ ತಿಜಾರಾ ತಾಲ್ಲೂಕಿನ ದಾಖಾಪುರಿ ನಿವಾಸಿ ನಾಸೀರ್ ಹುಸೇನ್ (21) ಎಂಬವನು ಈ ಕೃತ್ಯದಲ್ಲಿ ಭಾಗಿಯಾಗಿರುವುದು ಖಚಿತ ಪಡಿಸಿದ ಪೊಲೀಸರು. ಅದರಂತೆ ನಿನ್ನೆ ದಿನ ರಾಜಸ್ಥಾನದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ. ವಂಚನೆಗೆ ಬಳಸಿದ ಲ್ಯಾಪ್‌ಟಾಪ್ ಅನ್ನು ಪೊಲೀಸರು ಪಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಇಂದು ಮಾನ್ಯ ಬೈಂದೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ವಿಶೇಷ ತನಿಖಾ ತಂಡದಲ್ಲಿ ಕೊಲ್ಲೂರು ಪೊಲೀಸ್ ಠಾಣೆಯ ಪಿಎಸ್‌ಐ ವಿನಯ ಎಂ. ಕೋರ್ಲಹಳ್ಳಿ, ಭೀಮಶಂಕರ ಸಿನ್ನೂರ ಸೇರಿದಂತೆ ಕೊಲ್ಲೂರು ಠಾಣೆಯ ನಾಗೇಂದ್ರ, ಗಂಗೊಳ್ಳಿ ಠಾಣೆಯ ರಾಘವೇಂದ್ರ ಶೆಟ್ಟಿ ಹಾಗೂ ಕೃಷ್ಣ ದೇವಾಡಿಗ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...