ಕೊಪ್ಪಳ | ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆದರೆ ಕ್ರಮ: ಡಿಸಿ ಸುರೇಶ ಬಿ ಇಟ್ನಾಳ

Date:

ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆಯುವುದು ಕಂಡು ಬಂದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ ಇಟ್ನಾಳ ಅವರು ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚನೆ ನೀಡಿದರು.

- Advertisement -

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾರ್ಕೋ ಕೋ-ಆಡಿನೇಷನ್ ಸೆಂಟರ್ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, “ಮಾದಕ ವಸ್ತುಗಳ ಉತ್ಪನ್ನ, ಸಾಗಾಟ, ಸಂಗ್ರಹ ಹಾಗೂ ಮಾರಾಟ ಶಿಕ್ಷಾರ್ಹ ಅಪರಾಧವಾಗಿದೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಡಾಬಾ, ಹೋಟೆಲ್, ರೆಸಾರ್ಟ್ಗಳಿಗೆ ಗೌಪ್ಯವಾಗಿ ಭೇಟಿ ನೀಡಿ, ಹಾಗೇನಾದರೂ ಮಾಧಕ ವಸ್ತುಗಳ ಸೇವನೆ, ಮಾರಾಟ ಕಂಡು ಬಂದರೆ ಅವುಗಳ ಮೇಲೆ ಕೇಸು ದಾಖಲಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

“ಜನರು ದುಶ್ಚಟಗಳಿಂದ ದೂರ ಇರಲು ವಿವಿಧ ಇಲಾಖೆಗಳ ಸಹಯೋಗದಲ್ಲಿ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್‌ಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸ್ಥಳಗಳಲ್ಲಿ ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು” ಎಂದರು.

ಇದನ್ನೂ ಓದಿ: ಕೊಪ್ಪಳ | 17ರ ಬಾಲಕಿ ಮೇಲೆ ಗ್ರಾಪಂ ನೌಕರನಿಂದ ಅತ್ಯಾಚಾರ; ಪೋಕ್ಸೊ ದಾಖಲು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ ಮಾತನಾಡಿ, “ಆಸ್ಪತ್ರೆಗಳಲ್ಲಿ ಯಾವ ತರಹದ ಪ್ರಕರಣಗಳು ಬರುತ್ತವೆ ಎನ್ನುವುದರ ಕುರಿತು ವರದಿ ನೀಡಬೇಕು. ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಂದರೆ ತಕ್ಷಣ ಕ್ರಮ ವಹಿಸಬೇಕು” ಎಂದು ಔಷಧ ನಿಯಂತ್ರಣಾಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ನಿರ್ದೆಶನ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಟಿ ಲಿಂಗರಾಜು, ವಾರ್ತಾ ಇಲಾಖೆ ಸಹಾಯಕ ನಿರ್ದೆಶಕ ಸುರೇಶ ಜಿ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...