ಕೊಪ್ಪಳ | ಜ.12ರಂದು ಸೇಂಟ್ ಪಾಲ್ಸ್ ಸಂಸ್ಥೆಯಲ್ಲಿ ಕೃಷಿ ಹಬ್ಬ

Date:

Advertisements

ಕೊಪ್ಪಳ ಜಿಲ್ಲೆಯ ಗಂಗಾವತಿ ಸೇಂಟ್ ಪಾಲ್ಸ್ ಸಂಸ್ಥಯಿಂದ ಜನವರಿ 12ರಂದು ʼಕೃಷಿ ಹಬ್ಬ-2025ʼ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಮಾರಂಭದಲ್ಲಿ ರೈತ ಬಾಂಧವರೇ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ನಗರದ ಸೇಂಟ್‌ ಪಾಲ್ಸ್‌ ಮಹಿಳಾ ಸಂಸ್ಥೆ, ಸೇಂಟ್ ಪಾಲ್ಸ್ ಆಂಗ್ಲ ಭಾಷೆ ಶಾಲೆ, ಸೇಂಟ್ ಪಾಲ್ಸ್ ಡಿಫಾರ್ಮಸಿ ಕಾಲೇಜ್, ಕಾರುಣ್ಯ ಪಿಯು ಕಾಲೇಜ್, ಸೇಂಟ್ ಪಾಲ್ಸ್ ಪ್ಯಾರಾಮೆಡಿಕಲ್ ಕಾಲೇಜ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಪ್ರಸ್ತುತ ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ಯುವಜನರಿಗೆ ಕೃಷಿ ಆಸಕ್ತಿ ಕಡಿಮೆಯಾಗುತ್ತಿದೆ. ಶಿಕ್ಷಣದಲ್ಲಿ ಕೃಷಿಯ ವಿಷಯ ಕುರಿತು ಪಠ್ಯಗಳು ಬರಬೇಕು. ಕಲಿಯುವ ಮಕ್ಕಳಲ್ಲಿ ಕೃಷಿ ಮಣ್ಣಿನ ಫಲವತ್ತತೆ, ಬಿತ್ತನೆ, ಒಕ್ಕಲುಗೊಳ್ಳುವ ಪದ್ದತಿ, ಹೈನುಗಾರಿಕೆ ಹೀಗೆ ಹಲವಾರು ವಿಷಯಗಳನ್ನು ಪಠ್ಯದಲ್ಲಿ ಅಳವಡಿಸಿ ಅದರ ಕುರಿತು ಅರಿವು ಮೂಡಿಸಬೇಕು. ಆ ನಿಟ್ಟಿನಲ್ಲಿ ʼಕೃಷಿ ಸಂತೆʼ ಎಂಬ ವಿನೂತನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ‘ನಿರ್ಮಲ ತುಂಗಭದ್ರಾ ಜಲಜಾಗೃತಿ ಅಭಿಯಾನ’ ಪಾದಯಾತ್ರೆಯಲ್ಲಿ ಶಾಲಾ ಮಕ್ಕಳ ಬಳಕೆ; ಸಾರ್ವಜನಿಕರ ಆಕ್ರೋಶ

Advertisements

“ಕೃಷಿ ಸಂತೆಯಲ್ಲಿ ರೈತರು ಉಪಯೋಗಿಸುವ ವಸ್ತುಗಳು, ತಂತ್ರಜ್ಞಾನಗಳ ಪ್ರದರ್ಶನ ನಡೆಯಲಿದೆ. ಸಂಜೆ ವೇಳೆಗೆ ವಿದ್ಯಾರ್ಥಿಗಳಿಂದ ಕೃಷಿ ವೇಷ ಭೂಷಣ ಕಾರ್ಯಕ್ರಮ ಜರುಗಲಿದ್ದು, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಸಂಜೆ ನಡೆಯುತ್ತದೆ” ಎಂದು ಸೇಂಟ್ ಪಾಲ್ಸ್ ಸಂಸ್ಥೆಯ ಕಾರ್ಯದರ್ಶಿ ಸರ್ವೇಶ ವಸ್ತ್ರದ್ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X