ಕೋಮುಲ್‌ ಹಗರಣ | ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡರಿಗೆ ಇ.ಡಿ ಶಾಕ್: ಆಸ್ತಿ ಮುಟ್ಟುಗೋಲು

Date:

Advertisements

ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ(ಕೋಮುಲ್‌) ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಕೆಯಾಗಿದ್ದ ಮಾಲೂರು ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಅವರ ಆಸ್ತಿ ಮೇಲೆ ಇಡಿ ದಾಳಿ ನಡೆಸಿದ್ದು, ಆಸಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಇಡಿ ಬೆಂಗಳೂರು ವಲಯ ಈ ಆಸ್ತಿ ಜಪ್ತಿ ಮಾಡಿದೆ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಮಾಹಿತಿ ನೀಡಿದ್ದು, ಕೆ ವೈ ನಂಜೇಗೌಡ ಮತ್ತು ಇತರರಿಗೆ ಸೇರಿದ 1.32 ಕೋಟಿ ರೂ. ಮೊತ್ತದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ಹೇಳಿದೆ.

ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್‌) ನೇಮಕಾತಿ ಹಗರಣ 2023ರ ಕುರಿತು ಇಡಿ ತನಿಖೆಯನ್ನು ನಡೆಸುತ್ತಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಮನಿ ಲಾಡ್ರಿಂಗ್‌ ಪ್ರಕರಣದಡಿ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.

Advertisements

3ನೇ ಬಾರಿಗೆ ಅಧ್ಯಕ್ಷ ಪಟ್ಟ: ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್‌) ಅಧ್ಯಕ್ಷರಾಗಿ 3ನೇ ಬಾರಿಗೆ ಕೆ ವೈ ನಂಜೇಗೌಡ ಆಯ್ಕೆಯಾಗಿದ್ದರು. ಕೋಮುಲ್‌ ನೇಮಕಾತಿ ಹಗರಣದ ಕುರಿತು ರಾಜ್ಯದಲ್ಲಿ ಭಾರೀ ಚರ್ಚೆ ನಡೆದಿತ್ತು.

2024ರ ಜನವರಿಯಲ್ಲಿ ಈ ಹಗರಣದ ತನಿಖೆ ಕೈಗೊಂಡಿದ್ದ ಇ.ಡಿ, ಶಾಸಕ ಕೆ ವೈ ನಂಜೇಗೌಡ ಮನೆಯಲ್ಲಿ ಶೋಧ ಕಾರ್ಯ ನಡೆಸಿತ್ತು. ಈ ದಾಳಿಯ ಬಳಿಕ ಮಾತನಾಡಿದ್ದ ಶಾಸಕರು, “ನನ್ನಂಥ ಸಾಮಾನ್ಯದವನ ಮನೆಗೆ ಇಡಿ ಬಂದಿರುವುದು ನೋವಿನ ಸಂಗತಿಯಾಗಿದೆ. ನಮ್ಮ ಕುಟುಂಬದವರು ಎಲ್ಲ ಮಾಹಿತಿ ಕೊಟ್ಟಿದ್ದೇವೆ” ಎಂದು ಹೇಳಿದ್ದರು.

“ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳಿಂದ ಹೊರಬರುವ ವಿಶ್ವಾಸವಿದೆ. ಅಧಿಕಾರಿಗಳು ಮೂರು ವಿಷಯದ ಕುರಿತು ಪ್ರಸ್ತಾಪ ಮಾಡಿದ್ದರು. ಈ ಬಗ್ಗೆ ನಾವು ಸಮರ್ಪಕ ಉತ್ತರ ಕೊಟ್ಟಿದ್ದೇವೆ. ಮುಂದೆಯೂ ವಿಚಾರಣೆಗೆ ಹಾಜರಾಗುತ್ತೇನೆ” ಎಂದು ತಿಳಿಸಿದ್ದರು.

ಇ.ಡಿ ಪ್ರಕಾರ ಕೋಮುಲ್ ನೇಮಕಾತಿಗಾಗಿ 2023ರ ಡಿಸೆಂಬರ್‌ನಲ್ಲಿ 320 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಯ್ಕೆ ಮಾಡಲಾಯಿತು. ಆಯ್ಕೆಯಾದ 75 ಅಭ್ಯರ್ಥಿಗಳ ಪಟ್ಟಿಯನ್ನು ಕೋಮುಲ್‌ಗೆ ಕಳಿಸಲಾಯಿತು, ಅನುಮೋದನೆ ಸಿಕ್ಕಿತು. ಆದರೆ ಅಭ್ಯರ್ಥಿಗಳ ಫಲಿತಾಂಶಗಳನ್ನು ಪ್ರಕಟಿಸದೇ ಅವರನ್ನು ತರಬೇತಿಗೆ ಕಳಿಸಲಾಗಿದೆ ಎನ್ನಲಾಗಿದೆ.

ಜಾರಿ ನಿರ್ದೇಶನಾಲಯ, ಕೋಮುಲ್ ನೇಮಕಾತಿ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ರಾಜ್ಯಪಾಲರು ಮತ್ತು ಲೋಕಾಯುಕ್ತಕ್ಕೆ ಪತ್ರವನ್ನು ಬರೆದಿತ್ತು. ಮಂಗಳೂರು ವಿಶ್ವವಿದ್ಯಾಲಯ ಈ ನೇಮಕಾತಿಗಾಗಿ ಲಿಖಿತ ಪರೀಕ್ಷೆಯನ್ನು ನಡೆಸಿತ್ತು.

ಕೆ ವೈ ನಂಜೇಗೌಡ ಮತ್ತು ಅವರ ಸಹಚರರ ವಿರುದ್ಧ ಆರೋಪಗಳನ್ನು ಮಾಡಲಾಗಿತ್ತು. ಉದ್ಯೋಗ ನೀಡಲು ಹಣ ಪಡೆಯಲಾಗಿದೆ ಎಂಬುದು ಗಂಭೀರ ಆರೋಪವಾಗಿತ್ತು. ಆದ್ದರಿಂದ ಇ.ಡಿ ಶಾಸಕರ ನಿವಾಸದ ಮೇಲೆ ದಾಳಿಯನ್ನು ಮಾಡಿತ್ತು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ದಲಿತರ ಭೂಮಿ, ವಸತಿ ಹಕ್ಕಿಗಾಗಿ ನಾಳೆ ಧರಣಿ

“ನೇಮಕಗೊಂಡ 75 ಅಭ್ಯರ್ಥಿಗಳ ಹೇಳಿಕೆಯನ್ನು ಇಡಿ ದಾಖಲು ಮಾಡಿಕೊಂಡಿತ್ತು. ಅಭ್ಯರ್ಥಿಗಳು ನೇಮಕಾತಿ ವೇಳೆ ಹಣ ಕೊಟ್ಟಿದ್ದು ಒಪ್ಪಿಕೊಂಡಿದ್ದಾರೆ. ಆದ್ದರಿಂದ ಈ ಕುರಿತು ತನಿಖೆ ಮಾಡಬೇಕು” ಎಂದು ಲೋಕಾಯುಕ್ತರಿಗೆ ಇಡಿ ತಿಳಿಸಿತ್ತು.

“ಕೋಮುಲ್‌ನಲ್ಲಿ 81 ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಗೆ ಶೇ.85 ಮತ್ತು ಸಂದರ್ಶನಕ್ಕೆ ಶೇ.15ರಷ್ಟು ಅಂಕ ನಿಗದಿ ಮಾಡಲಾಗಿತ್ತು. ಆದರೆ ಒಎಂಆರ್‌ ಶೀಟ್‌ಗಳನ್ನು ತಿರುಚಿ ಕೆಲವು ಅಭ್ಯರ್ಥಿಗಳಿಗೆ ಮಾತ್ರ ಅನುಕೂಲ ಮಾಡಿಕೊಟ್ಟು ಅವರಿಂದ ₹30 ಲಕ್ಷದವರೆಗೆ ಹಣ ಪಡೆಯಲಾಗಿದೆ” ಎಂದು ಆರೋಪಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X