ಕೊಪ್ಪಳ | ಸಂಭವನೀಯ ಅತಿವೃಷ್ಟಿ, ಅನಾವೃಷ್ಟಿ ಮುಂಜಾಗೃತಾ ಕ್ರಮದ ಅಣುಕು ಪ್ರದರ್ಶನ

Date:

Advertisements

ಸಂಭವನೀಯ ಅತಿವೃಷ್ಟಿ, ಅನಾವೃಷ್ಟಿಗೆ ಮುಂಜಾಗೃತಾ ಕ್ರಮ ಅನುಸರಿಸುವಂತೆ ಎನ್‌ಡಿಆರ್‌ಎಫ್ ಇನ್‌ಸ್ಪೆಕ್ಟರ್ ಅಜಯ ಕುಮಾರ್ ಸಲಹೆ ನೀಡಿದರು.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ‌ ನಡೆದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬೆಟಾಲಿಯನ್ 10ನೇ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

“ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬೆಟಾಲಿಯನ್ 10ನೇ ತಂಡದಿಂದ ಸಂಭವನೀಯ ವಿಪತ್ತು, ಪ್ರವಾಹ ಸ್ಥಳಗಳಿಗೆ ಆಗಮಿಸಿ ಸಮುದಾಯ ಜಾಗೃತಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಕೊಪ್ಪಳ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ. ಸಂಭವನೀಯ ಅತಿವೃಷ್ಟಿ ಹಾಗೂ ಅನಾವೃಷ್ಟಿಗೆ ಗ್ರಾಮಗಳಲ್ಲಿ ಮುಂಜಾಗೃತಾ ಕ್ರಮಗಳನ್ನು ತಿಳಿದುಕೊಳ್ಳಬೇಕು” ಎಂದರು.

Advertisements
ಅಣುಕು ಪ್ರದರ್ಶನ

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸೆ, ಪ್ರವಾಹ ರಕ್ಷಣೆ, ಪ್ರಕೃತಿ ವಿಕೋಪದಿಂದಾಗುವ ಅನಾಹುತ, ಸೋರಿಕೆ ತಡೆಗಟ್ಟುವಿಕೆ, ಸುನಾಮಿ, ಭೂಕಂಪ, ಅಗ್ನಿ ಅವಘಡ ಹಾಗೂ ಸಿಡಿಲು ಬಡಿತದಿಂದ ರಕ್ಷಣೆ ಸೇರಿದಂತೆ ಕಟ್ಟಡ ಕುಸಿತ, ರಾಸಾಯನಿಕ ಪದಾರ್ಥಗಳಿಂದಾಗುವ ಅನಾಹುತಗಳು ಮತ್ತು ಇನ್ನಿತರ ಅನಾಹುತಗಳಿಂದ ಸಾರ್ವಜನಿಕರು ಯಾವ ರೀತಿ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಎನ್‌ಡಿಆರ್‌ಎಫ್‌ ತಂಡದ ಸದಸ್ಯ ವಜ್ರಚೇತನ ಅವರು ಮಾಹಿತಿ ನೀಡಿದರು. ಎನ್‌ಡಿಆರ್‌ಎಫ್‌ ತಂಡದ ಸದಸ್ಯರು ಹಾಗೂ ವಿದ್ಯಾರ್ಥಿಗಳಿಂದ ಅಣಕು ಪ್ರದರ್ಶನ ನೀಡಿ ಅರಿವು ಮೂಡಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಚಾಕೊಲೇಟ್ ತೋರಿಸಿ 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ

ಲಕ್ಷ್ಮೀದೇವಿ, ಎನ್‌ಡಿಆರ್‌ಎಫ್‌, ಎಎಸ್‌ಐ ಸೋಮ್ ಬಿರ್ ಕುಮಾರ್, ಕಂದಾಯ ಇಲಾಖೆ ಅಧಿಕಾರಿಗಳು, ಶಿಕ್ಷಣ ಇಲಾಖೆ, ಆನೆಗೊಂದಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ‌, ಗ್ರಾಪಂ ಸದಸ್ಯರು, ಸುಶೀಲಾಬಾಯಿ, ಶಾಲಾ ಶಿಕ್ಷಕರು, ಎನ್‌ಡಿಆರ್‌ಎಫ್‌ ತಂಡದ ಸದಸ್ಯರು, ತಾಲೂಕು ಪಂಚಾಯತ್ ಅಧಿಕಾರಿಗಳು, ವಿದ್ಯಾರ್ಥಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X